ETV Bharat / state

ಡಿಸಿಇಟಿ 2024: ಜೂನ್ 22ರಂದು ಆಫ್ ಲೈನ್ ಪರೀಕ್ಷೆ, ಈ ಜಿಲ್ಲೆಗಳಲ್ಲಿ ಮಾತ್ರ ನಡೆಯುತ್ತೆ ಎಕ್ಸಾಂ - DCET 2024

ಡಿಸಿಇಟಿ ಪರೀಕ್ಷೆಯನ್ನು ಮೊದಲು ಆನ್​ಲೈನ್​ ಮೂಲಕ ನಡೆಸಲಾಗುವುದು ಎಂದು ಹೇಳಿದ್ದ ಕೆಇಎ ಈಗ ಆಫ್​ ಲೈನ್​ ಮೂಲಕ ಪರೀಕ್ಷೆ ನಡೆಸಲಾಗುವುದೆಂದು ತಿಳಿಸಿದೆ. ಅಷ್ಟೇ ಅಲ್ಲ, ಕೆಲ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದ್ದು, ಇತರೆ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರವನ್ನು ತೆಗೆದುಕೊಂಡ ಅಭ್ಯರ್ಥಿಗಳು ಈ ಜಿಲ್ಲೆಗಳಲ್ಲಿ ಮಾತ್ರ ತಮ್ಮ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಸೂಚಿಸಲಾಗಿದೆ.

OFFLINE EXAM ONLINE EXAM  EXAM CENTER  BENGALURU
ಜೂನ್ 22ರಂದು ಆಫ್ ಲೈನ್ ಪರೀಕ್ಷೆ (ಕೃಪೆ: ETV Bharat (ಸಂಗ್ರಹ ಚಿತ್ರ))
author img

By ETV Bharat Karnataka Team

Published : May 22, 2024, 6:40 PM IST

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಕೋರ್ಸ್​ಗಳಿಗೆ ಪ್ರವೇಶಕ್ಕೆ ಜೂನ್ 22ಕ್ಕೆ ನಿಗದಿಯಾಗಿರುವ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ-2024 ಆನ್​ಲೈನ್ ಬದಲು ಆಫ್ ಲೈನ್ ಮಾದರಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಈ ಪರೀಕ್ಷೆ (ಡಿಸಿಇಟಿ-2024)ಯನ್ನು ಆನ್‌ಲೈನ್ ಮೂಲಕ ನಡೆಸಲಾಗುವುದೆಂದು ಈ ಮುಂಚೆ ತಿಳಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಂದಾಗಿ ಪರೀಕ್ಷೆಯನ್ನು ಆಫ್​ಲೈನ್ ಸ್ವರೂಪದಲ್ಲಿ ಹಿಂದಿನ ವರ್ಷಗಳಲ್ಲಿ ನಡೆಸಿದಂತೆಯೇ ಓಎಂಆರ್ ಉತ್ತರ ಪತ್ರಿಕೆಯ ಮಾದರಿಯಲ್ಲಿ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಪರೀಕ್ಷೆಯನ್ನು ಬಾಗಲಕೋಟೆ, ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಉಡುಪಿ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ನಡೆಸಲಾಗುವುದು. ಡಿಸಿಇಟಿ-2024ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಈ ಮೇಲಿನ ಜಿಲ್ಲೆಗಳಲ್ಲಿ ಒಂದನ್ನು ಆಯ್ಕೆ ಮಾಡಿ ಡಿಸಿಇಟಿ-2024 ಪರೀಕ್ಷೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದ್ದಾರೆ.

ಈ ಮೇಲಿನ ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಜಿಲ್ಲೆಗಳನ್ನು ಪರೀಕ್ಷಾ ಸ್ಥಳವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್​ನಲ್ಲಿ ನಿಗದಿತ ಲಿಂಕ್ ಮೂಲಕ ಮೇ 24ರ ಬೆ.11.00 ರಿಂದ 27ರ ರಾತ್ರಿ 11.59ರೊಳಗೆ ಬದಲಿ ಪರೀಕ್ಷಾ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.

ಈ ಮೇಲೆ ತಿಳಿಸಿರುವ ಜಿಲ್ಲೆಗಳ ಪೈಕಿಯೇ ಯಾವುದಾದರೂ ಒಂದು ಜಿಲ್ಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷಾ ಕೇಂದ್ರದ ಜಿಲ್ಲೆಯನ್ನು ಆಯ್ಕೆ ಮಾಡುವ ಅಗತ್ಯ ಇರುವುದಿಲ್ಲ ಎಂದು ಅವರು ಸೂಚಿಸಿದ್ದಾರೆ.

ಓದಿ: ಉತ್ತರ ಕರ್ನಾಟಕದಲ್ಲಿ ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ ಆ್ಯಂಡ್‌ ಮಷಿನ್‌ ಲರ್ನಿಂಗ್‌ ಕೋರ್ಸ್‌ ಆರಂಭ - AI Course

ETV Bharat Logo

Copyright © 2024 Ushodaya Enterprises Pvt. Ltd., All Rights Reserved.