ETV Bharat / state

ಕುಮಾರಸ್ವಾಮಿ ಹಿಟ್ ಅಂಡ್ ರನ್, ಬ್ಲಾಕ್ ಮೇಲರ್ : ಡಿಸಿಎಂ ಡಿ. ಕೆ ಶಿವಕುಮಾರ್ - D K SHIVAKUMAR OUTRAGE AGAINST HDK

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಕೇಂದ್ರ ಸಚಿವ ಹೆಚ್.​ ಡಿ ಕುಮಾರಸ್ವಾಮಿ ಅವರ ಕುರಿತು ಮಾತನಾಡಿದ್ದಾರೆ. ನೀನು ಹಿಟ್ ಅಂಡ್ ರನ್​, ಬ್ಲಾಕ್ ಮೇಲರ್ ಎಂದು ವಾಗ್ದಾಳಿ ನಡೆಸಿದ್ದಾರೆ.

Dcm d k shivakumar
ಡಿಸಿಎಂ ಡಿ ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Aug 4, 2024, 8:38 PM IST

ಕುಮಾರಸ್ವಾಮಿ ಹಿಟ್ ಅಂಡ್ ರನ್, ಬ್ಲಾಕ್ ಮೇಲರ್ : ಡಿಸಿಎಂ ಡಿ. ಕೆ ಶಿವಕುಮಾರ್ (ETV Bharat)

ರಾಮನಗರ : ಕುಮಾರಸ್ವಾಮಿ, ನಾನು ಕೃಷಿ ಜತೆಗೆ ಉದ್ಯಮವನ್ನು ನಡೆಸುತ್ತಿದ್ದೇನೆ. ನೀನು ಮತ್ತು ನಿಮ್ಮ ಕುಟುಂಬದವರು ಯಾವ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ಸಂಪಾದಿಸಿದ್ದೀರಿ? ನೀನು ಹಿಟ್ ಅಂಡ್ ರನ್, ಬ್ಲಾಕ್ ಮೇಲರ್ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹರಿಹಾಯ್ದರು.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಇಂದು ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, ''ಕುಮಾರಣ್ಣ ನೀನು ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡುವ ಬದಲು ಮೊದಲಿನಿಂದಲೂ ಚರ್ಚೆ ಮಾಡು. ನಿನ್ನ ಸಹೋದರ ಬಾಲಕೃಷ್ಣಗೌಡ ಅವರ ಕುಟುಂಬ, ಅವರ ತಂದೆ ಹಾಗೂ ಮೈಸೂರು, ಶ್ರೀರಂಗಪಟ್ಟಣದ ಅವರ ಸಂಬಂಧಿಗಳು ಬೇನಾಮಿಯಾಗಿ ಎಷ್ಟೆಷ್ಟು ಜಮೀನು ಹೊಂದಿದ್ದಾರೆ ಎಂದು ನೀವು ರಾಮನಗರದಲ್ಲಿ ಉತ್ತರ ನೀಡಬೇಕು. ಒಬ್ಬ ಸರ್ಕಾರಿ ನೌಕರ ಎಷ್ಟು ಸಾವಿರ ಕೋಟಿಗೆ ಇದ್ದಾನೆ, ಯಾವ ಈರುಳ್ಳಿ, ಆಲೂಗಡ್ಡೆಯಲ್ಲಿ ಅದು ಸಂಪಾದನೆ ಆಯ್ತು? ಎಂದು ಲೆಕ್ಕ ಕೊಡಬೇಕು” ಎಂದು ಸವಾಲೆಸೆದರು.

ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ನಾನು ಉದ್ದಿಮೆದಾರ ಎಂದು ಹೇಳಿಕೊಂಡಿದ್ದೇನೆ. ನೀನು ಆ ರೀತಿ ಹೇಳಿಲ್ಲ. ನಾನು ಪಂಚೆಯುಟ್ಟು ಹೊಲ ಉಳುಮೆ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದೀಯ. ಮಣ್ಣಿನ ಮಗ ಎಂದು ಹೇಳಿದ್ದೀಯ. ನಿಮ್ಮ ತಂದೆ ಮಣ್ಣಿನ ಮಗನಾಗಿರಬಹುದು. ಆದರೆ ನೀವಲ್ಲ, ನನ್ನ ಮೇಲೆ, ನನ್ನ ಧರ್ಮಪತ್ನಿ, ನನ್ನ ಸಹೋದರಿ, ನನ್ನ ಸಹೋದರನ ಮೇಲೆ ನೀವು ಕೇಸ್ ದಾಖಲಿಸಿ ಏನು ಮಾಡಿದಿರಿ? ಏನು ಮಾಡಲು ಆಗಿಲ್ಲ ಎಂದರು.

ಮಿಲಿಟರಿಯವರು ಬಂದು ನನ್ನನ್ನು ಕರೆದುಕೊಂಡು ಹೋಗಲಿದ್ದಾರೆ ಎಂದು ನೀನು ಹೇಳಿದ್ದೀಯ. ಹಾಗಿದ್ದರೆ ನಾನು ಜೈಲಲ್ಲಿ ಇದ್ದಾಗ ಯಾಕೆ ಬಂದು ನನ್ನನ್ನು ನೋಡಿದೆ? ನನ್ನ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅದು ಗೊತ್ತಿದೆಯೇ? ನನ್ನ ಕುಟುಂಬದವರ ಮೇಲೆ ಹಾಕಿಸಿದ್ದ ಕೇಸು ವಜಾ ಆಗಿದೆ ಗೊತ್ತಿದೆಯಾ? ಎಂದು ಕುಟುಕಿದರು.

''ನಾನು ನಿನ್ನ ಡಿನೋಟಿಫಿಕೇಶನ್ ಪ್ರಕರಣ ಇನ್ನೂ ಚರ್ಚೆ ಮಾಡಿಲ್ಲ. ನಿನ್ನ ಗಣಿ ಕೇಸ್ ಇನ್ನೂ ಚರ್ಚೆ ಮಾಡಿಲ್ಲ. ನಿನ್ನ ಕುಟುಂಬದವರ ಆಸ್ತಿ ಬಗ್ಗೆ ವಿವರನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಪಟ್ಟಿ ಬಿಡುಗಡೆ ಮಾಡುತ್ತೇನೆ'' ಎಂದು ಡಿಕೆಶಿ ಸವಾಲೆಸೆದರು.

ಹುಟ್ಟಿದ ಕರುಗಳೆಲ್ಲ ಬಸವ ಆಗಲ್ಲ. ಅದೇ ರೀತಿ ಎಲ್ಲರೂ ರೈತನ ಮಗ ಆಗುವುದಿಲ್ಲ. ನೀವು ರೈತನ ಮಗ ಎಂದು ಹೇಳುತ್ತೀರಿ. ನಮ್ಮ ಹಳ್ಳಿ ಕಡೆ ಒಂದು ಮಾತು ಹೇಳುತ್ತಾರೆ. ‘ಹುಟ್ಟಿದವೆಲ್ಲಾ ಬಸವ ಆಗುವುದಿಲ್ಲ’ ಎಂದು. ಅಂದರೆ ಹಳ್ಳಿಗಳಲ್ಲಿ ಹುಟ್ಟುವ ಎಲ್ಲಾ ಕರುಗಳು ಬಸವ ಆಗಲು ಸಾಧ್ಯವಿಲ್ಲ. ಅದೇ ರೀತಿ ಎಲ್ಲರೂ ರೈತರ ಮಕ್ಕಳಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ರೈತರ ರಕ್ಷಣೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದೆ. ಉಳುವವನಿಗೆ ಭೂಮಿ ಕೊಟ್ಟಿದ್ದೇವೆ. ಬಗರ್ ಹುಕುಂ ಸಾಗುವಳಿ ಜಮೀನು ನೀಡಿದ್ದೇವೆ. ಅರಣ್ಯ ಕಾಯ್ದೆಯಲ್ಲಿ ರೈತರಿಗೆ ಜಮೀನು ನೀಡಿದ್ದೇವೆ. ಕುಮಾರಸ್ವಾಮಿ ಅವರೇ, ನೀವು ಒಂದು ಸಭೆ ಮಾಡಿ ಒಬ್ಬ ರೈತನಿಗೆ ಬಗರ್ ಹುಕುಂ ಜಮೀನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.

''ನಾನು ಚನ್ನಪಟ್ಟಣದ ವಿವಿಧ ಕಡೆಗಳಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ ಕರೆದುಕೊಂಡು ಬಂದು ಅವರ ಕಷ್ಟ ಕೇಳಿದ್ದೇನೆ. ಈ ಕ್ಷೇತ್ರದಲ್ಲಿ 22 ಸಾವಿರ ಜನ ತಮ್ಮ ಕಷ್ಟ ಬಗೆಹರಿಸುವಂತೆ ಅರ್ಜಿ ನೀಡಿದ್ದಾರೆ. ನಿವೇಶನ, ಮನೆ, ಪಿಂಚಣಿ, ಜಮೀನಿನ ಖಾತೆ ಇಲ್ಲ ಎಂದು ಅರ್ಜಿ ಕೊಟ್ಟಿದ್ದಾರೆ. ಹಾಗಿದ್ದರೆ ನೀವು ಯಾವ ಆಡಳಿತ ಮಾಡಿದ್ದೀರಿ? ಯಾರಿಗೆ ಸಹಾಯ ಮಾಡಿದ್ದೀರಿ? ಇದಕ್ಕೆ ಈ ಕ್ಷೇತ್ರದ ಜನ ಮುಂದಿನ ಉಪಚುನಾವಣೆಯಲ್ಲಿ ಉತ್ತರ ನೀಡಬೇಕು. ನೀವೆಲ್ಲರೂ ಉತ್ತರ ನೀಡುತ್ತೀರಿ ಅಲ್ಲವೇ? ಬೆಂಗಳೂರು ದಕ್ಷಿಣ ನಿಮ್ಮ ಜಿಲ್ಲೆಯಲ್ಲವೇ? ಆ ಸ್ವಾಭಿಮಾನ ನಿಮ್ಮದಲ್ಲವೇ?” ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಹಿಟ್​ ಅಂಡ್ ರನ್, ಬ್ಲಾಕ್ ಮೇಲರ್- ನನ್ನ ಅಧ್ಯಕ್ಷತೆಯಲ್ಲಿ ನನ್ನ ಪಕ್ಷಕ್ಕೆ 136 ಸೀಟು ಬಂದಿದೆ. ನಿನ್ನ ಅಧ್ಯಕ್ಷತೆಯಲ್ಲಿ ನಿನ್ನ ಪಕ್ಷಕ್ಕೆ 19 ಸೀಟು ಬಂದಿದೆ. ಈಗ ನಿನ್ನ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಸೇರಿದ್ದೀಯ. ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್. ನೀನು ಬ್ಲಾಕ್ ಮೇಲ್ ಕುಮಾರಸ್ವಾಮಿ. ಎಲ್ಲರನ್ನು ಹೆದರಿಸಿದಂತೆ ಬಿಜೆಪಿಯವರನ್ನು ಹೆದರಿಸಲು ಹೋದೆ. ಪಾದಯಾತ್ರೆ ವಿಚಾರವಾಗಿ ಜಿ. ಟಿ ದೇವೇಗೌಡರ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನಿನ್ನ ಮಗನ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ. ನೀನು ಒಂದು ಹೇಳಿಕೆ ನೀಡಿದೆ. ಈ ನಾಟಕ ಏಕೆ?” ಎಂದು ಪ್ರಶ್ನಿಸಿದರು. ಪಾದಯಾತ್ರೆಗೆ ಬರಲ್ಲ ಎಂದು ಹೇಳಿದವನು, ಈಗ ಏಕೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ದೀಯಾ? ಕೇವಲ ನಿನ್ನ ಅಧಿಕಾರಕ್ಕೋಸ್ಕರ. ನಿನ್ನ ಪಕ್ಷವನ್ನು ಮುಳುಗಿಸಲು ಹೊರಟಿದ್ದೀಯಾ” ಎಂದು ವಾಗ್ದಾಳಿ ನಡೆಸಿದರು.

ಪೆನ್​​ ಡ್ರೈವ್ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ - ಇನ್ನು ಪೆನ್​ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ದಿನಕ್ಕೊಂದು ಮಾತನಾಡಿದ್ದಾರೆ. ಮೊದಲು ರೇವಣ್ಣ ಕುಟುಂಬ ಬೇರೆ, ನಮ್ಮ ಕುಟುಂಬ ಬೇರೆ ಎಂದರು. ಮೊದಲು ಡಿ. ಕೆ ಶಿವಕುಮಾರ್ ಪೆನ್ ಡ್ರೈವ್ ಹಂಚಿದ್ದಾರೆ ಎಂದರು. ಕುಮಾರಸ್ವಾಮಿ ಶಿವಕುಮಾರ್ ಎಂದಿಗೂ ನೇರವಾಗಿ ಹೋರಾಟ ಮಾಡುವವನು. ಈ ರೀತಿ ಹಿಂದೆ ನಿಂತು ಯುದ್ಧ ಮಾಡುವುದಿಲ್ಲ ಎಂದು ನಿಮಗೂ ಗೊತ್ತಿದೆ. ಈಗಾಗಲೇ ನೀನು ನನ್ನ ವಿರುದ್ಧ ಹೋರಾಡಿ ಸೋತಿದ್ದೀಯ. ದೇವರು ಅವಕಾಶ ಕೊಟ್ಟರೆ ಮತ್ತೊಮ್ಮೆ ಸೆಣಸಾಡೋಣ ಎಂದು ತಿಳಿಸಿದರು.

ಹಾಸನದ ಪೆನ್ ಡ್ರೈವ್ ಪ್ರಕರಣವನ್ನು ಬಿಜೆಪಿಯವರು ಏಕೆ ಚರ್ಚೆ ಮಾಡುತ್ತಿಲ್ಲ? ಆ ಹೆಣ್ಣುಮಕ್ಕಳ ರಕ್ಷಣೆ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಡಿ. ಕೆ ಶಿವಕುಮಾರ್ ಬಗ್ಗೆ ಮಾತನಾಡಿದೆ, ಈಗ ಪ್ರೀತಂ ಗೌಡ ಬಗ್ಗೆ ಮಾತನಾಡುತ್ತಿದ್ದೀಯಾ? ನನಗೂ ಅವರಿಗೂ ಸಂಬಂಧವಿಲ್ಲ ಎಂದು ಹೇಳಿದ್ದೆ. ಈಗ ನಮ್ಮ ದೇವೇಗೌಡರ ಕುಟುಂಬ ಎಂದು ಹೇಳುತ್ತಿದ್ದೀಯಾ? ಈ ಬಗ್ಗೆ ಚರ್ಚೆ ಮಾಡು ಎಂದರು.

ಕುಮಾರಸ್ವಾಮಿ ನವರಂಗಿ ಬಣ್ಣ ಬಯಲಾಗಬೇಕು‌ - ''ಕುಮಾರಸ್ವಾಮಿ ಅವರು ಮಂಡ್ಯ ಚುನಾವಣೆ ವೇಳೆ ಎನ್​ಡಿಎ ಸರ್ಕಾರ ಬಂದರೆ ಐದು ನಿಮಿಷದಲ್ಲಿ ಮೋದಿ ಅವರ ಜತೆ ಮಾತಾಡಿ ಮೇಕೆದಾಟಿಗೆ ಅನುಮತಿ ಕೊಡಿಸುತ್ತೇನೆ ಎಂದು ಹೇಳಿದ್ದರು. ಈಗ ನಾನು ಹಾಗೆ ಹೇಳಿಲ್ಲ ಅಂತಿದ್ದಾರೆ. ಅವರು ಏನೆಲ್ಲಾ ಹೇಳಿದ್ದಾರೆ ಅವುಗಳನ್ನು ದೊಡ್ಡ ಪರದೆಯಲ್ಲಿ ಹಾಕಿಸಬೇಕು. ಅವರ ನವರಂಗಿ ಬಣ್ಣ ರಾಜ್ಯದ ಜನತೆಗೆ ಅರ್ಥವಾಗಬೇಕು” ಎಂದು ತಿಳಿಸಿದರು.

ಕುಮಾರಣ್ಣ ನೀನು ಬಿಜೆಪಿಗೂ ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದೀಯ. ನೀವಿಬ್ಬರೂ ಚೆನ್ನಾಗಿರಿ, ಒಂದಾಗಿರಿ. ನಿಮ್ಮ ಪಕ್ಷ ಬಿಜೆಪಿ ಜತೆ ವಿಲೀನವಾದರೂ ಮಾಡಿಕೊಳ್ಳಿ. ನಮಗೂ ಒಳ್ಳೆಯದು. ನಮ್ಮ ಪಕ್ಷ ಅಧಿಕಾರಕ್ಕೆ ಬರದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೀರಿ. ಆ ಕೆಲಸವನ್ನು ಶುಭಮುಹೂರ್ತ, ಶುಭ ಗಳಿಗೆಯಲ್ಲಿ ಮಾಡಿದರೆ ಎಲ್ಲರಿಗೂ ಉತ್ತಮ ಎಂದು ಡಿಕೆಶಿ ಕಾಲೆಳೆದರು.

ಕೇಂದ್ರ ಸರ್ಕಾರ ನಿನಗೆ ಎರಡು ಖಾತೆ ನೀಡಿದೆ. ನೀನು 10 ಸಾವಿರ ಜನರಿಗೆ ಕೆಲಸ ಕೊಡುವ ಕಾರ್ಖಾನೆ ಆರಂಭಿಸುತ್ತೇನೆ ಎಂದು ಹೇಳಿಕೆ ನೀಡಿದ್ದೀಯ. ಸಂತೋಷ, ಆ ಕೆಲಸ ಮಾಡು. ನಮ್ಮ ಸರ್ಕಾರದಿಂದ ನಾವು ಸಹಕಾರ ನೀಡುತ್ತೇವೆ. ನೀವು ಎಲ್ಲೆಲ್ಲಿ ಅಂಗಡಿ ಇಟ್ಟಿದ್ದೀರಿ ನನಗೆ ಗೊತ್ತಿದೆ. ನೀನು ಅಧಿಕಾರದಲ್ಲಿದ್ದಾಗ ನಿನ್ನ ಜನರಿಗೆ ಒಂದು ಮನೆ, ನಿವೇಶನ ನೀಡಲಿಲ್ಲ. ನಿಮ್ಮ ಕಾರ್ಯಕರ್ತರಿಗೆ ಅಧಿಕಾರ ನೀಡಲಿಲ್ಲ. ನೀನು ನಿನ್ನ ಕುಟುಂಬ ಮಾತ್ರ ಅಧಿಕಾರ ಅನುಭವಿಸಿದ್ದೇ ಆಯ್ತು. ಯಡಿಯೂರಪ್ಪನವರು ಸದನದಲ್ಲಿ ನಿನ್ನ ಬಗ್ಗೆ ಮಾಡಿರುವ ಭಾಷಣದ ಬಗ್ಗೆ ನೀನು ಉತ್ತರ ನೀಡು ಸಾಕು ಎಂದು ಸವಾಲೆಸೆದರು.

ಬಿಜೆಪಿ ಹಾಗೂ ಜೆಡಿಎಸ್​ನವರದ್ದು ಪಾಪ ವಿಮೋಚನಾ ಯಾತ್ರೆ - ''ಬಿಜೆಪಿ ಹಾಗೂ ಜೆಡಿಎಸ್​ನವರು ಪಾಪವಿಮೋಚನಾ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಮಾಡಿರುವ ಎಲ್ಲಾ ಪಾಪಗಳನ್ನು ಕಳೆದುಕೊಳ್ಳಲು ಈ ಪಾದಯಾತ್ರೆ ಮಾಡುತ್ತಿದ್ದಾರೆ. ಇದು ಭ್ರಷ್ಟಾಚಾರದಿಂದ ಭ್ರಷ್ಟಾಚಾರಕ್ಕೋಸ್ಕರ, ಭ್ರಷ್ಟಾಚಾರಿಗಳೇ ನಡೆಸುತ್ತಿರುವ ಪಾದಯಾತ್ರೆ” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಅವರ ಅಕ್ರಮಗಳ ಬಗ್ಗೆ ಬಿಜೆಪಿಯವರು ಮಾಧ್ಯಮಗಳಲ್ಲಿ ಪ್ರಕಟಿಸಿದ್ದ ಜಾಹೀರಾತಿನ ಬಗ್ಗೆ ಪಾದಯಾತ್ರೆ ಮಾಡುತ್ತಿರುವವರು ಉತ್ತರ ಕೊಡಬೇಕು. ಬಿಜೆಪಿಯ ಶಾಸಕರಾದ ಯತ್ನಾಳ್ ಅವರು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಬಗ್ಗೆ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ. ಅವರ ಪ್ರಶ್ನೆಗಳಿಗೆ ಉತ್ತರ ನೀಡಿ ಎಂದು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ : ಭ್ರಷ್ಟಾಚಾರವೇ ನಿಮ್ಮ ತಾಯಿ - ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ: ಮೈತ್ರಿ ನಾಯಕರ ವಿರುದ್ಧ ಡಿಕೆಶಿ ಟೀಕೆ - D k shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.