ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ನಲ್ಲಿರುವ ಶವ ಕೊಳೆತ ಸ್ಥಿತಿಯಲ್ಲಿದೆ. ಅಂದಾಜು 40-45 ವರ್ಷದ ವ್ಯಕ್ತಿಯದ್ದು ಎಂದು ಹೇಳಲಾಗಿದೆ.
ಕಳೆದ 15 ದಿನಗಳ ಹಿಂದೆಯೇ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಕ್ಯಾಂಪ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎಂಬುವುದರ ಬಗ್ಗೆ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ.
ಪೊಲೀಸ್ ಠಾಣೆ ಆವರಣದಲ್ಲಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ತುಮಕೂರು: ಕಾರೊಂದರಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೂವರು ವ್ಯಕ್ತಿಗಳ ಶವಗಳು ಪತ್ತೆ - Three persons dead body