ETV Bharat / state

ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲದು: ಡಿ.ಕೆ.ಶಿವಕುಮಾರ್ - Guarantee Schemes - GUARANTEE SCHEMES

ಬಿಜೆಪಿಯವರು ನೂರು ಜನ್ಮ ತಳೆದರೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಜನಸಂಪರ್ಕ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಹೇಳಿದರು.

ಡಿಸಿಎಂ ಡಿ.ಕೆ. ಶಿವಕುಮಾರ್  ಜನಸಂಪರ್ಕ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಪರ್ಕ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಅವರಿಗೆ ಸನ್ಮಾನ (ETV Bharat)
author img

By ETV Bharat Karnataka Team

Published : Aug 14, 2024, 5:47 PM IST

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ ಭಾಷಣ (ETV Bharat)

ಬೆಂಗಳೂರು: "ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟಿಸಿದ ನಂತರ ಸಭೆಯಲ್ಲಿ ಮಾತನಾಡಿದ ಅವರು, "ಇಂದಿರಾ ಗಾಂಧಿ ಅವರು ವೃದ್ಧಾಪ್ಯ, ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ ಯೋಜನೆ ಜಾರಿಗೆ ತಂದರು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ರೈತರ ಪಂಪ್ ಸೆಟ್‌ಗೆ ​10 ಹೆಚ್.ಪಿ ಉಚಿತ ವಿದ್ಯುತ್, ಕೃಷ್ಣ ಅವರ ಕಾಲದಲ್ಲಿ ಸ್ತ್ರೀಶಕ್ತಿ ಸಂಘ ಯೋಜನೆ ಜಾರಿಗೆ ತಂದಿತ್ತು. ಇದರಲ್ಲಿ ಯಾವುದಾದರೂ ಒಂದು ಯೋಜನೆಯನ್ನು ನಿಲ್ಲಿಸಲಾಗಿದೆಯೇ? ಬಡವರಿಗೆ ನಿವೇಶನ, ಮನೆ ನೀಡುವ ಯೋಜನೆ ನಿಂತಿದೆಯೇ?, ಇಲ್ಲ. ಅದೇ ರೀತಿ ಬಿಜೆಪಿಯವರು ನೂರು ಜನ್ಮ ತಳೆದರೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ" ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ನಿಂದ ಜನರ ಬದುಕು ಕಟ್ಟುವ ಕೆಲಸ: "ಪದ್ಮನಾಭನಗರದಲ್ಲಿ ನಮ್ಮ ಕಾರ್ಯಕರ್ತರ ಹುಮ್ಮಸ್ಸು, ಶಕ್ತಿ ಸ್ಫೂರ್ತಿ ನೋಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ನಮ್ಮ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಮಾಡಿದ್ದೇವೆ. ನಮ್ಮ ಈ ಐದು ಗ್ಯಾರಂಟಿ ಯೋಜನೆಗಳ ಜಾರಿ ಬಂದಿದ್ದು ಯಾಕೆ? ಇವುಗಳ ಅವಶ್ಯಕತೆ ಏನು ಎಂಬುದು ಪ್ರಮುಖವಾದ ವಿಚಾರವಾಗಬೇಕು. ಅಧಿಕಾರ ಬರುತ್ತದೆ, ಹೋಗುತ್ತದೆ. ರಾಜಕಾರಣ ಎಂದ ಮೇಲೆ ಗೆಲುವು, ಸೋಲು ಇರುತ್ತದೆ. ಆದರೆ ಕಾಂಗ್ರೆಸ್ ಪಕ್ಷ ಸದಾ ಜನರ ಬದುಕಿನ ಬಗ್ಗೆ ಆಲೋಚಿಸುತ್ತದೆ. ಜನರ ಬದುಕು ಕಟ್ಟುವ ಕೆಲಸ ಮಾಡುತ್ತದೆ. ಬಿಜೆಪಿಯವರು ದೇವರು, ಧರ್ಮ, ಜಾತಿ ಆಧಾರವಾಗಿ, ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ" ಎಂದು ಟೀಕಿಸಿದರು.

"ನಾವು ದೇವರ ಬಳಿ ಹೋಗಿ, ವಿದ್ಯೆ, ಆರೋಗ್ಯ, ನೆಮ್ಮದಿ, ಆರ್ಥಿಕ ಸುಧಾರಣೆ ಬಯಸಿ ಪ್ರಾರ್ಥಿಸುತ್ತೇವೆ. ಇದರಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಾರೆ. ಆದರೆ ನಾವು ನೀವು ದೇವರಲ್ಲಿ ಯಾವುದು ಬೇಕು ಎಂದು ಪ್ರಾರ್ಥನೆ ಮಾಡುತ್ತೀರೋ ಅದನ್ನು ನೀಡಲು ಕಾರ್ಯಕ್ರಮ ರೂಪಿಸುತ್ತೇವೆ. ನಿಮ್ಮ ಮನೆಯ ಜ್ಯೋತಿ ಬೆಳಗಲಿ ಎಂದು 200 ಯೂನಿಟ್​ವರೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದರಿಂದ ಸುಮಾರು 1.50 ಕೋಟಿ ಮನೆಗಳು ವಿದ್ಯುತ್ ಬಿಲ್ ಕಟ್ಟುತ್ತಿಲ್ಲ" ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ ಕೇಂದ್ರ ಉದ್ಘಾಟನೆ ಕಾರ್ಯಕ್ರಮ (ETV Bharat)

ಗೃಹಲಕ್ಷ್ಮಿಯಿಂದ ಅತ್ತೆ ಸೊಸೆ ಜಗಳವಾಡಿದ್ದಾರಾ?: ಬಡ ಕುಟುಂಬದ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹಧನ ನೀಡಲು ಮುಂದಾದಾಗ, ಅತ್ತೆ ಸೊಸೆ ಮಧ್ಯೆ ಜಗಳ ತಂದಿಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡಿದವು. ಯಾರ ಮನೆಯಲ್ಲಾದರೂ ಅತ್ತೆ ಸೊಸೆ ಈ ವಿಚಾರಕ್ಕೆ ಜಗಳ ಆಡಿದ್ದಾರಾ? ಈ ಯೋಜನೆ ಹಣ ಒಂದು ತಿಂಗಳು ಹೆಚ್ಚು ಕಮ್ಮಿಯಾಗಿ ಬಂದಿರಬಹುದು. ಆದರೆ ಕಳೆದ ಒಂದು ವರ್ಷದಲ್ಲಿ ಬಹುತೇಕ ಹಣ ಬಂದಿದೆ. ಇನ್ನು ಅನ್ನಭಾಗ್ಯ ಯೋಜನೆಯಲ್ಲಿ 5 ಕೆ.ಜಿ ಅಕ್ಕಿ, 5 ಕೆ.ಜಿ ಅಕ್ಕಿ ಹಣ ನೀಡುತ್ತಿದ್ದೇವೆ" ಎಂದು ತಿಳಿಸಿದರು.

"ಇನ್ನು ದುಡಿಯುವ ಮಹಿಳೆಯರು ಕೆಲಸಕ್ಕೆ ಹೋಗುವಾಗ ಬಸ್ ಪ್ರಯಾಣ ದರದ ಹೊರೆ ಇಳಿಸಲು ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಇದರಿಂದ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಇದರಿಂದ ಮಹಿಳೆಯರು ದೇವಾಲಯ, ಸಂಬಂಧಿಕರ ಮನೆಗೆ ಹೋಗಲು ಅನುಕೂಲವಾಗಿದೆ. ಇನ್ನು ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇಂತಹ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದಾದರೂ ಒಂದು ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ನೀಡಿದ್ದಾರಾ? ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬೊಮ್ಮಾಯಿ, ಆರ್.ಅಶೋಕ್ ಕೊಟ್ಟಿದ್ದಾರಾ? ಜೆಡಿಎಸ್ ಅವಧಿಯಲ್ಲಿ ನೀಡಿದ್ದಾರೆಯೇ" ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಚಾಮುಂಡಿ ಬೆಟ್ಟದ ದೇವಾಲಯ ಮಹಾರಾಜರಿಗೆ ಸೇರಿದ್ದು: ಶಾಸಕ ಜಿ.ಟಿ.ದೇವೇಗೌಡ - Chamundi Hill Temple Authority

ETV Bharat Logo

Copyright © 2025 Ushodaya Enterprises Pvt. Ltd., All Rights Reserved.