ETV Bharat / state

ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡ್​ಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿ.ಕೆ.ಶಿವಕುಮಾರ್ - D K Shivakumar

ವಿಧಾನ ಪರಿಷತ್ ಟಿಕೆಟ್​ ಹಂಚಿಕೆ ಕುರಿತಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ.

DCM DK Shivakumar
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : May 29, 2024, 8:56 AM IST

ನವದೆಹಲಿ/ಬೆಂಗಳೂರು: ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡ್​ಗೆ ಸಲ್ಲಿಸಿದ್ದೇನೆ. ಈಗಾಗಲೇ ಒಂದು ಸುತ್ತಿನ ಸಭೆ ನಡೆದಿದೆ. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾತನಾಡಿದ ಅವರು, 300ಕ್ಕೂ ಹೆಚ್ಚು ಆಕಾಂಕ್ಷಿಗಳಿರುವ ಕಾರಣ ಒಂದಿಷ್ಟು ಜನರಿಗೆ ಅವಕಾಶ ನೀಡಲಾಗಿದೆ. ಎಲ್ಲಾ ವರ್ಗದವರಿಗೂ ಈ ಬಾರಿ ಅವಕಾಶ ಮಾಡಿಕೊಡಲು ಸಾಧ್ಯವಾಗಿಲ್ಲ ಎಂದರು.

ಪ್ರಾಥಮಿಕವಾಗಿ ಒಂದಿಷ್ಟು ಹೆಸರುಗಳನ್ನು ನಾವು ಸೂಚಿಸಿದ್ದೇವೆ. ಸಚಿವರು, ಎಐಸಿಸಿ ಕಾರ್ಯದರ್ಶಿಗಳು ತಮ್ಮ ಆಯ್ಕೆಗಳನ್ನು ಶಿಫಾರಸು ಮಾಡಿದ್ದಾರೆ. ಮುಂದಿನ ಎರಡು ವರ್ಷಗಳ ನಂತರ ಮತ್ತೊಮ್ಮೆ ಇದೇ ರೀತಿ ಅವಕಾಶ ಬರುವ ಕಾರಣ ಅವರಿಗೆಲ್ಲ ಮುಂದಿನ ಬಾರಿ ಸ್ಥಾನ ನೀಡಲಾಗುತ್ತದೆ. ಈಗ ಏಳರಿಂದ-ಎಂಟು ಮಂದಿಗೆ ಅವಕಾಶ ಮಾಡಿಕೊಡಲಾಗುವುದು. ಪಕ್ಷ ಸಂಘಟನೆಗೆ ದುಡಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪಕ್ಷ ಏನು ಹೇಳುತ್ತದೋ ಅದರಂತೆ ಕೇಳಬೇಕು. ನಮ್ಮ ಪಟ್ಟಿಯನ್ನು ನಾವು ಸಲ್ಲಿಸಿದ್ದೇವೆ. ಹೈಕಮಾಂಡ್ ಎಐಸಿಸಿ ಕಾರ್ಯದರ್ಶಿಗಳ ಬಳಿಯೂ ಪಟ್ಟಿ ತೆಗೆದುಕೊಳ್ಳುತ್ತದೆ. ಚುನಾವಣೆ ಸಮಯದಲ್ಲಿ ಕೆಲಸ ಮಾಡಿದವರು ಯಾರು, ಅವರ ಹಿನ್ನೆಲೆ, ತ್ಯಾಗ, ಶ್ರಮಪಟ್ಟಿರುವರ ಹೆಸರು ಹೈಕಮಾಂಡ್​​ಗೆ ಸಲ್ಲಿಕೆಯಾಗುತ್ತದೆ. ಹಿರಿಯರು, ಯುವಕರು ಸೇರಿದ ಸಮತೋಲಿತ ಪಟ್ಟಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಕುಟುಂಬದವರಿಗೆ ಬೇಡ ಕಾರ್ಯಕರ್ತರಿಗೆ ನೀಡಿ ಎನ್ನುವ ಮಾತು ಕೇಳಿಬರುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಯಾವ ಕುಟುಂಬದವರಿಗೂ ಇಲ್ಲ. ಶಾಸಕ ಸ್ಥಾನ ಬಿಟ್ಟು ಕೊಟ್ಟ ಕಾರಣಕ್ಕೆ, ಒಂದು ಸ್ಥಾನಕ್ಕೆ ಮಾತ್ರ ಈ ಮೊದಲು ಮಾತು ಕೊಟ್ಟಂತೆ ನೀಡಲಾಗುವುದು ಎಂದರು.

ಯತೀಂದ್ರ ಅವರಿಗೆ ಅವಕಾಶವಿದೆಯೇ ಎಂಬ ಪ್ರಶ್ನೆಗೆ, ನಾವು ಕೆಲವರಿಗೆ ಮಾತು ಕೊಟ್ಟಿದ್ದೇವೆ. ಆ ಮಾತಿನಂತೆ ಕೆಲವು ಸಂದರ್ಭದಲ್ಲಿ ನಡೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ವಾಲ್ಮೀಕಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿ, ಈ ವಿಚಾರವಾಗಿ ತನಿಖೆ ನಡೆಸಲು ಈಗಾಗಲೇ ಸಿಎಂ ಮತ್ತು ಗೃಹ ಸಚಿವರು ಸೂಚಿಸಿದ್ದಾರೆ. ಅತ್ಯಂತ ಕೂಲಂಕಷವಾಗಿ ತನಿಖೆ ನಡೆಸಲಾಗುವುದು. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.

ಮೇ 30ರಂದು ಪ್ರಧಾನಿ ಮೋದಿ ಅವರ ಕನ್ಯಾಕುಮಾರಿ ಭೇಟಿ ಬಗ್ಗೆ ಪ್ರತಿಕ್ರಿಯಿಸುತ್ತಾ, "ಧರ್ಮ, ನಂಬಿಕೆ, ಪೂಜೆ, ಪುನಸ್ಕಾರ ಎಲ್ಲವೂ ವೈಯಕ್ತಿಕ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಶಾಂತಿ ಹಾಗೂ ಹೆಚ್ಚಿನ ಶಕ್ತಿ ಸಂಪಾದಿಸಲು ಅವರವರ ಕೆಲಸ ಮಾಡುತ್ತಾರೆ. ಇದಕ್ಕೆಲ್ಲಾ ನಾವೇಕೆ ಮೂಗು ತೂರಿಸಬೇಕು? ಎಂದರು.

ಇದನ್ನೂಓದಿ: ಬಿತ್ತನೆ ಬೀಜ ಮಾರಾಟ ದರ ಏರಿಕೆ: ಕಾರಣ ನೀಡಿದ ಸಿಎಂ ಸಿದ್ದರಾಮಯ್ಯ - Seeds price hike

ETV Bharat Logo

Copyright © 2024 Ushodaya Enterprises Pvt. Ltd., All Rights Reserved.