ETV Bharat / state

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗಲ್ಲ: ಡಿಸಿಎಂ - DCM DK SHIVAKUMAR

ಕೆಪಿಸಿಸಿ ಹುದ್ದೆ ಸೇರಿದಂತೆ ಯಾವುದೇ ವಿಚಾರ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಲಾಗಿದೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

DCM DK SHIVAKUMAR
ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)
author img

By ETV Bharat Karnataka Team

Published : Jan 16, 2025, 1:44 PM IST

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ವಿಧಾನಸೌಧದದಲ್ಲಿ ಮಾತನಾಡಿದ ಅವರು, ನಾವು ಮಾಡುವ ಕೆಲಸ ಮತ್ತು ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮೂಲಕ ಯಾರಾದರೂ ಹುದ್ದೆ ಕೇಳುತ್ತಾರೆಯೇ?. ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ ಎಂದರು.

ಪಕ್ಷದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕೆಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂತಹದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ಇದು ಕೇವಲ ಕಾಂಗ್ರೆಸ್ ಮಾತ್ರವಲ್ಲ. ಬಿಜೆಪಿ, ಜೆಡಿಎಸ್, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾದರೂ ಪಕ್ಷದ ವಿಚಾರವನ್ನು ಆಂತರಿಕವಾಗಿ ಚರ್ಚೆ ಮಾಡಬೇಕೆಂದು ಹೇಳುತ್ತೇನೆ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ: ಈ ಪಕ್ಷವನ್ನು ಕೇವಲ ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ನಮಗೆ ಅಧಿಕಾರ ನೀಡಿದ್ದಾರೆ. ಇದನ್ನು ನಾವು ಉಳಿಸಿಕೊಳ್ಳಬೇಕು. ಇದು ಕಾರ್ಯಕರ್ತರ ಹಾಗೂ ಮತದಾರರ ಪಕ್ಷ. ಇದಕ್ಕೆ ತನ್ನದೇ ಆದ ದೊಡ್ಡ ಇತಿಹಾಸವಿದೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕೆ ಇದೆ. ಮಹಾತ್ಮಾ ಗಾಂಧೀಜಿ ಅವರು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಅಧಿಕಾರವನ್ನು ತ್ಯಾಗ ಮಾಡಿದ್ದಾರೆ. ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟರು, ಅವರು ಯಾವ ಅಧಿಕಾರ ಪಡೆದಿದ್ದಾರೆ? ನಾವು ಅವರನ್ನೆಲ್ಲ ಸ್ಮರಿಸಬೇಕು. ಹೀಗಾಗಿ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕಿಂತ ಪಕ್ಷ ಬಹಳ ಮುಖ್ಯ ಎಂದು ನಾನು ಬಹಳ ನಮ್ರತೆಯಿಂದ ಮನವಿ ಮಾಡುತ್ತೇನೆ. ಯಾರಿಗಾದರೂ ಏನೇ ಸಮಸ್ಯೆ ಇದ್ದರೂ ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಸದ್ಯಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆಯಲ್ಲಿದ್ದು, ಇದರ ಪರಿಶೀಲನೆಗೆ ಸುರ್ಜೆವಾಲ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಿಮ್ಮ ಪ್ರಶ್ನೆಗಳು ಏನೇ ಇದ್ದರೂ ಅವರನ್ನು ಕೇಳಿ ಎಂದರು.

ಪಕ್ಷದ ಸಂಘಟನೆ ಕುಂಠಿತವಾಗಿದೆ, ಪಕ್ಷಕ್ಕೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು. ಈ ವಿಚಾರವಾಗಿ ಅವರ ಬಳಿ ಕೇಳಿ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ. ಈ ರೀತಿ ಮಾಡಬಾರದು ಎಂದು ತಿಳಿಸಿದರು.

ಇದನ್ನೂ ಓದಿ: ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ: ಸಚಿವ ಸತೀಶ್ ಜಾರಕಿಹೊಳಿ - NEW PRESIDENT FOR KPCC

ETV Bharat Logo

Copyright © 2025 Ushodaya Enterprises Pvt. Ltd., All Rights Reserved.