ETV Bharat / state

'ದಸರಾ ವಿದ್ಯುತ್‌ ದೀಪಾಲಂಕಾರ'ಕ್ಕೆ ಚಾಲನೆ: 21 ದಿನ 130 ಕಿ.ಮೀ. ರಸ್ತೆ ಝಗಮಗ - Mysuru Dasara illumination - MYSURU DASARA ILLUMINATION

ಗುರುವಾರ ಮೈಸೂರು ದಸರಾ ಹಬ್ಬಕ್ಕೆ ಅದ್ಧೂರಿ ಚಾಲನೆ ದೊರಕಿದೆ. ಬಳಿಕ ಹತ್ತಾರು ಕಾರ್ಯಕ್ರಮಗಳ ಉದ್ಘಾಟನೆಯೂ ನಡೆದಿದೆ. ಇದರಲ್ಲಿ ಮೈಸೂರು ದಸರಾ ದೀಪಾಲಂಕಾರಕ್ಕೂ ಚಾಲನೆ ಸಿಕ್ಕಿದೆ.

'ದಸರಾ ವಿದ್ಯುತ್‌ ದೀಪಾಲಂಕಾರ'ಕ್ಕೆ ಚಾಲನೆ
'ದಸರಾ ವಿದ್ಯುತ್‌ ದೀಪಾಲಂಕಾರ'ಕ್ಕೆ ಚಾಲನೆ (ETV Bharat)
author img

By ETV Bharat Karnataka Team

Published : Oct 4, 2024, 7:36 AM IST

ಮೈಸೂರು: ದಸರಾ ಹಬ್ಬದ ಪ್ರಮುಖ ಆಕರ್ಷಣೆ ದೀಪಾಲಂಕಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಸಂಜೆ ಚಾಲನೆ ನೀಡಿದ್ದಾರೆ. ನಗರದ ಸಯ್ಯಾಜಿರಾವ್‌ ರಸ್ತೆಯಲ್ಲಿನ ಹಸಿರು ಚಪ್ಪರದ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದಸರಾ ವಿದ್ಯುತ್​ ದೀಪಾಲಂಕಾರದ ಜತೆಗೆ "ಪವರ್‌ ಮ್ಯಾನ್‌"ಗಳ ಕರ್ತವ್ಯದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ಬಾರಿ ರೂಪಿಸಲಾಗಿರುವ ವಿದ್ಯುತ್​​ ರಥಕ್ಕೂ ಚಾಲನೆ ನೀಡಿದ್ದಾರೆ.

ಪ್ರತಿ ವರ್ಷದಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌)ದಿಂದ ದಸರಾ ದೀಪಾಲಂಕಾರ ಮಾಡಲಾಗಿದ್ದು, ಹಿಂದಿನ ವರ್ಷಗಳಿಗಿಂತ ದೀಪಾಲಂಕಾರ ಇನ್ನಷ್ಟು ಆಕರ್ಷಕವಾಗಿದೆ.

'ದಸರಾ ವಿದ್ಯುತ್‌ ದೀಪಾಲಂಕಾರ' (ETV Bharat)

130 ಕಿ.ಮೀ. ರಸ್ತೆಗೆ ದೀಪಾಲಂಕಾರ: ಈ ಬಾರಿ ಮೈಸೂರು ನಗರದ 130 ಕಿ.ಮೀ ವ್ಯಾಪ್ತಿಯ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಅರಮನೆ ಸುತ್ತಲಿನ ರಸ್ತೆಗಳು ಸೇರಿದಂತೆ ಸಯ್ಯಾಜಿರಾವ್‌ ರಸ್ತೆ, ಬಿಎನ್‌ ರಸ್ತೆ, ಇರ್ವಿನ್ ರಸ್ತೆ, ಅಲ್ಬರ್ಟ್‌ ವಿಕ್ಟರ್‌ ರಸ್ತೆ, ಜೆಎಲ್‌ಬಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಹೊರ ವಲಯದಲ್ಲಿನ ಪ್ರಮುಖ ಹೆದ್ದಾರಿಗಳಿಗೂ ದೀಪಾಲಂಕಾರ ಮಾಡಲಾಗಿದೆ. ಜತೆಗೆ ನಗರ ವ್ಯಾಪ್ತಿಯಲ್ಲಿರುವ ಪ್ರಮುಖ ವೃತ್ತಗಳಿಗೂ ಆಕರ್ಷಕ ದೀಪಾಲಂಕಾರ ಮಾಡಲಾಗಿದೆ. ಇದಲ್ಲದೇ ನಗರದ ದೊಡ್ಡಕೆರೆ ಮೈದಾನ, ಕೆ.ಆರ್‌.ವೃತ್ತ, ಚಾಮರಾಜ ವೃತ್ತ, ಜಯಚಾಮರಾಜ ವೃತ್ತ(ಹಾರ್ಡಿಂಜ್‌), ರಾಮಸ್ವಾಮಿ ವೃತ್ತ, ರೈಲ್ವೆ ನಿಲ್ದಾಣ ಸಮೀಪ, ಗನ್‌ಹೌಸ್‌, ಎಲ್‌ಐಸಿ ವೃತ್ತ ಸೇರಿದಂತೆ ವಿವಿಧೆಡೆ ವಿದ್ಯುತ್‌ ದೀಪಗಳಿಂದಲೇ 65ಕ್ಕೂ ಹೆಚ್ಚು ಕಲಾಕೃತಿಗಳನ್ನು ನಿರ್ಮಿಸಲಾಗಿದೆ.

ದಸರಾ ವಿದ್ಯುತ್‌ ದೀಪಾಲಂಕಾರ 2024
ದಸರಾ ವಿದ್ಯುತ್‌ ದೀಪಾಲಂಕಾರ 2024 (ETV Bharat)

21 ದಿನಗಳ ಆಕರ್ಷಣೆ: ದಸರಾ ಹಿನ್ನೆಲೆಯಲ್ಲಿ ಮಾಡಲಾಗಿರುವ ವಿದ್ಯುತ್‌ ದೀಪಾಲಂಕಾರ ಒಟ್ಟು 21 ದಿನಗಳ ಕಾಲ ನಡೆಯಲಿದೆ. ದಸರಾ ದೀಪಾಲಂಕಾರಕ್ಕೆ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2,881 ಕಿ.ವ್ಯಾ ಅಂದಾಜು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಭಾರ ಹಾಗೂ 2,42,012 ಯೂನಿಟ್‌ಗಳ ವಿದ್ಯುತ್‌ ಬಳಕೆ ಮಾಡಲಾಗುತ್ತಿದೆ.

ಡ್ರೋನ್‌ ಶೋ ಮೆರಗು: ದಸರಾ ದೀಪಾಲಂಕಾರದೊಂದಿಗೆ ಮೊದಲ ಬಾರಿಗೆ ಡ್ರೋನ್‌ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್.ಇ.ಡಿ. ಬಲ್ಪ್‌ಗಳನ್ನು ಅಳವಡಿಸಿರುವ ಸುಮಾರು 1,500 ಡೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು. ಅಕ್ಟೋಬರ್‌ 6, 7 ರಂದು ಹಾಗೂ 11, 12 ರಂದು ರಾತ್ರಿ 8 ಗಂಟೆಯಿಂದ 8:15 ರವರೆಗೆ ಡ್ರೋನ್‌ ಪ್ರದರ್ಶನ ನಡೆಯಲಿದ್ದು, ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಹಾಗೂ ಅಂದು ಡ್ರೋನ್‌ ಶೋ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ.

ವಿದ್ಯುತ್‌ ರಥ ಸಂಚಾರ: ದಸರಾ ಸಂದರ್ಭದಲ್ಲಿ "ಪವರ್​​ ಮ್ಯಾನ್‌"ಗಳ ಕರ್ತವ್ಯ, ಗೃಹಜ್ಯೋತಿ, ಕೃಷಿ ಬಳಕೆಗೆ ಸೌರ ವಿದ್ಯುತ್, ವಿದ್ಯುತ್ ಸುರಕ್ಷತೆ ಹಾಗೂ ನುಡಿದಂತೆ ನಡೆದ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಂಡ ವಿದ್ಯುತ್ ರಥವನ್ನು ರೂಪಿಸಲಾಗಿದೆ. ಈ ರಥ ದಸರಾ ಉತ್ಸವದ ಸಂದರ್ಭದಲ್ಲಿ ಮೈಸೂರಿನ ಪ್ರಮುಖ ಭಾಗಗಳಲ್ಲಿ ಸಂಚರಿಸಲಿದೆ.

ಸುರಕ್ಷತೆಗೆ ಆದ್ಯತೆ: ಈ ಬಾರಿಯ ವಿದ್ಯುತ್​​ ದೀಪಾಲಂಕಾರದಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ವಿದ್ಯುತ್ ಅವಘಡಗಳು ಸಂಭವಿಸಿದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದೀಪಾಲಂಕಾರ ಉದ್ಘಾಟನೆಯ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಎಂಎಲ್ಸಿಗಳಾದ ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಶಾಸಕರು ಹಾಗೂ ಸೆಸ್ಕ್​ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಮುನಿಗೋಪಾಲ್​ ರಾಜು ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಅರಮನೆಯಲ್ಲಿ ಶರನ್ನವರಾತ್ರಿ ಪೂಜೆಯ ಮಹತ್ವವೇನು?: ರಾಜವಂಶಸ್ಥ ಯದುವೀರ್‌ ಸಂದರ್ಶನ - Mysuru Dasara 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.