ETV Bharat / state

ಗಾಂಧೀಜಿ ಮೇಲಿನ ಹಕ್ಕನ್ನು ಬಿಜೆಪಿ ತೆಗೆದುಕೊಳ್ಳಲು ಸಾಧ್ಯವಿಲ್ಲ: ಶೆಟ್ಟರ್​ಗೆ ಡಿಕೆಶಿ ಟಾಂಗ್ - D K SHIVAKUMAR

ಮಹಾತ್ಮ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಗೌರವಯುತವಾಗಿ ಆಹ್ವಾನಿಸಿಲ್ಲ ಎಂಬ ಜಗದೀಶ್ ಶೆಟ್ಟರ್ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್​ ತಿರುಗೇಟು ನೀಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್​
ಡಿಸಿಎಂ ಡಿ.ಕೆ.ಶಿವಕುಮಾರ್​ (ETV Bharat)
author img

By ETV Bharat Karnataka Team

Published : Dec 25, 2024, 9:24 PM IST

ಬೆಳಗಾವಿ: ನನ್ನ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು. ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಗೌರವಯುತವಾಗಿ ಆಹ್ವಾನ ಮಾಡಿಲ್ಲ ಎಂಬ ಜಗದೀಶ್ ಶೆಟ್ಟರ್ ಅವರ ಆರೋಪದ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಜಗದೀಶ್ ಶೆಟ್ಟರ್ ಅವರ ಮನೆಯವರೆಗೂ ರತ್ನಗಂಬಳಿ ಹಾಕಿಸೋಣ ಎಂದರು.

"ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಭಾಪತಿಗಳಿಗೆ ಆಹ್ವಾನ ನೀಡಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ. ಆ ಕಾರ್ಯಕ್ರಮ ಬಿಡಿ, ಅವರ ಸರ್ಕಾರ ಇದ್ದಾಗ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಪಾರ್ಥಿವ ಶರೀರವನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡಲು ಅವರಿಂದ ಸಾಧ್ಯವಾಗಿಲ್ಲ. ಅವರ ಬೀಗರಿಗೆ ಸರಿಯಾಗಿ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗಲಿಲ್ಲವಲ್ಲ, ಅದರ ಬಗ್ಗೆ ಮೊದಲು ಮಾತನಾಡಲಿ" ಎಂದು ತಿರುಗೇಟು ನೀಡಿದರು.

ಗಾಂಧಿ ಮೇಲೆ ಪ್ರೀತಿ ಇದ್ದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಕಾರ್ಯಕ್ರಮ ಮಾಡಿದ್ದರೆ 500 ಕೋಟಿ ಖರ್ಚು ಮಾಡಲು ಸಿದ್ಧವಿದ್ದೆವು ಎಂಬ ಶೆಟ್ಟರ್ ಹೇಳಿಕೆ ಬಗ್ಗೆ ಮಾತನಾಡಿ, "ಅವರು ಈಗಲೂ ಮಾಡಲಿ. ನಾವು ಈ ಕಾರ್ಯಕ್ರಮವನ್ನು ಒಂದು ವರ್ಷಗಳ ಕಾಲ ಆಚರಣೆ ಮಾಡುತ್ತೇವೆ. ಅವರು ಕೂಡ ಈ ಕಾರ್ಯಕ್ರಮ ಮಾಡಲಿ ಎಂದು ಮಾಧ್ಯಮಗಳ ಮೂಲಕ ನಮ್ರತೆಯಿಂದ ಜನರ ಪರವಾಗಿ ಮನವಿ ಮಾಡುತ್ತೇನೆ. ಅವರೇ ಮುಂದಾಳತ್ವ ವಹಿಸಿಕೊಂಡು ಕಾರ್ಯಕ್ರಮ ಮಾಡಲಿ, ಅವರ ಹಿಂದೆ ನಿಂತು ನಾವು ಸೇವಕರಂತೆ ಕೆಲಸ ಮಾಡುತ್ತೇವೆ" ಎಂದರು.

ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಹೋಗಿಲ್ಲ ಎಂಬ ವಿಚಾರವಾಗಿ ಮಾತನಾಡಿ, "ನಮ್ಮ ರಾಜ್ಯದಲ್ಲಿ ನಾವು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ತಮ್ಮ ಜವಾಬ್ದಾರಿಯಿಂದ ಕಾರ್ಯಕ್ರಮ ಮಾಡಲಿ. ದೇಶದ ನೋಟಿನಲ್ಲಿ ಗಾಂಧಿ ಅವರ ಚಿತ್ರ ಏಕಿದೆ?. ಅವರಿಗೆ ಗಾಂಧಿ ಬಗ್ಗೆ ಅರಿವಿಲ್ಲವೇ?. ಗಾಂಧಿ ಅವರ ಹಕ್ಕನ್ನು ಬಿಜೆಪಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸವಿಲ್ಲ. ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವುದು ಕಾಂಗ್ರೆಸಿಗರಿಗೆ ಮಾತ್ರ" ಎಂದು ವಾಗ್ದಾಳಿ ನಡೆಸಿದರು.

ಪೊಲೀಸ್ ಆಯುಕ್ತರ ಕಚೇರಿ ಭೇಟಿ ಬಗ್ಗೆ ಕೇಳಿದಾಗ, "ನಾನು ಹಾಗೂ ಗೃಹಮಂತ್ರಿಗಳು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಬಂದಿದ್ದೇವೆ. ಸುಮಾರು 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ವಾಹನಗಳ ನಿಲುಗಡೆ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಿ ಬಂದಿದ್ದೇನೆ" ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ಯಾವಾಗ ಆಗಮಿಸಲಿದ್ದಾರೆ ಎಂಬ ಕುರಿತು ಮಾಹಿತಿ ನೀಡಿ, "ಅವರ ಆಗಮನದ ವಿವರವನ್ನು ನಾವು ಸದ್ಯದಲ್ಲೇ ನೀಡುತ್ತೇವೆ. ಅವರು ಉಳಿದುಕೊಳ್ಳಲು ಸರ್ಕಿಟ್ ಹೌಸ್ ಹಾಗೂ ಬೇರೆ ಕಡೆ ವ್ಯವಸ್ಥೆ ಮಾಡಲಾಗಿದೆ" ಎಂದರು.

ಇದನ್ನೂ ಓದಿ: 'ಗಾಂಧಿ ಭಾರತ' ಹೆಸರಿನಲ್ಲಿ‌ ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.