ETV Bharat / state

ಇದು ಮಂಜುನಾಥ್ ಅವರ ಗೆಲುವು, ಅವರ ಪಕ್ಷಗಳ ಗೆಲುವಲ್ಲ: ಡಿ.ಕೆ.ಶಿವಕುಮಾರ್ - D K Shivakumar

ನನ್ನ ಕ್ಷೇತ್ರದಲ್ಲಿ 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. ಆದರೆ 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಬಂದಿದೆ. ಈ ಫಲಿತಾಂಶದ ಮೂಲಕ ಜನ ಕೊಟ್ಟಿರುವ ಸಂದೇಶ ಅರಿಯುತ್ತೇನೆ. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Jun 4, 2024, 8:50 PM IST

ಬೆಂಗಳೂರು: ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿಂದು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, "ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ" ಎಂದರು.

ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು. ನನ್ನ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

ನನ್ನ ಕ್ಷೇತ್ರದಲ್ಲಿ 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. ಆದರೆ 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಬಂದಿದೆ. ಈ ಫಲಿತಾಂಶದ ಮೂಲಕ ಜನ ಕೊಟ್ಟಿರುವ ಸಂದೇಶ ಅರಿಯುತ್ತೇನೆ. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ. ನಮಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಾಗಿತ್ತು. ಯಾಕೆ ಕಡಿಮೆ ಬಂದಿದೆ ಎಂದು ಚಿಂತನೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿನ ಸೀಟು ನಿರೀಕ್ಷೆ ಮಾಡಿದ್ದೆವು. ಜನ ಯಾವ ವಿಚಾರದಲ್ಲಿ ನಮ್ಮನ್ನು ಒಪ್ಪಿಲ್ಲ ಎಂಬುದನ್ನು ಪರಿಶೀಲಿಸಿ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ಮೊದಲ ಚುನಾವಣೆಯಲ್ಲೇ ಡಾ.ಮಂಜುನಾಥ್​​ಗೆ ಭರ್ಜರಿ ಗೆಲುವು: ಡಾಕ್ಟರ್​ ಹೃದಯ ಬಡಿತಕ್ಕೆ ಮಿಡಿದ ಮತದಾರರು - Bengaluru Rural Lok Sabha

ಮೋದಿ ಅವರ ಜನಪ್ರಿಯತೆ ಕುಗ್ಗಿರುವುದು ಸಾಬೀತಾಗಿದೆ. ಹಿಂದಿ ಭಾಷಿಗರ ಭಾಗದಲ್ಲೂ ಕುಗ್ಗಿರುವುದು ಸ್ಪಷ್ಟವಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಇಲ್ಲ ಎಂಬುದನ್ನು ಎಲ್ಲರೂ ಒಪ್ಪಬೇಕು. ನನ್ನ ಕ್ಷೇತ್ರದಲ್ಲಿ ನನಗೆ ಹಿನ್ನಡೆಯಾಗಿದ್ದಂತೆ ಅಯೋಧ್ಯೆಯಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಳೆದ ಬಾರಿ 303 ಕ್ಷೇತ್ರ ಗೆದ್ದಿದ್ದ ಬಿಜೆಪಿ 243 ಸ್ಥಾನಕ್ಕೆ ಕುಸಿದಿದೆ. ಬಿಜೆಪಿ ನಿಚ್ಚಳ ಬಹುಮತ ಪಡೆದಿಲ್ಲ. ಎನ್​​ಡಿಎ ಕೂಡ ಹೇಳಿಕೊಂಡಿದ್ದ ಸಾಧನೆ ಮಾಡಿಲ್ಲ. ಬೇರೆ ಪಕ್ಷಗಳ ಮೇಲೆ ಅವಲಂಬಿತವಾಗಿವೆ ಎಂದರು.

ಭಾವನೆಗಿಂತ ಬದುಕು ಗೆದ್ದಿದೆ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋಧ್ಯೆಯಲ್ಲೇ ಬಿಜೆಪಿ ಸೋತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಕ್ತ ಭಾರತ ಅಸಾಧ್ಯ ಎಂಬುದು ಸಾಬೀತಾಗಿದೆ: 10 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಹೆಚ್ಚು ಕ್ಷೇತ್ರಗಳನ್ನು ಗೆದ್ದಿದೆ. ಜನರು ಮತ್ತೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ಚುನಾವಣೆ ಮನದಟ್ಟು ಮಾಡಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪರಿಶ್ರಮ ಹೋರಾಟದಿಂದ ಪಕ್ಷ ಚೇತರಿಕೆ ಕಂಡಿದೆ. ಪ್ರಿಯಾಂಕಾ ಗಾಂಧಿ ಅವರ ಕೊಡುಗೆ ಸಾಕಷ್ಟು ಇದೆ. ಕಾಂಗ್ರೆಸ್ ಪಕ್ಷದ ಮತ ಪ್ರಮಾಣ ಕೂಡ ಹೆಚ್ಚಾಗಿದೆ. ಹಳೇ ಮೈಸೂರು ಭಾಗದಲ್ಲಿ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಲೋಕಸಭೆ ಚುನಾವಣೆ ಮತ ಪ್ರಮಾಣ ಕುಸಿದಿದ್ದು, ಮೊದಲಿನಿಂದಲೂ ಈ ರೀತಿ ವ್ಯತ್ಯಾಸ ಕಂಡು ಬಂದಿದೆ. ಎಸ್ ಎಂ ಕೃಷ್ಣ ಅವರ ಸರ್ಕಾರ ಇದ್ದಾಗಲೂ ಹೀಗೆ ಆಗಿತ್ತು. ಅದು ಈ ರಾಜ್ಯದ ರಾಜಕೀಯ ಗುಣ. ಈ ಬಾರಿ ಬದಲಾಗಬಹುದು ಅಂದುಕೊಂಡಿದ್ದೆವು. ಆದರೆ ಆಗಲಿಲ್ಲ ಎಂದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಘಟಾನಾಘಟಿ ನಾಯಕರು; ಹೀಗಿದೆ ಕ್ಷೇತ್ರವಾರು ಫಲಿತಾಂಶ - lok sabha election Results 2024

ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲನ್ನು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾವನೆಗಿಂತ ಬದುಕು ಈ ಚುನಾವಣೆಯಲ್ಲಿ ಗೆದ್ದಿದೆ. ನಮ್ಮ ನಾಯಕರು ಸಭೆ ಮಾಡುತ್ತಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಯಾವಾಗ ಏನುಬೇಕಾದರೂ ನಡೆಯಬಹುದು ಎಂದು ತಿಳಿಸಿದರು.

ಇದನ್ನೂ ಓದಿ: ಸಿಎಂ - ಡಿಸಿಎಂ ತವರಲ್ಲೇ ಸೋಲು, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್​​ಗೆ ಗೆಲುವು: ಸೋಲಿನ ಸೇಡು ತೀರಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ - KARNATAKA LOK SABHA RESULTS

ETV Bharat Logo

Copyright © 2024 Ushodaya Enterprises Pvt. Ltd., All Rights Reserved.