ETV Bharat / state

ನನ್ನ ಮೊದಲ ಬೈಕ್ ರಿಪೇರಿ ಮಾಡಿಸಿದ್ದೇನೆ, ಇದರಲ್ಲೇ ನಗರ ಸುತ್ತಿ ರಸ್ತೆ ಗುಂಡಿ ಪರಿಶೀಲಿಸುವೆ: ಡಿಕೆಶಿ - DK Shivakumar Bike - DK SHIVAKUMAR BIKE

660 ಕೋಟಿ ರೂ ವೆಚ್ಚದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳ ದುರಸ್ತಿ ಮಾಡಲಾಗುವುದು. ಇನ್ನು ನನ್ನ ಮೊದಲ ಬೈಕ್​ನಲ್ಲಿ ನಗರ ಸುತ್ತಿ ರಸ್ತೆಗಳನ್ನು ಪರಿಶೀಲನೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿಕೆಶಿ ಮೊದಲ ಬೈಕ್
ಡಿಕೆಶಿ ಮೊದಲ ಬೈಕ್ (ಡಿಕೆಶಿ ಸಾಮಾಜಿಕ ಜಾಲತಾಣ)
author img

By ETV Bharat Karnataka Team

Published : Sep 2, 2024, 7:18 PM IST

ಬೆಂಗಳೂರು: ರಸ್ತೆಗುಂಡಿ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಾರ್ವಜನಿಕರಿಗಾಗಿ ʼರಸ್ತೆ ಗುಂಡಿ ಗಮನʼ ಎನ್ನುವ ಆ್ಯಪ್​ ಪರಿಚಯಿಸಿದ್ದು, ಅದರಲ್ಲಿ ಗುಂಡಿಗಳ ಫೋಟೋ ತೆಗೆದು ಅಪ್ಲೋಡ್​ ಮಾಡುವ ವ್ಯವಸ್ಥೆ ರೂಪಿಸಲಾಗಿದೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗಳ ವೀಕ್ಷಣೆಗೆ ಅಂತಾನೇ ನನ್ನ ಹಳೆಯ ಬೈಕ್ ದುರಸ್ತಿ ಮಾಡಿಸಿದ್ದೇನೆ. ಅಧಿಕಾರಿಗಳು ಮುಖ್ಯರಸ್ತೆಗಳನ್ನು ಮಾತ್ರ ತೋರಿಸುತ್ತಾರೆ, ಅದಕ್ಕೆ ಒಳ ರಸ್ತೆಗಳನ್ನು ಬೈಕ್ ಅಲ್ಲಿ ಓಡಾಡಿ ವೀಕ್ಷಿಸುತ್ತೇನೆ. ಜೊತೆಗೆ ಕಮಿಷನರ್ ಕೂರಿಸಿಕೊಂಡು ಒಂದು ಸುತ್ತು ಹಾಕುತ್ತೇನೆ ಎಂದರು.

ನಗರದಾದ್ಯಂತ 2,795 ರಸ್ತೆಗುಂಡಿಗಳು, ಪ್ರಮುಖ ರಸ್ತೆಗಳ ದುರಸ್ತಿಗೆ 660 ಕೋಟಿ ರೂ: ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ. ಎಲ್ಲ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 660 ಕೋಟಿ ರೂ ವೆಚ್ಚದಲ್ಲಿ ಪ್ರಮುಖ ರಸ್ತೆಗಳ ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು ಎಂದರು.

ಬಿಬಿಎಂಪಿ ಗುತ್ತಿಗೆದಾರರು ಬಿಲ್ ಬಾಕಿ ಬಗ್ಗೆ ಪ್ರತಿಭಟನೆ ವಿಚಾರ ಕೇಳಿದಾಗ, 'ಗುತ್ತಿಗೆದಾರರ ನೋವು ನನಗೂ ಅರ್ಥವಾಗುತ್ತದೆ. ಶೇ.50 ರಷ್ಟಿದ್ದ ಬಿಲ್ ಬಾಕಿಯನ್ನು ಶೇ.75 ಕ್ಕೆ ಇಳಿಸಿದ್ದೇನೆ. ಒಂದಷ್ಟು ಭಾಗ ಆಯೋಗದ ಮುಂದಿದೆ. ಇದು ಇತ್ಯರ್ಥವಾದ ನಂತರ ಕಾನೂನಾತ್ಮಕವಾಗಿ ಹೇಗೆ ಸಹಾಯ ಮಾಡಲಾಗುವುದೋ ಆ ರೀತಿ ಅವರ ನೆರವಿಗೆ ನಿಲ್ಲಲಾಗುವುದು' ಎಂದು ಹೇಳಿದರು.

ಗುತ್ತಿಗೆದಾರರು ಕೆಲಸ ಮಾಡುವುದಿಲ್ಲ ಎಂದರೆ ಮತ್ತೊಬ್ಬ ಬಂದು ಕೆಲಸ ನಿರ್ವಹಿಸುತ್ತಾನೆ. ಇವರು ಮಾಡುವುದಿಲ್ಲ ಎಂದರೆ ಮತ್ತೊಬ್ಬ. ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಬಾರದು. ಕೆ.ಆರ್.ಪುರಂ ವಾರ್ಡಿನಲ್ಲಿ ನೀರಿನ ಸಮಸ್ಯೆ ಬಗೆಹರಿದಿಲ್ಲ ಎನ್ನುವುದರ ಬಗ್ಗೆ ಕೇಳಿದಾಗ, 'ಇನ್ನೊಂದು ವಾರದಲ್ಲಿ ಐದನೇ ಹಂತದ ನೀರು ಸರಬರಾಜು ಯೋಜನೆ ಪ್ರಾರಂಭ ಮಾಡಲಾಗುವುದು. ಇದರ ಬಗ್ಗೆ ಆ ಭಾಗದ ಶಾಸಕರು ಗಮನ ಸೆಳೆದಿದ್ದಾರೆ. ಆದಷ್ಟು ಬೇಗ ಬಗೆಹರಿಸಲಾಗುವುದು ಎಂದರು.

ಬಿಬಿಎಂಪಿ ವಲಯದಲ್ಲಿ ʼನಂಬಿಕೆ ನಕ್ಷೆʼ ಯೋಜನೆಗೆ ಚಾಲನೆ: ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್​ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50/80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಶಿವಕುಮಾರ್ ತಿಳಿಸಿದರು.

ಬಿಡಿಎ, ಗೃಹನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋಧಕರಂತೆ ಅನುಮೋದಿತ ಎಂಜಿನಿಯರ್​ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್​ಗಳು ಪರಿಶೀಲನೆ ನಡೆಸುತ್ತಾರೆ ಎಂದರು.

ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯಿಂದ 7 ಜಿಲ್ಲೆಗಳಿಗೆ ಅನುಕೂಲ: ಸಂಪೂರ್ಣ ಮಾಹಿತಿ ನೀಡಿದ ಡಿಸಿಎಂ - Yettinhole Project

ETV Bharat Logo

Copyright © 2025 Ushodaya Enterprises Pvt. Ltd., All Rights Reserved.