ETV Bharat / state

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್​

ಸಿಎಂ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

DCM D K Shivakumar
ಡಿಸಿಎಂ ಡಿ.ಕೆ.ಶಿವಕುಮಾರ್​ (ETV Bharat)
author img

By ETV Bharat Karnataka Team

Published : Oct 8, 2024, 5:40 PM IST

Updated : Oct 8, 2024, 6:12 PM IST

ರಾಯಚೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು. ಜಿಲ್ಲೆಯ ಸಿಂಧನೂರು ನಗರದಲ್ಲಿಂದು ದಸರಾ ಉತ್ಸವ ಹಿನ್ನೆಲೆಯಲ್ಲಿ ರೈತ ದಸರಾ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ನಮ್ಮ ಸರ್ಕಾರ ಇರುತ್ತದೆ. ಸಿಎಂ ಮುಂದುವರೆಯುತ್ತಾರೆ ಎಂದರು.

ಇದೇ ವೇಳೆ, ಹರಿಯಾಣದಲ್ಲಿ ಕಾಂಗ್ರೆಸ್​ಗೆ ಹಿನ್ನಡೆಯಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹರಿಯಾಣದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಬಗ್ಗೆ ನನಗೆ ಬಹಳ ಆತ್ಮವಿಶ್ವಾಸವಿತ್ತು. ಜನ ತೀರ್ಪು ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ನಾವು ಎಲ್ಲಿ ಎಡವಿದ್ದೀವಿ ಎಂದು ಪರಿಶೀಲಿಸುತ್ತೇವೆ ಎಂದು ಹೇಳಿದರು.

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ- ಡಿ‌.ಕೆ.ಶಿವಕುಮಾರ್: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದ್ದೇವೆ. ಮುಂದೆಯೂ ಕೆಲಸ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಅವರು ಮಾತನಾಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ (ETV Bharat)

ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಮೇಲೆ ನಮಗೆ ವಿಶ್ವಾಸವಿತ್ತು. ಹರಿಯಾಣದಲ್ಲಿ ನಾವು ಗೆಲ್ಲಬೇಕಾಗಿತ್ತು. ಆದರೆ ಮತದಾರರ ತೀರ್ಪೇ ಅಂತಿಮ. ಹರಿಯಾಣದಲ್ಲಿ ನಮಗೆ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಕುರಿತು ಪಕ್ಷದ ನಾಯಕರು ಚರ್ಚೆ ಮಾಡುತ್ತಾರೆ. ನಾವು ಈಗ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದರು.

ಇನ್ನು, ಎಕ್ಸಿಟ್ ಪೋಲನ್ನು‌ ನಾನು ಯಾವತ್ತುೂ ನಂಬಿಲ್ಲ, ಮುಂದೆಯೂ ನಂಬಲ್ಲ ಎಂದು ತಿಳಿಸಿದರು. ಇದೇ ವೇಳೆ, ರಾಜ್ಯದಲ್ಲಿನ ಮೂರು ಉಪಚುನಾವಣೆ‌ ಕ್ಷೇತ್ರಗಳಿಗೆ ಶೀಘ್ರದಲ್ಲೇ ಟಿಕೆಟ್ ಫೈನಲ್ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ರಾಯಚೂರು ರೈತ ದಸರಾ ಉದ್ಘಾಟನೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್​ಗೆ​ ಘೇರಾವ್​ ಹಾಕಲು ಯತ್ನ

Last Updated : Oct 8, 2024, 6:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.