ETV Bharat / state

ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಸಿಎಂ ಡಿಕೆಶಿ - Neha Hiremath - NEHA HIREMATH

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

dcm-dk-shivakumar
ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಸಿಎಂ ಡಿಕೆಶಿ
author img

By ETV Bharat Karnataka Team

Published : Apr 21, 2024, 5:09 PM IST

ಬೆಂಗಳೂರು: ಮೊನ್ನೆ ಹುಬ್ಬಳ್ಳಿಯಲ್ಲಿ ಕೊಲೆಯಾದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಈ ದುರಂತದಿಂದ ನಮಗೂ ಆಘಾತವಾಗಿದೆ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಗಿರುವ ದುಃಖದಲ್ಲಿ ನಾವೂ ಭಾಗಿ. ಸರ್ಕಾರ ನಿಮ್ಮ ಜೊತೆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಹೋದರ ಡಿ.ಕೆ. ಸುರೇಶ್ ಅವರ ಪರ ಆನೇಕಲ್​ನಲ್ಲಿ ಭಾನುವಾರ ಮಧ್ಯಾಹ್ನ ಪ್ರಚಾರ ರಾಲಿ ಕೈಗೊಂಡಿದ್ದ ಸಂದರ್ಭದಲ್ಲಿ ಡಿಕೆಶಿ ನಿರಂಜನಯ್ಯ ಹಿರೇಮಠ ಅವರಿಗೆ ದೂರವಾಣಿ ಕರೆ ಮಾಡಿದ್ದರು.

ಇದನ್ನೂ ಓದಿ: ನೇಹಾ ಸಾವಿನ ಮೇಲೆ ರಾಜಕಾರಣ ಮಾಡಿ ಚುನಾವಣೆ ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ: ಶ್ರೀನಿವಾಸ ಮಾನೆ ಆರೋಪ - MLA SRINIVAS MANE

ಪೂರ್ವನಿಗದಿತ ಚುನಾವಣೆ ಪ್ರಚಾರ ಕಾರ್ಯದಲ್ಲಿ ನಿರತನಾಗಿದ್ದ ಕಾರಣ ಹುಬ್ಬಳ್ಳಿಗೆ ಖುದ್ದು ಬರಲು ಆಗಲಿಲ್ಲ. ಚುನಾವಣೆ ಮುಗಿದ ನಂತರ ಖಂಡಿತವಾಗಿಯೂ ಬರುತ್ತೇನೆ. ಮಗಳ ಅಗಲಿಕೆಯಿಂದ ನಿಮಗೆ ಆಗಿರುವ ನೋವು ಎಂತಹದು ಎಂಬುದು ನನಗೆ ಅರ್ಥವಾಗುತ್ತದೆ. ನೋವು ಭರಿಸುವ ಶಕ್ತಿಯನ್ನು ನಿಮಗೆ, ನಿಮ್ಮ ಕುಟುಂಬ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಡಿ.ಕೆ. ಶಿವಕುಮಾರ್ ಅವರು ನಿರಂಜನಯ್ಯ ಅವರಿಗೆ ಹೇಳಿದರು.

ಇದನ್ನೂ ಓದಿ: ಪ್ರಕರಣದ ತನಿಖೆ ದಾರಿ ತಪ್ಪಿಸುವ ಪ್ರಯತ್ನ ನಡೀತಿದೆ: ನಿರಂಜನಯ್ಯ ಹಿರೇಮಠ - Neha Murder Case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.