ETV Bharat / state

ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸ ಮಾಡುತ್ತೇವೆ : ಡಿ ಕೆ ಶಿವಕುಮಾರ್ - DCM D K SHIVAKUMAR

ಬಹಿರಂಗವಾಗಿ ಮಾತನಾಡಿದಂತೆ ಹೈಕಮಾಂಡ್ ಎಚ್ಚರಿಕೆ ನೀಡಿದೆ ಎಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

dcm-d-k-shivakumar
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Jan 18, 2025, 10:43 AM IST

ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎನ್ನುವ ಮೂಲಕ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಹೇಳಿಕೆಗೆ ಡಿಸಿಎಂ ಡಿ‌. ಕೆ ಶಿವಕುಮಾರ್ ತಿರುಗೇಟು ನೀಡಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗನಲ್ಲಿ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆ ಜ. 18 ರಂದು ಪೂರ್ವಭಾವಿ ಸಭೆ ನಡೆಸುತ್ತಿದ್ದೇವೆ. ಇದರಲ್ಲಿ ಸುರ್ಜೇವಾಲಾ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು (ETV Bharat)

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ಇದು ಸರ್ಕಾರದ ಕಾರ್ಯಕ್ರಮ, ಸಿಎಂ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಪಕ್ಷಭೇದ ಮರೆತು ಎಲ್ಲರನ್ನೂ ಇದಕ್ಕೆ ಆಹ್ವಾನಿಸಲಾಗುವುದು ಎಂದರು.

ಜೈಬಾಪೂ, ಜೈಭೀಮ, ಜೈ ಸಂವಿಧಾನ ಎಂಬ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು. ಇದೊಂದು ದೊಡ್ಡ ಇತಿಹಾಸವಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿಲ್ಲ. ಈ ಬಗ್ಗೆ ಗೃಹ ಸಚಿವರು ಪ್ರತಿಕ್ರಿಯೆ ನೀಡುತ್ತಾರೆ ಎಂದರು.

ಕೆಪಿಸಿಸಿ ಅಧ್ಯಕ್ಷತೆ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಸೇರಿದಂತೆ ಯಾರೂ ಕೂಡ ಬಹಿರಂಗವಾಗಿ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಇದರ ಬಗ್ಗೆ ಯಾರೇ ಮಾತನಾಡಿದರೂ ಹೈಕಮಾಂಡ್ ಈ ಬಗ್ಗೆ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ನಮ್ಮ ರಾಷ್ಟ್ರೀಯ ನಾಯಕರು. ಅವರ ಮಾರ್ಗದರ್ಶನದಲ್ಲಿ ನಾವು ಕಾರ್ಯಕರ್ತರಾಗಿ ಮುನ್ನಡೆಯುತ್ತೇವೆ. ಮಹದಾಯಿ ವಿಚಾರವಾಗಿ ನಾವು ಸಚಿವ ಹೆಚ್.ಕೆ. ಪಾಟೀಲ್ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ಈ ಹಿಂದೆ ದೆಹಲಿಯಲ್ಲಿ ಸಭೆ ಮಾಡಿದ್ದೇವೆ. ಪ್ರಧಾನಿಯವರಿಗೆ ಮನವಿ ಮಾಡಿದ್ದೇವೆ. ಸಂಬಂಧಪಟ್ಟ ಸಚಿವರಿಗೆ ಸೂಚನೆ ಕೊಡುವುದಾಗಿ ಪ್ರಧಾನಿ ಹೇಳಿದ್ದಾರೆ. ಮುಂದಿನ ಸಂಸತ್ ಅಧಿವೇಶನದಲ್ಲಿ ಮಹದಾಯಿ ಕುರಿತು ಒತ್ತಡ ತರುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಬಿಜೆಪಿಯ ನಕಲಿ ಗಾಂಧಿ ಎಂಬ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗಾಂಧಿ ಇರೋದು ಒಂದೇ. ನಾವೆಲ್ಲ ಗಾಂಧಿ ವಂಶಸ್ಥರು, ಗಾಂಧಿ ಭಾರತದವರು, ಅದಕ್ಕಾಗಿ ಗಾಂಧಿ ಭಾರತದ ಕಾರ್ಯಕ್ರಮ ಮಾಡುತ್ತಿದ್ದೇವೆ. ಪಕ್ಷ ಮತ್ತು ಸರ್ಕಾರ ಈ ಕಾರ್ಯಕ್ರಮದ ನಿರ್ವಹಣೆ ಹೊತ್ತಿದೆ ಎಂದು ಹೇಳಿದರು.

ಇದನ್ನೂ ಓದಿ : ಮರು ಭೂಮಾಪನ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ : ಡಿಸಿಎಂ ಡಿ.ಕೆ. ಶಿವಕುಮಾರ್ - D K SHIVAKUMAR

ETV Bharat Logo

Copyright © 2025 Ushodaya Enterprises Pvt. Ltd., All Rights Reserved.