ETV Bharat / state

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟಾಪಿಂಗ್ ಯೋಜನೆ: ಡಿಸಿಎಂ - SHIVAKUMAR

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟಾಪಿಂಗ್ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ಧಾರೆ.

dcm-shivakumar-reaction-on-white-topping-on-road-in-bengaluru
ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲಿಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)
author img

By ETV Bharat Karnataka Team

Published : Feb 16, 2025, 9:49 PM IST

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ 1,700 ಕೋಟಿ ರೂ. ಹಣ ವೆಚ್ಚ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈ ಯೋಜನೆಯಲ್ಲಿ 14 ಪ್ಯಾಕೇಜ್​ಗಳ ಮೂಲಕ ಬೆಂಗಳೂರಿನ 150 ಕಿ.ಮೀ ಉದ್ದದ 97 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬಿಡಬ್ಲ್ಯೂಎಸ್ಎಸ್​ಬಿ, ಬಿಬಿಎಂಪಿ, ಬಿಡಿಎ, ಬೆಸ್ಕಾಂಗಳ ನಡುವೆ ಸಮನ್ವಯತೆ ಸಾಧಿಸಿ ಶಾಶ್ವತ ರಸ್ತೆ ನಿರ್ಮಿಸಲಾಗುತ್ತಿದೆ. ಕೇಬಲ್, ಪವರ್ ವೈಯರ್​ಗಳಿಗೆ ಅವಕಾಶ ಕಲ್ಪಿಸಿ, ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಈ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದರು.

ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲಿಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್
ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲಿಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟಾಪಿಂಗ್ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದರು.

ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ. ಇದರ ಜತೆಗೆ, ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ ಎಂದು ಹೇಳಿದರು.

dcm-shivakumar-reaction-on-white-topping-on-road-in-bengaluru
ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲಿಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (ETV Bharat)

ಈ ಯೋಜನೆಗೆ ಮೀಸಲಿಟ್ಟಿರುವ 1700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ. ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲ್ಯೂಎಸ್ಎಸ್​ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ, ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ, ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ ಎಂದು ವಿವರಿಸಿದರು.

ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿದ ಡಿಸಿಎಂ (ETV Bharat)

ಟನೆಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನೆಲ್ ರಸ್ತೆ ಮಾಡಿಸುತ್ತಿದ್ದಾರೆ?. ಅವರಿಗೂ ಇದಕ್ಕೂ ಏನು ಸಂಬಂಧ?. ಅವರ ಇಲಾಖೆಯ ಕೆಲಸ ಅವರು ಮಾಡಲಿ ಎಂದರು.

ಇದನ್ನೂ ಓದಿ: 'ಸಿದ್ದರಾಮಯ್ಯ ನಮ್ಮ ನಾಯಕ, ಸ್ಥಳೀಯ ಮಟ್ಟದಿಂದ ಲೋಕಸಭಾ ಚುನಾವಣೆವರೆಗೂ ಅವರು ಬೇಕು'

ಇದನ್ನೂ ಓದಿ: ಸದ್ಯದಲ್ಲೇ ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ ಚುರುಕು: ಕೇಂದ್ರ ಸಚಿವ ಕುಮಾರಸ್ವಾಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.