ETV Bharat / state

ದೇವೇಗೌಡರ ಕುಟುಂಬದವರು ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ?: ಡಿ ಕೆ ಶಿವಕುಮಾರ್ ಪ್ರಶ್ನೆ

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ದೇವೇಗೌಡರ ಟೀಕೆ ಕುರಿತು ಮಾತನಾಡಿದ್ದಾರೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ,ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

DCM d. K Shivakumar
ಡಿಸಿಎಂ ಡಿ. ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Nov 8, 2024, 9:28 PM IST

ರಾಮನಗರ : ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ನಾವು ಕನಕಪುರದ ಮೂರು ಕಡೆಗಳಲ್ಲಿ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ? ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ ಯೋಗೇಶ್ವರ್ ಅವರ ಪರವಾಗಿ ಶುಕ್ರವಾರ ಚಕ್ಕೆರೆ, ಹೊನ್ನನಾಯಕನಹಳ್ಳಿ ಮತ್ತಿತರ ಕಡೆ ಚುನಾವಣೆ ಪ್ರಚಾರ ಸಭೆ ನಡೆಸಿದರು. ದೇವೇಗೌಡರು ಗುರುವಾರ ಭಾಷಣ ಮಾಡುತ್ತಾ, “ಒಂದು ಶಾಲೆ ಮಾಡಲು ಜಾಗ ಕೇಳಿದರೆ ಡಿ. ಕೆ ಶಿವಕುಮಾರ್ ದುಡ್ಡು, ದುಡ್ಡು ಅಂತಾರೆ” ಎಂದು ಮಾಡಿದ್ದ ಟೀಕೆಗೆ ಡಿಸಿಎಂ ಅವರು ಹೀಗೆ ತಿರುಗೇಟು ನೀಡಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು (ETV Bharat)

ದೇವೇಗೌಡರು ನಿನ್ನೆ ಚುನಾವಣೆ ಪ್ರಚಾರ ಮಾಡುತ್ತಾ ಡಿ. ಕೆ ಸಹೋದರರು ಜಮೀನು ಕಬ್ಜ ಮಾಡಿಕೊಂಡಿದ್ದು, ಶಾಲೆ ಕಟ್ಟಲು ಜಾಗ ನೀಡುತ್ತಿಲ್ಲ. ಜಾಗ ಕೇಳಿದರೆ ದುಡ್ಡು, ದುಡ್ಡು ಅಂತಾರೆ ಎಂದು ಆರೋಪ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ನಿಮಗೆ ಕನಕಪುರದಲ್ಲಿ ಸಂಬಂಧಿಕರಿದ್ದರೆ ಕೇಳಿ ನೋಡಿ. ಹಳ್ಳಿಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂದು ಶಾಲೆಗಳ ನಿರ್ಮಾಣಕ್ಕೆ ನಾವು ಮೂರು ಕಡೆ ನಮ್ಮ ತಂದೆ ದೊಡ್ಡಆಲಹಳ್ಳಿ ಕೆಂಪೇಗೌಡರಿಗೆ ಸೇರಿದ 25 ಎಕರೆ ಜಾಗವನ್ನು ದಾನ ಮಾಡಿದ್ದೇವೆ ಎಂದರು.

ಯಾರು ಬೇಕಾದರೂ ಹೋಗಿ ನೋಡಬಹುದು. ಕುಮಾರಸ್ವಾಮಿ ಹಾಗೂ ದೇವೇಗೌಡರೇ, ನೀವು ಎಲ್ಲಾದರೂ ಒಂದು ಎಕರೆ ಜಾಗ ದಾನ ಮಾಡಿದ್ದೀರಾ? ನಾನು ನಿಮ್ಮ ಹಾಗೂ ನಿಮ್ಮ ಜಮೀನಿನ ವಿಚಾರಗಳನ್ನು ಈಗ ಮಾತನಾಡಲು ಹೋಗುವುದಿಲ್ಲ. ಚುನಾವಣೆಗಾಗಿ ನಿಮ್ಮನ್ನು ಟೀಕಿಸುವುದಿಲ್ಲ. ನಿಮ್ಮ ವಯಸ್ಸಿಗೆ ನಾನು ಗೌರವ ನೀಡುತ್ತೇನೆ. ಬಡವರಿಗೆ ಆಗಿರುವ ಮೋಸದ ಬಗ್ಗೆ ಧ್ವನಿ ಎತ್ತಲು ನಾನು ಈ ಪ್ರಶ್ನೆ ಕೇಳಬೇಕಾಗಿದೆ. ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ನೀವು ಹಾಗೂ ನಿಮ್ಮ ಕುಟುಂಬದವರು ಒಂದು ಗುಂಟೆ ಜಮೀನನ್ನು ನೀಡಿದ್ದೀರಾ? ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಕ್ಷೇತ್ರಕ್ಕೆ ಏನು ಮಾಡಿದ್ದಾರೆ? : ಯೋಗೇಶ್ವರ್ ಅವರು 4-5 ಕೋಟಿ ರೂ. ವೆಚ್ಚ ಮಾಡಿ ಬಿಸಿಲಮ್ಮ ದೇವಾಲಯ ಅಭಿವೃದ್ಧಿ ಮಾಡಿದ್ದಾರೆ. ಮಹದೇಶ್ವರ ದೇವಾಲಯ ಅಭಿವೃದ್ಧಿ ಮಾಡಿದ್ದಾರೆ. ಅದನ್ನು ನೋಡಿ ಸಂತೋಷವಾಗಿದೆ. ಕುಮಾರಸ್ವಾಮಿ ಅವರು ರಾಮನಗರ, ಚನ್ನಪಟ್ಟಣ ಕ್ಷೇತ್ರದಲ್ಲಿ ಒಂದು ದೇವಾಲಯ ಅಭಿವೃದ್ಧಿ ಮಾಡಿದ್ದಾರಾ?. ಒಂದೇ ಒಂದು ಶುದ್ಧ ಕುಡಿಯುವ ನೀರಿನ ಘಟಕ ನೀಡಿದ್ದಾರಾ? ಇಲ್ಲವಾದರೆ, ಮತ್ತೆ ಯಾಕೆ ನೀವು ಮತ ಕೇಳುತ್ತಿದ್ದೀರಿ?. ನಿಮಗೆ ಹಣವೇ ಮುಖ್ಯವೇ?. ನೀವು ಒಂದೊಂದು ಮತಕ್ಕೆ 2 - 3 ಸಾವಿರ ಹಣ ನೀಡಬಹುದು. ಆದರೆ, ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಬದುಕು ಕಟ್ಟಿಕೊಳ್ಳಲು ದಾರಿ ದೀಪವಾಗಿದೆ. ಇದಕ್ಕಾಗಿ 56 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದರು.

ಕುಮಾರಸ್ವಾಮಿ ಅವರೇ ನೀವು ಹಾಗೂ ನಿಮ್ಮ ಧರ್ಮಪತ್ನಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಶಾಸಕರಾಗಿದ್ದವರು. ನೀವು ಕೋವಿಡ್ ಸಮಯದಲ್ಲಿ ಜನರಿಗೆ ನೆರವಾಗಿದ್ದೀರಾ? ಡಿ. ಕೆ ಸುರೇಶ್ ಜನರಿಗೆ ನೆರವಾಗಲಿಲ್ಲವೇ? ಅನಾಥ ಶವಗಳಿಗೆ ಅಂತ್ಯಸಂಸ್ಕಾರ ಮಾಡಲಿಲ್ಲವೇ? ಇಂತಹ ಒಂದು ಕೆಲಸವನ್ನು ನೀವು ಮಾಡಲಿಲ್ಲ. ಮನೆಯಲ್ಲಿ ಅವಿತು ಕುಳಿತ್ತಿದ್ರಿ. ಯಾರಿಗೂ ಸಹಾಯ ಮಾಡಲಿಲ್ಲ. ಕಷ್ಟಕ್ಕೆ ಆಗಲಿಲ್ಲವಾದರೆ ಮತ್ತೆ ಯಾವಾಗ ಜನರ ಜೊತೆ ನಿಲ್ಲುತ್ತೀರಾ? ಎಂದು ಹೇಳಿದರು.

ಕಾರ್ಯಕರ್ತರ ಪರಿಸ್ಥಿತಿ ಏನು? : ನನ್ನ ಮೊಮ್ಮಗನ ಪಟ್ಟಾಭಿಷೇಕ ಮಾಡುವವರೆಗೂ ನಾನು ಬದುಕಿರುತ್ತೇನೆ ಎಂದು ದೇವೇಗೌಡರು ಹೇಳಿದ್ದಾರೆ. ಬಹಳ ಸಂತೋಷ, ನೀವು ನಿಮ್ಮ ಮೊಮ್ಮಗನ ಪಟ್ಟಾಭಿಷೇಕ ಮಾಡಿ. ಆದರೆ, ನಿಮಗಾಗಿ ದುಡಿದ ಕಾರ್ಯಕರ್ತರ ಪರಿಸ್ಥಿತಿ ಏನಾಗಬೇಕು ಎಂದು ನಿಮ್ಮನ್ನು ಕೇಳಲು ಬಯಸುತ್ತೇನೆ. ಕುಮಾರಸ್ವಾಮಿ ಅವರು ಕ್ಷೇತ್ರದ ಯಾವುದಾದರೂ ಒಬ್ಬ ಕಾರ್ಯಕರ್ತನಿಗೆ ಅಧಿಕಾರ ಕೊಟ್ಟಿದ್ದಾರಾ? ಇಲ್ಲ. ಈ ಕ್ಷೇತ್ರದ ಬಡವರನ್ನು ಮೇಲೆತ್ತಲು ನಾವಿದ್ದೇವೆ, ಯೋಗೇಶ್ವರ್ ಇದ್ದಾರೆ ಎಂದು ಹೇಳಿದರು.

Union Minister HD Kumaraswamy
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (ETV Bharat)

ಒಬ್ಬನನ್ನು ಕಟ್ಟಿಹಾಕಲು ಸಚಿವರ ದಂಡು ದಂಡೆತ್ತಿ ಬಂದಿದೆ : ಕೇವಲ ಒಬ್ಬ ಯುವಕನನ್ನು ಕಟ್ಟಿ ಹಾಕಲು ಚನ್ನಪಟ್ಟಣದಲ್ಲಿ ಸರ್ಕಾರದ ಸಚಿವರ ದಂಡು ದಂಡೆತ್ತಿ ಬಂದಿದೆ ಎಂದು ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಚಾರದ ನಡುವೆ ಕಲ್ಲಾಪುರ ಗ್ರಾಮದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು, 13ನೇ ತಾರೀಕು ನಡೆಯುವ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕಣದಲ್ಲಿ ಇದ್ದಾರೆ. ಅವರನ್ನು ಕಟ್ಟಿ ಹಾಕಲು ಮುಖ್ಯಮಂತ್ರಿ, ಡಿಸಿಎಂ ಕೂಡ ಬಂದಿದ್ದಾರೆ. ಹದಿನೈದಕ್ಕೂ ಹೆಚ್ಚು ಸಚಿವರು, ಮೂವತ್ತಕ್ಕೂ ಹೆಚ್ಚು ಶಾಸಕರು ದಂಡೆತ್ತಿ ಬಂದಿದ್ದಾರೆ. ಆದರೆ, ಜನರು ನಮ್ಮ ಜತೆ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರಕ್ಕೆ ನಾನು ಮಾಡಿರುವ ಕೆಲಸಗಳ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡುತ್ತಾರೆ. ಅವರಿಗೆ ಕಣ್ಣಿಲ್ಲವೇ? ಪ್ರತಿ ಹಳ್ಳಿಯಲ್ಲಿಯೂ 8 ರಿಂದ 10 ಕೋಟಿ ಮೌಲ್ಯದ ಅಭಿವೃದ್ದಿ ಕಾರ್ಯಗಳು ಆಗಿವೆ. ಇವೆಲ್ಲವೂ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಾನು ಮಾಡಿರುವ ಕೆಲಸ ಕಣ್ಣಿಗೆ ಕಾಣಲ್ಲವೇ? : ಕಾಂಕ್ರೀಟ್ ರೋಡ್, ಹೈಮಾಸ್ಕ್ ಲೈಟ್ ಕೊಟ್ಟಿದ್ದೇನೆ. ಸಾಕಷ್ಟು ಮೂಲ ಸೌಕರ್ಯ ಕಲ್ಪಿಸಿದ್ದೇನೆ. ಬೆಂಗಳೂರಿನಲ್ಲೂ ಇಂತಹ ಉತ್ತಮ ರಸ್ತೆಗಳು ಇಲ್ಲ. ಕೇವಲ 8-10 ಹಳ್ಳಿಗೆ ಅಷ್ಟೇ ಕೆಲಸ ಆಗಿಲ್ಲ. ಇಡೀ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿದೆ. ಎಷ್ಟು ಕೊಳವೆ ಬಾವಿ ಕೊಟ್ಟಿದ್ದೇವೆ ಎನ್ನುವುದಕ್ಕೆ ಲೆಕ್ಕ ಇದೆ ಎಂದರು.

ಇದನ್ನೂ ಓದಿ : ಚನ್ನಪಟ್ಟಣ, ರಾಮನಗರಕ್ಕೆ ಏನೂ ಕೊಡದ ಕುಮಾರಸ್ವಾಮಿಗೆ ಚುನಾವಣೆ ಬಂದ್ರೆ ಅಳು ಬರುತ್ತದೆ: ಡಿ ಕೆ ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.