ETV Bharat / state

ಬಿಜೆಪಿಯವರು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್ - DK Shivakumar

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವುದಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ''ಅಧಿಕಾರ ಕಳೆದುಕೊಳ್ಳುವ ಭಯದಿಂದ ಈ ಸಮಯದಲ್ಲಿ ಸಿಎಎ ಜಾರಿಗೆ ಮುಂದಾಗಿದ್ದಾರೆ'' ಎಂದು ಆರೋಪಿಸಿದರು.

dcm-dk-shivakumar
ಡಿಸಿಎಂ ಡಿ.ಕೆ.ಶಿವಕುಮಾರ್
author img

By ETV Bharat Karnataka Team

Published : Mar 14, 2024, 3:24 PM IST

ಬೆಂಗಳೂರು : ''ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ಸುಳ್ಳು ಪ್ರಚಾರಕ್ಕೆ ಮುಂದಾಗಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದು ಬಿಟ್ಟು, ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ತರಾಟೆಗೆ ತೆಗೆದುಕೊಂಡರು. ''ಕಾವೇರಿ ನೀರು ಪೂರೈಕೆ ಪ್ರದೇಶಗಳಲ್ಲಿ ನೀರಿನ ಕೊರತೆಯಿಲ್ಲ. ಕೊಳವೆ ಬಾವಿಗಳು ಬತ್ತಿರುವ ಕಡೆಗಳಲ್ಲಿ ಮಾತ್ರ ಅಭಾವ ಹೆಚ್ಚಾಗಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ ಎಂಬುದು ಸುಳ್ಳು. ನಮ್ಮಲ್ಲಿ ನೀರೇ ಇಲ್ಲದಿರುವಾಗ ತಮಿಳುನಾಡಿಗೆ ಎಲ್ಲಿಂದ ನೀರು ಬಿಡಲು ಸಾಧ್ಯ? ಮೇಲಾಗಿ ಅವರು ನೀರು ಕೇಳಿಯೇ ಇಲ್ಲ. ಬಿಜೆಪಿಯದು ಕೇವಲ ರಾಜಕೀಯ ಗಿಮಿಕ್. ರಾಜ್ಯ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ಮೇಕೆದಾಟು ಯೋಜನೆಗೆ ಕೇಂದ್ರ ಬಿಜೆಪಿ ಸರ್ಕಾರದಿಂದ ಅನುಮತಿ ಕೊಡಿಸಲಿ'' ಎಂದು ಒತ್ತಾಯಿಸಿದರು.

ಅಸೂಯೆಯಿಂದ ಬಿಜೆಪಿ ಅಪಪ್ರಚಾರ: ''ಸರ್ಕಾರದ ಯಶಸ್ಸು ನೋಡಿ ಸಹಿಸಲಾಗದೇ ವಿರೋಧ ಪಕ್ಷಗಳು ಸುಳ್ಳು ಪ್ರಚಾರ ಮಾಡುತ್ತಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ತಮಿಳುನಾಡಿಗೂ, ಕಾವೇರಿ ನೀರಿಗೂ ಏನು ಸಂಬಂಧ? ತಮಿಳುನಾಡಿನವರು ನೀರು ಬಿಡಿ ಎಂದು ಕೇಳಿದ್ದಾರಾ? ಕೇಳದಿದ್ದರೂ ನೀರು ಬಿಡಲು ನಮಗೆ ತಲೆ ಕೆಟ್ಟಿದೆಯಾ? ಬೆಂಗಳೂರಿಗೆ ಕುಡಿಯಲು ನೀರನ್ನು ಸಮರ್ಪಕವಾಗಿ ಪೂರೈಸಲು ನೀರು ಹರಿಸಲಾಗಿದೆ. ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆಯಲ್ಲ ಎಂಬ ಅಸೂಯೆಯಿಂದ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಅವರದ್ದು ಕೇವಲ ರಾಜಕಾರಣ'' ಎಂದು ಟೀಕಿಸಿದರು.

ಸಂಸ್ಕರಿಸಿದ ನೀರಿನ ಪೂರೈಕೆಗೆ ಜನ ಮುಂದೆ ಬರುತ್ತಿದ್ದಾರಾ ಎಂದು ಕೇಳಿದಾಗ, ''ಖಂಡಿತವಾಗಿಯೂ ಜನ ಇದಕ್ಕೆ ಮುಂದೆ ಬಂದಿದ್ದಾರೆ. ಉದ್ಯಾನ, ಕೈಗಾರಿಕೆಗಳಿಗೆ ತುರ್ತು ಪರಿಸ್ಥಿತಿಯಲ್ಲಿ ಈ ನೀರನ್ನು ನೀಡಲಾಗುತ್ತಿದೆ'' ಎಂದು ತಿಳಿಸಿದರು.

ಮಂಜುನಾಥ್ ಅವರನ್ನು ಗೌರವಿಸುತ್ತೇವೆ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಮಂಜುನಾಥ್ ಅವರ ಸ್ಪರ್ಧೆ ವಿಚಾರವಾಗಿ ಕೇಳಿದಾಗ, ''ನಾವು ಮಂಜುನಾಥ್ ಅವರನ್ನು ಗೌರವಿಸುತ್ತೇವೆ. ಅವರು ಉತ್ತಮ ವೈದ್ಯರು. ಅವರಿಗೆ ನಾವು ಬೆಂಬಲ ನೀಡಿದ್ದೆವು. ಆದರೆ ರಾಜಕೀಯವೇ ಬೇರೆ. ನನ್ನ ಸಹೋದರ ಈ ಕ್ಷೇತ್ರದಲ್ಲಿ ಸಂಸದನ ರೀತಿ ಕೆಲಸ ಮಾಡುತ್ತಿಲ್ಲ, ಗ್ರಾಮ ಪಂಚಾಯಿತಿ ಸದಸ್ಯನಂತೆ ಜನರ ಮಧ್ಯೆ ನಿಂತು ಕೆಲಸ ಮಾಡುತ್ತಿದ್ದಾರೆ'' ಎಂದು ತಿಳಿಸಿದರು.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಪ್ರತಿಕ್ರಿಯಿಸಿ, ''ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ನೀಡಿದ್ದ ಕಾಲಮಿತಿ ಮುಕ್ತಾಯವಾಗಿದೆ. ಕನ್ನಡ ಪರ ಚಳವಳಿಗಾರರು ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಸರ್ಕಾರ ಕನ್ನಡ ಬಳಕೆ ಕಡ್ಡಾಯ ಮಾಡಲು ಬದ್ಧವಾಗಿದೆ'' ಎಂದು ತಿಳಿಸಿದರು.

ಬಿಜೆಪಿ ಪಟ್ಟಿಯಲ್ಲಿ 6 ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದೆ ಎಂದು ಕೇಳಿದಾಗ, ''ನನಗೆ ಬಂದಿರುವ ಮಾಹಿತಿ ಪ್ರಕಾರ 10 ಹಾಲಿ ಸಂಸದರಿಗೆ ಟಿಕೆಟ್ ತಪ್ಪಲಿದೆ. ಅದು ಅವರ ಪಕ್ಷದ ವಿಚಾರ. ಅವರು ಏನಾದರೂ ಮಾಡಿಕೊಳ್ಳಲಿ'' ಎಂದರು. ಟಿಕೆಟ್ ತಪ್ಪಿರುವವರಲ್ಲಿ ಯಾರಾದರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಎಂದು ಕೇಳಿದಾಗ, ''ಈ ಸಮಯದಲ್ಲಿ ಅದನ್ನು ಬಿಡಿಸಿ ಹೇಳುವುದಿಲ್ಲ' ಎಂದು ಹೇಳಿದರು.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಿದ್ದಕ್ಕೆ, ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್ ಲೇವಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.