ETV Bharat / state

ಬಂಡೀಪುರ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಜಿಂಕೆ ಸಾವು, ಚಾಲಕ ಅರೆಸ್ಟ್‌ - DEER DIED IN BANDIPUR

ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ಜಿಂಕೆಗೆ ಗುದ್ದಿದ ಚಾಲಕನನ್ನು ಬಂಧಿಸಲಾಗಿದೆ.

Deer crossing the road died after being hit by a car
ಕಾರು ಡಿಕ್ಕಿ ಹೊಡೆದು ಜಿಂಕೆ ಸಾವು (ETV Bharat)
author img

By ETV Bharat Karnataka Team

Published : 5 hours ago

ಚಾಮರಾಜನಗರ: ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಜಿಂಕೆ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲೂಕಿನ ಕೇರಳ ರಾಷ್ಟ್ರೀಯ ಹೆದ್ದಾರಿ-766ರ ಬಂಡೀಪುರ ಅಭಯಾರಣ್ಯದ ಮದ್ದೂರು ವಲಯದ ಕಗ್ಗಳದಹುಂಡಿ ಸಮೀಪದಲ್ಲಿ ಗುರುವಾರ ನಡೆಯಿತು. ಕಾರು ಚಾಲಕನನ್ನು ಬಂಧಿಸಲಾಗಿದೆ.

ಕೇರಳದ ವಯನಾಡ್‌ನ ಝಾಕೀರ್(56) ಬಂಧಿತ ಆರೋಪಿ. ಈತ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಸ್ವಿಫ್ಟ್​ (ಕೆ.ಎಲ್.72-313) ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದ. ಈ ವೇಳೆ ಕಗ್ಗಳದಹುಂಡಿ ಸಮೀಪ ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಜಿಂಕೆ ರಸ್ತೆಯಲ್ಲೇ ಪ್ರಾಣ ಕಳೆದುಕೊಂಡಿದೆ.

ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಚಾಲಕನ್ನು ಬಂಧಿಸಿ, ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಆರ್​ಎಫ್ಒ ಕೆ.ಪಿ.ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಗುಂಡ್ಲುಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್, ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಮದ್ದೂರು ವಲಯ ಉಪ ಅರಣ್ಯಾಧಿಕಾರಿ ಗೌಸ್, ಶಿವಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗದವರು ಸ್ಥಳದಲ್ಲಿ ಹಾಜರಿದ್ದರು.

ಇದನ್ನೂ ಓದಿ: ಶಿವಮೊಗ್ಗ : ಹುಲಿ-ಸಿಂಹಧಾಮದ ಅಂಜನಿ ವಯೋಸಹಜ ಸಾವು, 5ಕ್ಕೆ ಇಳಿದ ಹುಲಿಗಳ ಸಂಖ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.