ETV Bharat / state

ಮಹಾರಾಷ್ಟ್ರದಲ್ಲಿ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿ ಬಿಜೆಪಿ ಗೆದ್ದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ - DCM D K SHIVAKUMAR

ನಾನು ರಾಜ್ಯ ಕಾಂಗ್ರೆಸ್ ಅಧ್ಯಕ್ಷನಾದಾಗ ಪಕ್ಷದ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಭರವಸೆ ನೀಡಲಾಯಿತು. ಅದೇ ರೀತಿ ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು. ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

dcm-dk-shivakumar
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Nov 24, 2024, 9:32 PM IST

ರಾಮನಗರ : ''ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಆದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕನಕಪುರದಲ್ಲಿ ಇಂದು ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ''ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮಿ ಯೋಜನೆಯನ್ನೇ ನಕಲು ಮಾಡಿ 'ಮಾಝಿ ಲಡಕಿ ಬಹಿನ್ ಯೋಜನಾ' ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ರೂ. ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು'' ಎಂದಿದ್ದಾರೆ.

ಸಾಮಾನ್ಯ ಮಹಿಳೆಯರು ಮುಂದೆ ಬರಬೇಕು: ''ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ನಿಲ್ಲಿಸುತ್ತಿದ್ದಾರೆ. ಸಾಮಾನ್ಯ ಮಹಿಳೆಯರು ಅಧಿಕಾರದ ಗದ್ದುಗೆ ಏರಲು ಮುಂದಕ್ಕೆ ಬರಬೇಕು. ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಶೇ.33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಬೇಕಾಗಬಹುದು. ಅದಕ್ಕಾಗಿ ಸಾಮಾನ್ಯ ಮಹಿಳೆಯರು ಈಗಿನಿಂದಲೇ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಿ'' ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು (ETV Bharat)

ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು: ''ಎಸ್.ಎಂ.ಕೃಷ್ಣ ಸಂಪುಟದಲ್ಲಿ ನಾನು ಸಹಕಾರ ಸಚಿವನಾಗಿದ್ದೆ. ಆಗ ಈ ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು. ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಸ್ವಸಹಾಯ ಗುಂಪುಗಳಿದ್ದವು. ಇವುಗಳನ್ನೇ ಸ್ತ್ರೀಶಕ್ತಿ ಸಂಘಗಳೆಂದು ಪರಿವರ್ತಿಸಿ, ಸಚಿವರಾಗಿದ್ದ ಮೋಟಮ್ಮ ಅವರಿಗೆ ನೇತೃತ್ವ ನೀಡಲಾಯಿತು. ಸ್ತ್ರೀ ಶಕ್ತಿ ಸಂಘಗಳು ಮಾಡಿದ ಪರಿಣಾಮವಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಇರುತ್ತಿಲ್ಲ ಎಂದು ಅನೇಕ ನಾಯಕರು ನನಗೆ ಬೈದರು. ಮನೆಯಲ್ಲಿ ಹೆಣ್ಣಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತೆ. ಹೆಣ್ಣು ಕುಟುಂಬದ ಕಣ್ಣು. ಕುಟುಂಬದಲ್ಲಿ ಹೆಣ್ಣಿನ ಮನಸ್ಥಿತಿ, ಪರಿಸ್ಥಿತಿ ಆರೋಗ್ಯವಾಗಿ ಇದ್ದರೆ, ನಾವೆಲ್ಲರೂ ಆರೋಗ್ಯವಾಗಿ ಇದ್ದಂತೆ. ಪುರುಷರೂ ಇದಕ್ಕೆ ಕೊಡುಗೆ ಕೊಡಬೇಕು'' ಎಂದು ಹೇಳಿದರು.

ಮಹಿಳೆಯರು ಜಮೀನು ಮಾರಲು ಬಿಡಬೇಡಿ: ''ಯಾವುದೇ ಕಾರಣಕ್ಕೂ ತಮ್ಮ ಪಾಲಿನ ಭೂಮಿ ಮಾರಾಟ ಮಾಡದಂತೆ ಮನೆಯ ಪುರುಷರಿಗೆ ಮಹಿಳೆಯರು ಬುದ್ಧಿ ಮಾತು ಹೇಳಬೇಕು. ಏಕೆಂದರೆ ಭೂಮಿಯ ಬೆಲೆ ಹೆಚ್ಚಾಗಿದೆ. ನಾನು ಮೊದಲ ಬಾರಿಗೆ ಇಲ್ಲಿ ಚುನಾವಣೆಗೆ ನಿಂತಾಗ, ಒಂದು ಎಕರೆಗೆ ಎರಡರಿಂದ ಮೂರು ಲಕ್ಷ ಮಾತ್ರ ಇತ್ತು. ಈಗ 50 ಲಕ್ಷ ಬೆಲೆ ಬಾಳುತ್ತದೆ. ಇದನ್ನು ರಾಮನಗರ ಜಿಲ್ಲೆ ಎಂದು ಕರೆಯಬಹುದು. ಆದರೆ ಮೂಲತಃ ನಾವೆಲ್ಲರೂ ಬೆಂಗಳೂರು ಜಿಲ್ಲೆಗೆ ಸೇರಿದವರು. ಕನಕಪುರ ಎಷ್ಟರಮಟ್ಟಿಗೆ ಅಭಿವೃದ್ಧಿ ಆಗುತ್ತದೆ ಎಂಬುದನ್ನು ನಾನು ಬಹಿರಂಗವಾಗಿ ಹೇಳುವುದಿಲ್ಲ. ಭೂಮಿ ಕಳೆದುಕೊಂಡರೆ ನಿಮ್ಮ ಜೇಬಿಗೆ ದುಡ್ಡನ್ನು ನಾನು ಹಾಕಲು ಆಗುವುದಿಲ್ಲ. ಜಮೀನು ಮಾರಿದರೆ ಒಳ್ಳೆಯ ಬೆಲೆ ಬರುತ್ತದೆ ಎಂದು ಆಮಿಷಕ್ಕೆ ಒಳಗಾಗಬೇಡಿ. ಯಾವುದೇ ಕಾರಣಕ್ಕೂ ಒಂದು ಗುಂಟೆ ಜಮೀನನ್ನು ಕಳೆದುಕೊಳ್ಳಬೇಡಿ'' ಎಂದು ಹೇಳಿದರು.

ಕನಕಪುರಕ್ಕೆ ಹೊಸ ರೂಪ: ''ನಾವು ಇನ್ನೂ ಅಭಿವೃದ್ಧಿಯ ಮೈಲಿಗಲ್ಲನ್ನು ಸಾಧಿಸಬೇಕಾಗಿದೆ. ಕನಕಪುರಕ್ಕೆ ಹೊಸ ರೂಪವನ್ನು ನೀಡಬೇಕಾಗಿದೆ. 2025ಕ್ಕೆ ಕನಕಪುರದ ಅಭಿವೃದ್ಧಿಗೆ ಹೊಸ ಕಾರ್ಯಕ್ರಮಗಳನ್ನು ನೀಡಲಾಗುವುದು. ಸರ್ಕಾರದಲ್ಲಿ ಹೆಚ್ಚಿನ ಜವಾಬ್ದಾರಿ ಇರುವ ಕಾರಣ ನಿಮ್ಮನ್ನು ಭೇಟಿಯಾಗಲು ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮೆಲ್ಲರ ಅಹವಾಲುಗಳನ್ನು ಕೇಳಲಾಗುವುದು'' ಎಂದು ತಿಳಿಸಿದರು.

ಕೇವಲ ಸಾಲ ಪಡೆಯಬಾರದು, ಉದ್ಯೋಗ ನೀಡಬೇಕು: ''ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಶ್ರೀಕಂಠು ಅವರ ನೇತೃತ್ವದಲ್ಲಿ ನಿಮಗೆ ಕೆನರಾ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇವುಗಳನ್ನು ನೀವು ಬಳಸಿಕೊಂಡು ಉತ್ತಮ ಮಟ್ಟಕ್ಕೆ ಬೆಳೆದಿದ್ದೀರಿ ಎನ್ನುವುದು ನನ್ನ ಭಾವನೆ'' ಎಂದರು.

''ನಾನು ಈ ರಾಜ್ಯದ ಡಿಸಿಎಂ ಆಗಿರಬಹುದು. ಆದರೆ ಮೊಟ್ಟ ಮೊದಲನೆಯದಾಗಿ ಈ ಕನಕಪುರದ ಮಗ. ನನ್ನ ಬೆಳೆಸಿದವರು ನೀವು. ನನ್ನ ಪರವಾಗಿ ಪ್ರತಿ ಚುನಾವಣೆಯಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದವರು ನೀವು. ನನಗೆ ಶಕ್ತಿ ಕೊಟ್ಟವರು ಇಲ್ಲಿನ ಜನತೆ. ಈ ಕಾರಣಕ್ಕೆ ಇಡೀ ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ಕೊಡುವಷ್ಟು ಅಧಿಕಾರ ನಮಗೆ ಸಿಕ್ಕಿದೆ'' ಎಂದು ಹೇಳಿದರು.

ಇದನ್ನೂ ಓದಿ : ಚುನಾವಣೆ ಮುಂಚಿತವಾಗಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.