ETV Bharat / state

ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ?, ವಿಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಸಿಎಂ ಶಿವಕುಮಾರ್​ - DK SHIVAKUMAR REACTION ON RAIN

ಇಂದು ಕೂಡ ಮಳೆ ಸಾಧ್ಯತೆ ಇದೆ, ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್​​ ಮನವಿ ಮಾಡಿದ್ದಾರೆ.

DCM DK Shivakumar Reaction On Bengaluru Rain incident
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (ಈಟಿವಿ ಭಾರತ್​​)
author img

By ETV Bharat Karnataka Team

Published : Oct 16, 2024, 1:11 PM IST

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇಂದು ಕೂಡ ಮಳೆ ಸಾಧ್ಯತೆ ಇದೆ, ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಇದೇ ವೇಳೆ ಮನವಿ ಮಾಡಿಕೊಂಡರು.

ಡಿ.ಕೆ.ಶಿವಕುಮಾರ್ (ETV Bharat)

ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಕಾರ್ಯಕ್ರಮದಿಂದ ಮರಳಿದ ನಂತರ ಇಂದು ಸಂಜೆ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ ಎಂದರು.

ನಗರದಲ್ಲಿ ಮಳೆ ಅವಾಂತರದ ಕುರಿತು ವಿರೋಧ ಪಕ್ಷಗಳ ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ ಎಂದು ಡಿಸಿಎಂ ತಿಳಿಸಿದರು.

ಇದನ್ನೂ ಓದಿ: ಮಳೆ ನಿಂತ ಕೆಲ ನಿಮಿಷಗಳಲ್ಲೇ ಪಂದ್ಯಕ್ಕೆ ರೆಡಿ; ಚಿನ್ನಸ್ವಾಮಿಯಲ್ಲಿದೆ ಅತ್ಯಾಧುನಿಕ 'ಸಬ್​ಏರ್' ತಂತ್ರಜ್ಞಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.