ETV Bharat / state

ಭ್ರಷ್ಟಾಚಾರಿಗಳಿಂದ, ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ಹಮ್ಮಿಕೊಂಡ ಪಾದಯಾತ್ರೆ: ಡಿ.ಕೆ.ಶಿವಕುಮಾರ್​ - D K Shivakumar - D K SHIVAKUMAR

ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಆಯೋಜಿಸಿರುವ ಪಾದಯಾತ್ರೆಗೆ ಪ್ರತಿಯಾಗಿ ಇಂದು ರಾಮನಗರದ ಬಿಡದಿಯಲ್ಲಿ ಕಾಂಗ್ರೆಸ್​ನಿಂದ ಜನಾಂದೋಲನ ಕಾರ್ಯಕ್ರಮ ನಡೆಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ,​ ಜೆಡಿಎಸ್​ ಮತ್ತು ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಡಿ.ಕೆ. ಶಿವಕುಮಾರ್
ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Aug 2, 2024, 9:44 PM IST

Updated : Aug 2, 2024, 10:26 PM IST

ಡಿ.ಕೆ.ಶಿವಕುಮಾರ್​ (ETV Bharat)

ರಾಮನಗರ: ಭ್ರಷ್ಟಾಚಾರಿಗಳಿಂದ, ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ಹಮ್ಮಿಕೊಂಡಿರುವ ಪಾದಯಾತ್ರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರೋಧಿಸಿ ಇಂದು ಬಿಡದಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೀವು ಈ ಪಾದಯಾತ್ರೆ ಹಮ್ಮಿಕೊಳ್ಳದಿದ್ದರೆ, ಜನತಾ ದಳವನ್ನು ಬಿಜೆಪಿ ಜೊತೆ ವಿಲೀನ ಮಾಡದಿದ್ದರೆ, ನಾವು ಈ ಹೋರಾಟ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ಟೀಕಿಸಿದರು.

ಬಿಜೆಪಿ ಹಾಗೂ ಜೆಡಿಎಸ್‌ನವರು ಪಾದಯಾತ್ರೆ ಮೂಲಕ ಇಲ್ಲಿಗೆ ಬರುತ್ತಿದ್ದಾರೆ. ಇಲ್ಲಿಗೆ ಬಂದಾಗ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ 87 ಕೋಟಿ, ಕೃಷಿ ಮಾರುಕಟ್ಟೆಗಳಲ್ಲಿ 47 ಕೋಟಿ ಅಕ್ರಮ ನಡೆದಿದೆ. ಈ ಹಗರಣ ನಡೆದಾಗ ಯಾರು ಮುಖ್ಯಮಂತ್ರಿ, ಯಾರು ಮಂತ್ರಿ, ಯಾರು ನಿಗಮದ ಅಧ್ಯಕ್ಷರಾಗಿದ್ದರು?. ಈ ಬಗ್ಗೆ ನೀವು ಉತ್ತರ ನೀಡಬೇಕು. ನೀವು ಹೇಳದಿದ್ದರೆ ನಾವು ಹೇಳುತ್ತೇವೆ ಎಂದರು.

ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಿಜೆಪಿಯ ವೀರಯ್ಯ ಅವರು 47 ಕೋಟಿ ರೂ. ನುಂಗಿದ್ದಾರೆ. ಈ ಅಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಆತ ಜೈಲು ಸೇರಿದ್ದಾನೆ. ಬಿಜೆಪಿ ಹಾಗೂ ಜೆಡಿಎಸ್‌ನವರು ಈ ಅಕ್ರಮದ ಬಗ್ಗೆ ಯಾಕೆ ಹೋರಾಟ ಮಾಡುತ್ತಿಲ್ಲ?. ಈ ಅಕ್ರಮದ ತನಿಖೆಯನ್ನು ಅವರೇ ಯಾಕೆ ತನಿಖೆ ಮಾಡಿಸಲಿಲ್ಲ?. ಹೀಗೆ ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ದೊಡ್ಡ ಪಟ್ಟಿಯೇ ನಮ್ಮ ಬಳಿ ಇವೆ. ಕುಮಾರಣ್ಣ, ಅಶೋಕಣ್ಣ, ವಿಜಯೇಂದ್ರ, ಅಶ್ವತ್ಥ ನಾರಾಯಣ, ಸಿ.ಟಿ.ರವಿ ನೀವುಗಳು ನಮ್ಮ ಈ ಪ್ರಶ್ನೆಗಳಿಗೆ ಪಾದಯಾತ್ರೆ ವೇಳೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಈ ಪಾದಯಾತ್ರೆ ಹಿಂದೆ ಕಾಂಗ್ರೆಸ್ಸಿಗರ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾನೆ. ವಿಜಯೇಂದ್ರ ನಿನಗೆ ತಾಕತ್ತಿದ್ದರೆ, ಧೈರ್ಯವಿದ್ದರೆ ಕಾಂಗ್ರೆಸ್ ಪಕ್ಷದ ಯಾವನು ಪಾದಯಾತ್ರೆಗೆ ಕುಮ್ಮಕ್ಕು ನೀಡಿದ್ದಾನೆ, ಅವನ ಹೆಸರು ಹೇಳು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ, ನಿಮ್ಮ ತಂದೆ ಈ ಜಿಲ್ಲೆಗೆ ಬಂದು ನನ್ನ ಕರ್ಮಭೂಮಿ, ಪುಣ್ಯ ಭೂಮಿ ಎಂದು ಹೇಳಿ ಇಡೀ ಕುಟುಂಬ ಅಧಿಕಾರ ಅನುಭವಿಸುವಂತೆ ಮಾಡಿದರು. ನಿಮ್ಮ ತಂದೆ ಈ ಜಿಲ್ಲೆಯಿಂದ ಮುಖ್ಯಮಂತ್ರಿ, ಪ್ರಧಾನಮಂತ್ರಿಯಾದರು. ನಿಮ್ಮ ಧರ್ಮಪತ್ನಿ ಇದೇ ಜಿಲ್ಲೆಯಲ್ಲಿ ಶಾಸಕರಾದರು. ನೀವೂ ಈ ಭಾಗದಿಂದ ಸಂಸದನಾಗಿ, ಶಾಸಕನಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದಿರಿ. ಆದರೂ ನಿಮ್ಮ ಪಕ್ಷದ ಬಾವುಟ ಇಲ್ಲದೇ ಈ ಪಾದಯಾತ್ರೆ ಮಾಡುತ್ತಿದ್ದೀರಲ್ಲಾ, ನಿಮಗೆ ಸ್ವಾಭಿಮಾನವೇನಾದರೂ ಇದೆಯೇ ಎಂದು ಪ್ರಶ್ನಿಸಿದರು.

ಕುದುರೆ ಎಷ್ಟೇ ಚೆನ್ನಾಗಿ ರಥ ಓಡಿಸಿದರೂ ಚಾಟಿ ಏಟು ತಪ್ಪುವುದಿಲ್ಲ. ಚುನಾವಣೆಯಲ್ಲಿ ಮೈಸೂರಿನಿಂದ ಕೆಂಗೇರಿವರೆಗೂ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ, ನಿಮ್ಮ ಹೋರಾಟ ನಡೆಯುತ್ತದೆ. ಕೆಲವೆಡೆ ನಾವು ಗೆದ್ದಿದ್ದೇವೆ, ಕೆಲವೆಡೆ ನೀವು ಗೆದ್ದಿದ್ದೀರಿ. ಲೋಕಸಭೆ ಚುನಾವಣೆಯಲ್ಲಿ ನಾನು ಯಾಮಾರಿದೆ, ನನ್ನ ಲೆಕ್ಕಾಚಾರ ವಿಫಲವಾಗಿ ನೀವು ಗೆದ್ದಿದ್ದೀರಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅವರು ಹೇಳಿರುವ ಪಾಠ ಕಲಿಯುತ್ತೇನೆ. ಕುಮಾರಸ್ವಾಮಿ ಮೊನ್ನೆಯಷ್ಟೇ ಮಾಧ್ಯಮಗಳ ಮುಂದೆ ನೀನು ಏನು ಹೇಳಿದ್ದೆ? ಪಾದಯಾತ್ರೆಗೆ ಬೆಂಬಲವಿಲ್ಲ ಎಂದಿದ್ದೆ. ಆದರೆ ಇಲ್ಲಿಯವರೆಗೂ ಇದು ನನ್ನ ಭೂಮಿ, ಇಲ್ಲಿ ನಾನು ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇನೆ, ಬಿಜೆಪಿ ಅಲ್ಲ ಎಂದು ಹೇಳಲು ನಿನಗೆ ಧೈರ್ಯ ಸಾಲುತ್ತಿಲ್ಲ ಅಲ್ಲವೇ ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಅವರೇ, ನೀವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ನನ್ನ ಕುಟುಂಬದ ಆಸ್ತಿಯ ಪಟ್ಟಿ ಕೊಟ್ಟಿರುವುದು ನನಗೆ ಗೊತ್ತಿದೆ. ನನ್ನ ಆಸ್ತಿ ಎಷ್ಟಿದೆ, ಸಿದ್ದರಾಮಯ್ಯ ಅವರ ಆಸ್ತಿ ಎಷ್ಟಿದೆ ಅಂತ ಪಟ್ಟಿ ಕೊಟ್ಟಿದ್ದೀರಿ ಬಹಳ ಸಂತೋಷ. ಇದಕ್ಕೆಲ್ಲಾ ನಾನು ಸಿದ್ಧನಾಗಿದ್ದೇನೆ, ಉತ್ತರ ಕೊಡುತ್ತೇನೆ. ಕುಮಾರಸ್ವಾಮಿ ಅವರಿಗೆ ಒಂದು ಮಾತು ಕೇಳುತ್ತೇನೆ. ನಿಮ್ಮ ತಂದೆ ಈ ಜಾಗಕ್ಕೆ ಬಂದಾಗ ನಿಮ್ಮ ತಂದೆ ಬಳಿ ಎಷ್ಟು ಆಸ್ತಿ ಇತ್ತು, ಇಲ್ಲಿ ಬಂದ ನಂತರ ಎಷ್ಟು ಜಮೀನು ಪಡೆದುಕೊಂಡಿರಿ?. ಯಾರ ಜಮೀನನ್ನು ಪಡೆದುಕೊಂಡಿರಿ?. ಈಗ ಎಷ್ಟು ಎಕರೆ ಆಸ್ತಿಯಾಗಿದೆ?. ಆ ಆಸ್ತಿಗಳು ಯಾರ ಹೆಸರಿಂದ ಯಾರ ಹೆಸರಿಗೆ ವರ್ಗಾವಣೆಯಾಗಿದೆ?. ಮತ್ತೆ ಮರಳಿ ನಿಮ್ಮ ಹೆಸರಿಗೆ ಬಂದಿದ್ದು ಹೇಗೆ?. ನಿಮ್ಮ ಹಾಗೂ ನಿಮ್ಮ ಕುಟುಂಬದವರದ್ದು ಇಲ್ಲಿ ನೂರಾರು ಎಕರೆ, ಕುಂಬಳಗೋಡು ಬಳಿ 200-250 ಎಕರೆ, ದೊಡ್ಡ ಗುಬ್ಬಿ ಹಾಗೂ ಚಿಕ್ಕ ಗುಬ್ಬಿ, ಬೆಂಗಳೂರು ಉತ್ತರದ ಯಲಹಂಕ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ, ಹಾಸನ, ನೆಲಮಂಗಲದಲ್ಲಿ ಎಷ್ಟು ಆಸ್ತಿ ಇದೆ? ಇವುಗಳ ಮೌಲ್ಯ ಎಷ್ಟು? ಎಂದು ಪ್ರಶ್ನಿಸಿದರು.

ಈ ಜನಾಂದೋಲನ ಸಭೆಯನ್ನು ನಾಳೆ ರಾಮನಗರ, ನಾಡಿದ್ದು ಚನ್ನಪಟ್ಟಣ, ಆಚೆ ನಾಡಿದ್ದು ಮದ್ದೂರು, ಆನಂತರ ಮಂಡ್ಯ ಹಾಗೂ ಮೈಸೂರಿನಲ್ಲಿ ಮಾಡಿ ಪ್ರಶ್ನೆ ಕೇಳುತ್ತೇವೆ. ನಾಳೆಯಿಂದ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳೂ ಬರುತ್ತಾರೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ವಂಡರ್ಲಾ ಗೇಟ್ ನಿಂದ ಬಿಡದಿ ತನಕ ಶಾಸಕ ಎಚ್.ಸಿ.ಬಾಲಕೃಷ್ಣ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೈಕ್​ ​ರ್‍ಯಾಲಿ ಮೂಲಕ ಕಾರ್ಯಕ್ರಮ ಆಯೋಜಿಸಿದ್ದ ಸ್ಥಳಕ್ಕೆ ಬಂದರು.

ಇದನ್ನೂ ಓದಿ: ಕುಮಾರಸ್ವಾಮಿ ಅವರದು ಡಬಲ್ ಸ್ಟ್ಯಾಂಡ್ ರಾಜಕಾರಣ: ಸಚಿವ ಚಲುವರಾಯಸ್ವಾಮಿ - Chaluvarayaswamy

Last Updated : Aug 2, 2024, 10:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.