ETV Bharat / state

ಅಪಘಾತದಲ್ಲಿ ಸಾವನ್ನಪ್ಪಿದ ಪುತ್ರಿ; ಅಂಗಾಂಗ ದಾನ ಮಾಡಿ 6 ಮಕ್ಕಳಿಗೆ ನೆರವಾದ ಅಪ್ಪ-ಅಮ್ಮ - ORGANS DONATED

author img

By ETV Bharat Karnataka Team

Published : Jul 29, 2024, 1:27 PM IST

ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದ ತಮ್ಮ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಮಾಜಕ್ಕೆ ಮಾದರಿಯಾಗಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಅಂಗಾಂಗ 6 ಮಕ್ಕಳಿಗೆ ದಾನ
ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಅಂಗಾಂಗ 6 ಮಕ್ಕಳಿಗೆ ದಾನ (ETV Bharat)
ಅಪಘಾತದಲ್ಲಿ ಸಾವನ್ನಪ್ಪಿದ ಪುತ್ರಿಯ ಅಂಗಾಂಗ ದಾನ (ETV Bharat)

ತುಮಕೂರು: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗವನ್ನು ಪೋಷಕರು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರು ನಗರದ ಶ್ರೀ ವಿವೇಕಾನಂದ ಇಂಟರ್​ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ ಚಂದನ ಜು.23ರಂದು ಶಾಲೆ ಮುಗಿಸಿ ವಾಪಸ್ ಮನೆಗೆ ಬರುವಾಗ ಅಪಘಾತ ಸಂಭವಿಸಿತ್ತು. ಲಾರಿ ಡಿಕ್ಕಿ ಹೊಡೆದು ಚಂದನ ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಅಪಘಾತದ ಬಳಿಕ ಹಾಸನ ಮೆಡಿಕಲ್​ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದನ ಕೊನೆಯುಸಿರೆಳೆದಿದ್ದಳು. ಕೊನೆಗೆ ಅವಳ ಅಂಗಾಂಗವನ್ನು ದಾನ ಮಾಡಲು ಹೆತ್ತವರು ಒಪ್ಪಿದ್ದಾರೆ. ಪೋಷಕರ ನಿರ್ಧಾರಕ್ಕೆ ಗೌರವ ಸಲ್ಲಿಸಿದ ಆಸ್ಪತ್ರೆ ಸಿಬ್ಬಂದಿ ಚಂದನಳ ಅಂಗಾಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಿದ್ದಾರೆ.

ಇಂದು ಸಂಜೆ ಚಂದನಳ ಅಂತ್ಯಸಂಸ್ಕಾರ ನೆರವೇರಲಿದೆ. ಅದಕ್ಕೂ ಮೊದಲು ಇಂದು ತಿಪಟೂರು ನಗರದ ಹಾಸನ ವೃತ್ತದಿಂದ ಹಳೆಪಾಳ್ಯದ ಸ್ವಗೃಹದವರೆಗೂ ಸರ್ಕಾರಿ ಗೌರವಗಳೊಂದಿಗೆ ಮತ್ತು ವಿವಿಧ ಶಾಲಾ ಮತ್ತು ಸಂಘ-ಸಂಸ್ಥೆಗಳಿಂದ ಗೌರವ ಸಮರ್ಪಣೆಗಳೊಂದಿಗೆ ಮೆರವಣಿಗೆಯ ಮೂಲಕ ಮೃತದೇಹವನ್ನು ಸಾಗಿಸಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಚಂದನಳ ಆತ್ಮಕ್ಕೆ ಶಾಂತಿ ಕೋರಿದರು.

ಇದನ್ನೂ ಓದಿ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯ; ಅಂಗಾಂಗ ದಾನದಿಂದ ನಾಲ್ವರ ಬದುಕಿಗೆ 'ಚಂದ್ರ'ನಾದ ಯುವಕ - Organ Donation

ETV Bharat Logo

Copyright © 2024 Ushodaya Enterprises Pvt. Ltd., All Rights Reserved.