ETV Bharat / state

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ: ಡಿಸಿಎಂ ಡಿಕೆಶಿ ಸಂತಾಪ - D K Shivakumar condolence - D K SHIVAKUMAR CONDOLENCE

ಪ್ರತಿಭಾವಂತ ನೃತ್ಯ ಕಲಾವಿದೆ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ
ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ (ETV Bharat)
author img

By ETV Bharat Karnataka Team

Published : Jun 30, 2024, 9:05 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಸಾವಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರತಿಭಾವಂತ ನೃತ್ಯ ಕಲಾವಿದೆಯಾಗಿದ್ದ ಹಂಸ ಮೊಯ್ಲಿ ಅವರು ಅತ್ಯಂತ ಚಿಕ್ಕ ವಯಸ್ಸಿಗೆ ನಮ್ಮನ್ನು ಅಗಲಿರುವುದು ಅತ್ಯಂತ ನೋವಿನ ಸಂಗತಿ. ತಂದೆಯವರಂತೆ ಹಂಸ ಅವರು ಸಹ ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಕಲೆಯ ಎಲ್ಲಾ ಆಯಾಮಗಳು ತಲುಪಬೇಕು ಎಂದು ಕನಸು ಕಂಡವರು. ಸಮ ಸಮಾಜದ ಕನಸು ಕಾಣುತ್ತಿದ್ದ ಹಾಗೂ ಜನಪರವಾದ ಆಶಯಗಳನ್ನು ಹೊಂದಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು ಎಂದು ಸ್ಮರಿಸಿದ್ದಾರೆ.

46 ವರ್ಷದ ಹಂಸ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂಬುದನ್ನು ಹಿತೈಷಿಗಳು ಹೇಳಿದ್ದರು. ಆದಷ್ಟು ಬೇಗ ಗುಣಮುಖರಾಗಿ ಬರುತ್ತಾರೆ ಎನ್ನುವ ಭರವಸೆ ಈಗ ಇಲ್ಲವಾಗಿದೆ. ಬೆಳೆದ ಮಕ್ಕಳನ್ನು ಕಣ್ಣ ಮುಂದೆಯೇ ಕಳೆದುಕೊಳ್ಳುವುದು ಅತ್ಯಂತ ನೋವಿನ ಸಂಗತಿ. ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಅವರಿಗೆ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ವಿಯೋಗವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ದೇವರು ಕರುಣಿಸಲಿ. ಹಂಸ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಭರತನಾಟ್ಯ ಪ್ರವೀಣೆಯಾಗಿದ್ದ ಇವರು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದರು. ನಾಟಕಗಳ ನಿರ್ದೇಶನ ಮಾಡಿದ್ದಾರೆ. 2007ರಲ್ಲಿ ತೆರೆಕಂಡ ತಮಿಳು ಸಿನಿಮಾ 'ಶೃಂಗಾರಂ' ನಲ್ಲಿ ನಟಿಸಿದ್ದರು. ಇದು ತಂಜಾವೂರಿನ ದೇವದಾಸಿಯ ಕಥೆಯಾಧಾರಿತ ಸಿನಿಮಾ ಆಗಿತ್ತು. ಹಂಸ ಕೆಲ ತಿಂಗಳಿಂದ ಅನಾರೋಗ್ಯಪೀಡಿತರಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂ.29 ರಾತ್ರಿ ಅವರು ಅಸುನೀಗಿದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ (ಜು.1)ರಂದು ನಡೆಯಲಿದೆ.

ಇದನ್ನೂ ಓದಿ: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ - death News

ETV Bharat Logo

Copyright © 2025 Ushodaya Enterprises Pvt. Ltd., All Rights Reserved.