ETV Bharat / state

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕೃತಘ್ಞತೆ - ಪುಟ್ಟಣ್ಣ

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವಿನ ನಗೆ ಬೀರಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದ್ದಾರೆ.

DCM DK Shivakumar
ಡಿಸಿಎಂ ಡಿ.ಕೆ ಶಿವಕುಮಾರ್
author img

By ETV Bharat Karnataka Team

Published : Feb 21, 2024, 9:06 AM IST

ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಕೇವಲ ಆರಂಭವಷ್ಟೇ. ಲೋಕಸಭೆ ಚುನಾವಣೆ ಬಗ್ಗೆ ಜನರ ಮನಸ್ಥಿತಿ ಹೇಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ನಿನ್ನೆ ಸಂಜೆ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಚುನಾವಣೆಯನ್ನು ರಾಜ್ಯ ರಾಜಕೀಯದ ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಬಣ್ಣಿಸುತ್ತಿದ್ದರು. ಇಂದು ಪ್ರಜ್ಞಾವಂತ ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪುಟ್ಟಣ್ಣ ಅವರಿಗೆ ಅಭಿನಂದನೆ ಹಾಗೂ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಾಜ್ಯ ಹಾಗೂ ಸರ್ಕಾರಕ್ಕೆ ಇಂದು ವಿಶೇಷ ದಿನ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆದಿದೆ. ಹಿಂದೆ ಪುಟ್ಟಣ್ಣ ಅವರೇ ಬಿಜೆಪಿಯಿಂದ ಗೆದ್ದಿದ್ದರು. ಅದು ಬಿಜೆಪಿಯ ಕ್ಷೇತ್ರವಾಗಿತ್ತು. ಅವರು ಸತತವಾಗಿ ಐದನೇ ಬಾರಿಗೆ ಗೆದ್ದಿದ್ದಾರೆ. ಅವರು ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಪ್ರಕಾಶ್ ಹುಕ್ಕೇರಿ, ಮಂಡ್ಯದಲ್ಲಿ ಮಧು ಮಾದೇಗೌಡ ಅವರು ಗೆದ್ದಿದ್ದರು. ಈ ಫಲಿತಾಂಶದ ಮೂಲಕ ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ಇದು ಹೆಮ್ಮೆ ತಂದಿದ್ದು, ಇವರ ಸೇವೆಯನ್ನು ನಾವು ಮಾಡುತ್ತೇವೆ. ಪುಟ್ಟಣ್ಣ ಅವರು ಶಿಕ್ಷಕರ ಪರವಾಗಿ ಎತ್ತುವ ಧ್ವನಿಗೆ ನಾವು ಆದ್ಯತೆ ನೀಡುತ್ತೇವೆ. ನಮ್ಮ ಸರ್ಕಾರ ಈಗಾಗಲೇ ನಿರುದ್ಯೋಗ ಪದವಿಧರರಿಗೆ ಯುವನಿಧಿ ಮೂಲಕ ನಿರುದ್ಯೋಗ ಭತ್ಯೆ ನೀಡುತ್ತಿದೆ. ನಮಗೆ ಬೆಂಬಲವಾಗಿ ನಿಂತ ಕಾರ್ಯಕರ್ತರು, ಶಿಕ್ಷಣ ಆಡಳಿತ ಮಂಡಳಿಗಳು, ಮುಖಂಡರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು: 110 ಗ್ರಾಮಗಳಿಗೆ ಮೇ ತಿಂಗಳ ವೇಳೆ ಕುಡಿಯಲು ಕಾವೇರಿ ನೀರು ಪೂರೈಕೆ: ಡಿಸಿಎಂ ಡಿಕೆ ಶಿವಕುಮಾರ್

ಅಧಿಕಾರಿಗಳ ದುರ್ಬಳಕೆಯಾಗಿದೆ ಎಂಬ ಮೈತ್ರಿ ಅಭ್ಯರ್ಥಿ ಹೇಳಿಕೆ ಬಗ್ಗೆ ಕೇಳಿದಾಗ, "ಸೋತವರು ಏನು ಹೇಳಲು ಸಾಧ್ಯ? ಬಿದ್ದರೂ ಮೀಸೆ ಮಣ್ಣಾಗಲಿಲ್ಲ" ಎಂಬ ಗಾದೆ ಇದೆ. ಅವರು ಎಲ್ಲಾ ಪ್ರಯತ್ನ ಮಾಡಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ: ಕೋಲಾರಕ್ಕೆ ನೀರುಣಿಸುವ ಕೆಸಿ ವ್ಯಾಲಿ ಯೋಜನೆ ಬಗ್ಗೆ ಜನರಿಗೆ ತಪ್ಪು ಸಂದೇಶ ನೀಡಬೇಡಿ: ಕೃಷ್ಣ ಬೈರೇಗೌಡ

ರಾಜ್ಯಸಭೆ ಚುನಾವಣೆಗೆ ಆಮಿಷ ನೀಡುತ್ತಿರುವುದಾಗಿ ಕಾಂಗ್ರೆಸ್ ಶಾಸಕರು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಗ್ಗೆ ಪ್ರಶ್ನೆ ಎದುರಾದಾಗ, "ನನಗೂ ಈ ವಿಚಾರವಾಗಿ ಮಾಹಿತಿ ಬಂದಿವೆ. ತನಿಖಾ ತಂಡ ಇದರ ತನಿಖೆ ಮಾಡಲಿದೆ" ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.