ETV Bharat / state

ಸುದೀಪ್ ವಿರುದ್ಧ ಮಾನಹಾನಿಕರ ಹೇಳಿಕೆ: ಎಂ ಎನ್ ಸುರೇಶ್ ಮೇಲಿನ ಮಾನಹಾನಿ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಣೆ - Defamation statement against Sudeep

ನಿರ್ಮಾಪಕ ಎಂ ಎನ್ ಸುರೇಶ್​ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್​ ನಿರಾಕರಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Mar 26, 2024, 10:17 PM IST

ಬೆಂಗಳೂರು : ನಟ ಸುದೀಪ್ ಅವರು ನಿರ್ಮಾಪಕ ಎಂ. ಎನ್ ಸುರೇಶ್ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಪ್ರಕರಣ ರದ್ದುಪಡಿಸುವಂತೆ ಕೋರಿ ಸುರೇಶ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ವಜಾ ಮಾಡಿದೆ.

ದೂರು ಮತ್ತು ಸ್ವಯಂಪ್ರೇರಿತ ಹೇಳಿಕೆಯಲ್ಲಿ ಅರ್ಜಿದಾರರ ವಿರುದ್ಧ ನಿರ್ದಿಷ್ಟ ಆರೋಪಗಳಿದ್ದು, ದೂರುದಾರರ ಪ್ರಕಾರ ಅವು ಸುದೀಪ್ ಅವರಿಗೆ ಮಾನಹಾನಿ ಉಂಟು ಮಾಡಿದ್ದು, ಸಮಾಜದಲ್ಲಿ ಅವರ ವರ್ಚಸ್ಸಿಗೆ ಹಾನಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ, ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ಸಮನ್ಸ್ ಜಾರಿ ಮಾಡಿರುವುದರಲ್ಲಿ ಯಾವುದೇ ಕಾನೂನಿನ ದೋಷಗಳು ಕಂಡು ಬಂದಿಲ್ಲ ಎಂದು ಪೀಠ ತಿಳಿಸಿದೆ.

ಸುದೀಪ್ ಪರವಾಗಿ ವಾದಿಸಿದ ವಕೀಲರು, ಸುರೇಶ್ ಅವರು ಮಾಧ್ಯಮಗೋಷ್ಠಿ ನಡೆಸುವ ಮೂಲಕ ಅರ್ಜಿದಾರರಿಗೆ ಮಾನಹಾನಿ ಮಾಡಿದ್ದಾರೆ. ಸುರೇಶ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸ್ನೇಹಿತರು ಮತ್ತು ಬಂಧು-ಬಾಂಧವರು ಕರೆ ಮಾಡಿ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ವಿಚಾರಿಸಿದ್ದಾರೆ. ಇದು ಸಮಾಜದಲ್ಲಿ ಅರ್ಜಿದಾರರ ಘನತೆಗೆ ಚ್ಯುತಿ ಉಂಟು ಮಾಡಿದೆ. ಆರೋಪಿಗಳಾದ ಎನ್. ಎಂ ಸುರೇಶ್ ಮತ್ತು ಎನ್. ಎಂ ಕುಮಾರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್ ಹಾಕಿದ್ದು, ಅರ್ಜಿದಾರರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಎಂದು ಆಕ್ಷೇಪಿಸಿದ್ದರು.

ಸುರೇಶ್ ಪರ ವಕೀಲರು, ಸುದೀಪ್ ಮತ್ತು ಎನ್. ಎಂ ಕುಮಾರ್ ನಡುವೆ ವಿವಾದವಿದ್ದು, ತಾನು ಕನ್ನಡ ಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಮತ್ತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎಂಬ ಕಾರಣಕ್ಕೆ ತನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ತನ್ನ ವಿರುದ್ಧ ಯಾವುದೇ ದಾಖಲೆಗಳು ಇಲ್ಲ. ಇದನ್ನು ಪರಿಶೀಲಿಸದೇ ಸಮನ್ಸ್ ಜಾರಿ ಮಾಡುವ ಮೂಲಕ ವಿಚಾರಣಾಧೀನ ನ್ಯಾಯಾಲಯ ಪ್ರಮಾದ ಎಸಗಿದೆ ಎಂದು ವಾದಿಸಿದ್ದರು.

ಆರೋಪಿಗಳಾಗಿರುವ ಎಂ. ಎನ್ ಕುಮಾರ್ ಮತ್ತು ಎಂ. ಎನ್ ಸುರೇಶ್ ಅವರು ಮಾನಹಾನಿ ಹೇಳಿಕೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ನಟ ಸುದೀಪ್ ಖಾಸಗಿ ದೂರು ದಾಖಲಿಸಿದ್ದರು. ಇದರ ಸಂಜ್ಞೆ ಪರಿಗಣಿಸಿದ್ದ ವಿಚಾರಣಾಧೀನ ನ್ಯಾಯಾಲಯವು 2023ರ ಆಗಸ್ಟ್ ತಿಂಗಳಲ್ಲಿ ಆದೇಶ ನೀಡಿತ್ತು.

ಇದನ್ನೂ ಓದಿ : ಬಾಲ ನ್ಯಾಯ ಮಂಡಳಿಗೆ ಸಿಬ್ಬಂದಿ ಒದಗಿಸಲು 4 ವಾರಗಳ ಗಡುವು ನೀಡಿದ ಹೈಕೋರ್ಟ್ - Juvenile Justice Act

ETV Bharat Logo

Copyright © 2024 Ushodaya Enterprises Pvt. Ltd., All Rights Reserved.