ETV Bharat / state

ಕುಮಾರಸ್ವಾಮಿ ಒಬ್ಬರೇ ಗಂಡಸು, ಮಗನ ಸೋಲಿನ ನಂತರ ಅವರ ಮಾತು ಮಿತಿ ಮೀರಿದೆ: ಡಿಕೆಶಿ - D K Shivakumar - D K SHIVAKUMAR

ಹೆಚ್​.ಡಿ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಡುಗಡೆ ಮಾಡಲಿ. ಅವರ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)
author img

By ETV Bharat Karnataka Team

Published : Aug 10, 2024, 5:41 PM IST

Updated : Aug 10, 2024, 5:59 PM IST

ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ಬೆಂಗಳೂರು: “ಕಳೆದ ಎರಡು ಮೂರು ವರ್ಷಗಳಿಂದ ಕುಮಾರಸ್ವಾಮಿ ಅವರ ಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿಮೀರಿದೆ. ನಾನು ಎಷ್ಟು ದಿನ ಸಹಿಸಲಿ. ಅವರ ಹೇಳಿಕೆಗಳಿಗೆ ನಾನು ಉತ್ತರ ನೀಡಿದ್ದೇನೆ. ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಡುಗಡೆ ಮಾಡಲಿ. ಅವರ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಾಗೂ ನಿಮ್ಮ ನಡುವೆ ವೈಯಕ್ತಿಕ ನಿಂದನೆಗಳು ಹೆಚ್ಚುತ್ತಿವೆಯಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಇದನ್ನು ಆರಂಭಿಸಿದ್ದು ಯಾರು? ಕುಮಾರಸ್ವಾಮಿ ಅವರು ಮೊದಲು ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಸಂಸತ್ ಚುನಾವಣೆ ಸೋತ ಬಳಿಕ ಕುಮಾರಸ್ವಾಮಿ ಏನೆಲ್ಲಾ ಮಾತನಾಡಿದ್ದಾರೆ ಎಂಬುದನ್ನು ಮಾಧ್ಯಮಗಳೇ ತೋರಿಸಲಿ. ಅವರು ಹೇಳಿರುವುದಕ್ಕೆ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ಕಳೆದ ಎರಡು ಮೂರು ವರ್ಷಗಳಿಂದ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕಾರ ಮಾಡಿದ್ದೆ. ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕೂರಲು ಸಾಧ್ಯವೇ? ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ನನ್ನದು ಹೆದರಿ ಕೂರುವ ರಕ್ತವಲ್ಲ” ಎಂದರು.

“ಕುಮಾರಸ್ವಾಮಿ ಅವರು ನನಗೆ ಎಚ್ಚರಿಕೆ ಕೊಟ್ಟಿದ್ದಾರಲ್ಲ. ಇಂತಹ ಬೆದರಿಕೆಗೆ ಈ ಡಿ.ಕೆ. ಶಿವಕುಮಾರ್ ಹೆದರುವುದಿಲ್ಲ. ನನ್ನ ವಿರುದ್ಧ ಇರುವ ದಾಖಲೆ ಗೌಪ್ಯವಾಗಿ ಇರಬಾರದು. ಅದನ್ನು ಬಿಚ್ಚಿಡಲಿ. ಅವರ ಬುಟ್ಟಿಯಲ್ಲಿ ಹಾವಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ನಾನು ವಿಧವೆಯರಿಗೆ ಗನ್ ಪಾಯಿಂಟ್ ನಲ್ಲಿಟ್ಟು ಆಸ್ತಿ ಬರೆಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಾಗಿದ್ದರೆ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ದೂರು ನೀಡಿ ಎಫ್ಐಆರ್ ದಾಖಲಿಸಲಿ” ಎಂದು ಸವಾಲೆಸೆದರು.

“ನಾನು ಕೇವಲ ವ್ಯವಸಾಯದಲ್ಲಿ ಆಸ್ತಿ ಮಾಡಿದ್ದೇನೆ ಎಂದು ಹೇಳುವುದಿಲ್ಲ. ನಾನು ಎಷ್ಟು ರಾಜಕಾರಣಿಯೋ, ಅಷ್ಟೇ ಉದ್ಯಮಿಯೂ ಹೌದು. ನಾನು ಯಾರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿಕೊಂಡಿದ್ದೇನೆ ಎಂದು ಹೇಳಲಿ. ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೇಶ್ವರ್ ಮಾತನಾಡಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥ್ಯಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ. ಇನ್ನು ಮಾರಾಟವಾಗಲು ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿ ಮಾಡುತ್ತೇನೆ” ಎಂದರು.

ಕುಮಾರಸ್ವಾಮಿ ಒಬ್ಬರೇ ಗಂಡಸು: ಗಂಡಸ್ಥನ ಹಾಗೂ ನಪುಂಸಕ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾತನಾಡಿ, "ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ನಾನು ಗಮನಿಸಿಲ್ಲ. ಅವರೋಬ್ಬರೇ ಗಂಡಸು. ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ. ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ. ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು. ನಾನು ಜೈಲಲ್ಲಿ ಇದ್ದಾಗ ಅವರು ಬಂದು ನನ್ನ ನೋಡಿದ್ದರು. ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ” ಎಂದರು ತಿರುಗೇಟು ನೀಡಿದರು.

“ನಾನು ಅವರ ಕುಟುಂಬದಲ್ಲಿ ಅವರ ಸಹೋದರನ ಆಸ್ತಿ ವಿವರ ಕೇಳಿದ್ದೇನೆ ನಿಜ. ಇವರು ಮುಖ್ಯಮಂತ್ರಿಯಾಗಿದ್ದಾಗ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನ ಮೇಲೆ, ನನ್ನ ಸಹೋದರ, ತಂಗಿ, ಪತ್ನಿ ಮೇಲೆ ಅದಿರು ಕಳ್ಳತನದ ಸುಳ್ಳು ಕೇಸ್ ಹಾಕಿಸಿದ್ದರು. ಎಫ್ಐಆರ್ ದಾಖಲಿಸಿದ್ದರು. ಅದೆಲ್ಲವನ್ನು ಮರೆತು ನಾನು ಅವರು ಮುಖ್ಯಮಂತ್ರಿಯಾಗಲು ನೆರವಾಗಿದ್ದೆ. ಆನಂತರ ನಡೆದ ಬೆಳವಣಿಗೆ ಎಲ್ಲರಿಗೂ ಗೊತ್ತಿದೆ. ಅವರು ಸಿಎಂ ಆಗಿದ್ದಾಗ ಪ್ರಾಮಾಣಿಕವಾಗಿ, ನಿಷ್ಠೆಯಿಂದ ಕೆಲಸ ಮಾಡಿದ್ದೆ. ನಾನು ಅವರ ಸುದ್ದಿಗೆ ಹೋಗುತ್ತಿರಲಿಲ್ಲ” ಎಂದು ತಿಳಿಸಿದರು.

ಕುಮಾರಸ್ವಾಮಿ ನನ್ನ ವಿರುದ್ಧ ಎಲ್ಲಾ ಅಸ್ತ್ರ ಪ್ರಯೋಗಿಸಲಿ: “ನಾನು ಪ್ರಧಾನಮಂತ್ರಿ, ಮುಖ್ಯಮಂತ್ರಿಯ ಮಗನಾಗಿ ರಾಜಕೀಯಕ್ಕೆ ಬಂದಿಲ್ಲ. ನಾನು ಬಡವನಲ್ಲದಿದ್ದರೂ ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದವನು. ನನ್ನ ಆಸ್ತಿ ಮಾಹಿತಿ ತೆರೆದ ಪುಸ್ತಕದಂತೆ. ನಾನು ಬದುಕಲು ಸಾಧ್ಯವಾಗದಂತಹ ದಾಖಲೆ ಏನಿದೆಯೋ ಅದನ್ನು ಬಿಚ್ಚಿಡಲಿ. ನಾನು ಅಂತಹ ಮಾಡಬಾರದ ತಪ್ಪು ಏನು ಮಾಡಿದ್ದೇನೆ ತಿಳಿಯಲಿ. ದಾಖಲೆ ಬಿಚ್ಚಿಡಲು ನಿಮ್ಮನ್ನು ತಡೆದಿರುವವರು ಯಾರು? ದಾಖಲೆ ಸಮೇತ ಸದನದಲ್ಲಿ ಚರ್ಚೆಗೆ ಬನ್ನಿ ಎಂದು ನೀವು ಶಾಸಕರಾಗಿದ್ದಾಗಲೇ ನಾನು ಎರಡು ಬಾರಿ ಆಹ್ವಾನ ಕೊಟ್ಟಿದ್ದೇನೆ. ನೀನು ಯಾಕೆ ಬರಲಿಲ್ಲ? ಚರ್ಚೆ ಮಾಡಲಿಲ್ಲ? ಈಗಲೂ ನಿಮ್ಮ ಶಾಸಕರ ಕೈಗೆ ದಾಖಲೆ ಕೊಟ್ಟು ಚರ್ಚೆಗೆ ಕಳಿಸು. ನಾನು ಚರ್ಚೆಗೆ ಸಿದ್ಧನಿದ್ದೇನೆ” ಎಂದು ಸವಾಲು ಹಾಕಿದರು.

“ನೀನು ದೆಹಲಿಯಲ್ಲಿ ನನ್ನ ವಿರುದ್ಧ ಯಾರಿಗೆ ಯಾವ ಪತ್ರ ನೀಡಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ತಂದೆ ಏನೆನು ಬರೆದಿದ್ದಾರೆ ಎಂದು ನನಗೆ ಮಾಹಿತಿ ಇದೆ. ದೆಹಲಿಯಲ್ಲಿ ಏನೆಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ತಿಳಿದಿದೆ. ಅವರ ಸಹೋದರ ಇದ್ದಾನಲ್ಲ ಅಬ್ಬಾಬ್ಬಾ. ಅವನ ಹೆಸರಲ್ಲಿ ಎಷ್ಟು ಸಾವಿರ ಕೋಟಿ ಆಸ್ತಿ ಇದೆ” ಎಂದು ಹೇಳಿದರು.

“ಕುಮಾರಸ್ವಾಮಿ ಅವರು ಯಾವ ಆಧಾರದ ಮೇಲೆ ಹಾಸನದಲ್ಲಿ ನಾನು ಪೆನ್ ಡ್ರೈವ್ ಹಂಚಿದ್ದೇನೆ ಎಂದು ಆರೋಪ ಮಾಡಿದರು?. ನಾನು ಅಂತಹ ಕೆಲಸ ಮಾಡಲು ಮೂರ್ಖನಲ್ಲ. ನಾನು ಅದನ್ನು ಚುನಾವಣೆಗೆ ಬಳಸಿಕೊಳ್ಳುವುದಾದರೆ, ನೇರವಾಗಿಯೇ ಬಳಸಿಕೊಳ್ಳುತ್ತಿದೆ. ಕುಮಾರಸ್ವಾಮಿ ಅವರ ಹೇಳಿಕೆ ಯೂಟರ್ನ್ ಅಲ್ಲವೇ?” ಎಂದು ಟೀಕಿಸಿದರು.

ನನ್ನ ವಿರುದ್ಧ ಯಾವ ಆರೋಪವಿದೆ? ಯಾವ ತನಿಖೆ ನಡೆಯುತ್ತಿದೆ?: ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿಯ ಯಾರ ಮೇಲೂ ಕ್ರಮ ಕೈಗೊಂಡಿಲ್ಲ ಎಂಬ ವಿಚಾರವಾಗಿ ಮಾತನಾಡಿ, “ತನಿಖೆಗಳು ನಡೆಯುತ್ತಿವೆ. ಅವರಿಗೆ ನಾವು ಕೇಳಿದ ಪ್ರಶ್ನೆಗಳಿಗೆ ಅವರು ಇನ್ನು ಉತ್ತರ ನೀಡಿಲ್ಲ. ವಿಜಯೇಂದ್ರ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಹೇಳಿದ್ದಾರೆ. ವಿಜಯೇಂದ್ರ ನನ್ನ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಮಾತನಾಡಲು. ನನ್ನ ಮೇಲೆ ಯಾವ ಪ್ರಕರಣವಿದೆ? ಯಾವುದಾದರೂ ತನಿಖೆ ನನ್ನ ಮೇಲೆ ನಡೆದಿದೆಯೇ? ಹಣ ಪಡೆದು ವರ್ಗಾವಣೆ ಮಾಡಿದ್ದೀನಾ? ಇಡಿಯವರು ನನ್ನ ವಿರುದ್ಧ ಯಾಕೆ ಕೇಸ್ ಹಾಕಿದರು, ನಾನು ಯಾವ ಕಾರಣಕ್ಕೆ ಜೈಲಲ್ಲಿ ಇದ್ದೆ? ಆ ಪ್ರಕರಣ ಏನಾಯ್ತು ಎಂದು ವಿಜಯೇಂದ್ರನಿಗೆ ಮಾಹಿತಿ ಇದೆಯೇ? ನನ್ನ ಮೇಲೆ ಹಾಗಿದ ಇಡಿ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿದೆ. ಮಾಧ್ಯಮಗಳು ನನ್ನ ವಿರುದ್ಧ ಎಷ್ಟೆಲ್ಲಾ ಪ್ರಸಾರ ಮಾಡಿದ್ದೀರಿ. ನಿಮಗೆ ಹಕ್ಕಿದೆ, ಆ ವಿಚಾರ ಬಂದಾಗ ನಿಮ್ಮ ಕರ್ತವ್ಯ ನೀವು ಪ್ರಸಾರ ಮಾಡಿದ್ದೀರಿ” ಎಂದು ಹೇಳಿದರು.

ಇದನ್ನೂ ಓದಿ: ಲೂಟಿ ಮಾಡುವ ಡಿ.ಕೆ. ಶಿವಕುಮಾರ್​ಗೆ ನಾನು ನಾಗರ ಹಾವು ಇದ್ದ ಹಾಗೆ: ಹೆಚ್​.ಡಿ. ಕುಮಾರಸ್ವಾಮಿ - H D Kumaraswamy

Last Updated : Aug 10, 2024, 5:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.