ETV Bharat / state

ಕೇಂದ್ರ ಬಜೆಟ್​​ನತ್ತ ರಾಜ್ಯ ಸರ್ಕಾರದ ಚಿತ್ತ: ಬೆಂಗಳೂರು ಅಭಿವೃದ್ಧಿ ಸೇರಿ ಯಾವೆಲ್ಲಾ ಪ್ರಮುಖ ಯೋಜನೆಗಳಿಗೆ ಅನುದಾನದ ಬೇಡಿಕೆ? - UNION BUDGET 2025

ಕೇಂದ್ರ ಬಜೆಟ್‌ 2025: ಬೆಂಗಳೂರು ಅಭಿವೃದ್ಧಿ ಸೇರಿದಂತೆ ರಾಜ್ಯದ ಪ್ರಮುಖ ಬೇಡಿಕೆಗಳು ಯಾವುವು ನೋಡೋಣ.

DEMANDS ON UNION BUDGET 2025
ಬೆಂಗಳೂರು ನಗರ (IANS)
author img

By ETV Bharat Karnataka Team

Published : Jan 29, 2025, 8:04 AM IST

ಬೆಂಗಳೂರು: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕ ಸರ್ಕಾರ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಬೆಂಗಳೂರಿನ ಮಹತ್ವದ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ರಾಜ್ಯದ ಹಲವು ಮಹತ್ವದ ಯೋಜನೆಗಳಿಗೆ ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದೆ. ಈ ಸಂಬಂಧ ಈಗಾಗಲೇ ಕೇಂದ್ರದ ಮುಂದೆ ಅಧಿಕೃತ ಬೇಡಿಕೆಯ ಪಟ್ಟಿ ಸಲ್ಲಿಸಿದೆ.

ಫೆಬ್ರವರಿ 1ರಂದು ಕೇಂದ್ರ ಬಜೆಟ್-2025-26 ಮಂಡನೆಯಾಗಲಿದೆ. ಪ್ರಮುಖವಾಗಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಹಲವು ಮಹತ್ವದ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರಾಜ್ಯದ ಹಲವು ಯೋಜನೆಗಳಿಗೆ ಅನುದಾನ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಸಂಬಂಧ ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಪತ್ರ ಬರೆದು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

₹90,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ನೆರವಿನ ಬೇಡಿಕೆ: ಬೆಂಗಳೂರಿನ ಸುಮಾರು 90,000 ಕೋಟಿ ರೂ.ಗೂ ಅಧಿಕ ವೆಚ್ಚದ ಮಹತ್ವದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಆರ್ಥಿಕ ನೆರವಿನ ಬೇಡಿಕೆ ಇಟ್ಟಿದೆ. ಇದರಲ್ಲಿ ಪ್ರಮುಖವಾಗಿ ಟನೆಲ್ ರಸ್ತೆ ಯೋಜನೆ, ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗಳು ದೊಡ್ಡ ಪ್ರಮಾಣದ ಅಭಿವೃದ್ಧಿ ಯೋಜನೆಗಳಾಗಿವೆ. ನಗರದ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್​​ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಮಹತ್ವದ ಯೋಜನೆಗಳನ್ನು ಕೈಗೊಂಡಿದ್ದು, ಅವುಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್​​​ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

ನಗರ ಸುರಂಗ ಮಾರ್ಗಕ್ಕೆ ಅನುದಾನದ ಮನವಿ: ಸಂಚಾರ ದಟ್ಟಣೆ ನಿವಾರಣೆಗಾಗಿ ಟನಲ್ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೆಬ್ಬಾಳದ ಎಸ್ಟೀಮ್ ಮಾಲ್​ನಿಂದ ಹೆಚ್​​ಎಸ್​ಆರ್ ಬಡಾವಣೆಯ ಸಿಲ್ಕ್ ಬೋರ್ಡ್ ಜಂಕ್ಷನ್​​ವರೆಗೂ ಉತ್ತರ-ದಕ್ಷಿಣ 18.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹15 ಸಾವಿರ ಕೋಟಿ ವೆಚ್ಚವಾಗಲಿದೆ. ಕೆ.ಆರ್.ಪುರ ವೃತ್ತದಿಂದ ನಾಯಂಡನಹಳ್ಳಿ ಜಂಕ್ಷನ್ ವರೆಗೂ 28.5 ಕಿ.ಮೀ ಟನಲ್ ರಸ್ತೆ ನಿರ್ಮಾಣಕ್ಕೆ ₹25 ಸಾವಿರ ಕೋಟಿ ವೆಚ್ಚವಾಗಲಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ 19 ಸಾವಿರ ಕೋಟಿ ಮೌಲ್ಯದ ಡಿಪಿಆರ್ ಸಿದ್ಧಪಡಿಸಿ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಿದೆ. ರಾಷ್ಟ್ರೀಯ ಹೆದ್ದಾರಿಗೂ ಈ ಟನೆಲ್ ಸಂಪರ್ಕಿಸುವುದರಿಂದ ರಾಜ್ಯ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಯೋಜನೆಯನ್ನು ಕೈಗೆತ್ತಿಕೊಳ್ಳಬಹುದಾಗಿದೆ. ಇವುಗಳಿಗೆ ಬಜೆಟ್​​​ನಲ್ಲಿ ಆರ್ಥಿಕ ನೆರವು ನೀಡುವಂತೆ ಕೋರಲಾಗಿದೆ.

ಮೆಟ್ರೋ ಕಾರಿಡಾರ್, ಡಬಲ್ ಡೆಕ್ಕರ್​​: ಪ್ರಸಕ್ತ ಮೆಟ್ರೋ ರೈಲು ಮಾರ್ಗಗಳಿಗೆ ಐದು ಕಾರಿಡಾರುಗಳನ್ನು ವಿಸ್ತರಣೆ ಮಾಡಲು ಗುರುತಿಸಲಾಗಿದೆ. ಸುಮಾರು 129 ಕಿ.ಮೀ. ಮೆಟ್ರೋ ಮಾರ್ಗವನ್ನು ವಿಸ್ತರಿಸಲು ಯೋಜಿಸಲಾಗಿದೆ. ಈ ಉದ್ದೇಶಿತ ವಿಸ್ತರಿತ ಮೆಟ್ರೋ ಕಾರಿಡಾರ್ ಹೊರ ವರ್ತುಲ ರಸ್ತೆ ಹಾಗೂ ಬೆಂಗಳೂರು ಉಪನಗರವನ್ನು ಸಂಪರ್ಕಿಸುತ್ತದೆ. ಈ ಐದು ಮೆಟ್ರೋ ಕಾರಿಡಾರುಗಳಿಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡುವಂತೆ ಮನವಿ ಮಾಡಲಾಗಿದೆ.

ನಮ್ಮ ಮೆಟ್ರೋದ ಮೂರನೇ ಹಂತದ ಹಳದಿ ಮಾರ್ಗದಲ್ಲಿ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್​​​ ವರೆಗೂ ನಿರ್ಮಿಸಲಾಗಿರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಯಶಸ್ವಿ ಹಿನ್ನೆಲೆಯಲ್ಲಿ ಮೆಟ್ರೋ ನಾಲ್ಕನೇ ಹಂತದ ಯೋಜನೆಯನ್ನು ಡಬಲ್ ಡೆಕ್ಕರ್ ಮೂಲಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಜೆ.ಪಿ.ನಗರದಿಂದ ಹೆಬ್ಬಾಳದವರೆಗೆ ಹಾಗೂ ಹೊಸಹಳ್ಳಿಯಿಂದ ಕಡಬಗೆರೆವರೆಗೂ 45 ಕಿ.ಮೀ ಉದ್ದದ ಈ ಮಾರ್ಗಕ್ಕೆ ಹೆಚ್ಚುವರಿಯಾಗಿ ₹8,916 ಕೋಟಿ ಅಗತ್ಯವಿದ್ದು, ಪೂರಕ ಅನುದಾನ ನೀಡುವಂತೆ ಆಗ್ರಹಿಸಲಾಗಿದೆ.

ನೆರೆ ನಿಯಂತ್ರಕ ಕ್ರಮಗಳಿಗೆ ಮಂಜೂರಾತಿಗೆ ಮನವಿ: ಬೆಂಗಳೂರಲ್ಲಿ ಮಳೆಯಿಂದಾಗುವ ಅವಘಡ ತಪ್ಪಿಸಲು ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಇದಕ್ಕಾಗಿ ಸುಮಾರು 3,000 ಕೋಟಿ ರೂ. ನೆರವಿಗಾಗಿ ವಿಶ್ವ ಬ್ಯಾಂಕ್​ಗೆ ಮನವಿ ಮಾಡಲಾಗಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ವ್ಯವಹಾರಗಳ ಇಲಾಖೆಗೆ ಸಲ್ಲಿಸಲಾಗಿದೆ. ಹೀಗಾಗಿ, ಬಹುವೇಗ ಮಂಜೂರಾತಿ ನೀಡುವಂತೆ ಕೋರಿದ್ದಾರೆ.

17 ಮೇಲ್ಸೇತುವೆ, ಬಫರ್ ವಲಯ ರಸ್ತೆ ನಿರ್ಮಾಣಕ್ಕೆ ಅನುದಾನ: ಜೊತೆಗೆ ನಗರದ ಸಂಚಾರಿ ದಟ್ಟಣೆ ಇರುವ 11 ಜಂಕ್ಷನ್​​ಗಳಲ್ಲಿ 99.50 ಕಿ.ಮೀ.ಗಳಷ್ಟು 17 ಮೇಲ್ಸೇತುವೆ ನಿರ್ಮಾಣ ಅಗತ್ಯವಿದ್ದು, ಇದಕ್ಕಾಗಿ ₹12 ಸಾವಿರ ಕೋಟಿ ಹಣ ಬೇಕಾಗಿದೆ. ಪ್ರಮುಖ ನದಿ ಹಾಗೂ ದೊಡ್ಡ ಕೆರೆಗಳು ಹಾಗೂ ರಾಜಕಾಲುವೆ ಪಕ್ಕದ ಬಫರ್ ಪ್ರದೇಶಗಳನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ. ಇದನ್ನು ತಪ್ಪಿಸಲು ಈ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ₹3000 ಕೋಟಿ ಅಗತ್ಯವಿದ್ದು, ಪೂರಕ ಅನುದಾನ ನೀಡುವಂತೆ ಕೋರಲಾಗಿದೆ.

ಪಿಆರ್​​ಆರ್ ಹಾಗೂ ಕಾವೇರಿ ಯೋಜನೆಗೆ ನೆರವು: ಬೆಂಗಳೂರಿನ ದಟ್ಟಣೆ ನಿಯಂತ್ರಿಸಲು ಖಾಸಗಿ ಹಾಗೂ ಸರ್ಕಾರಿ ಸಹಭಾಗಿತ್ವದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 8 ಪಥಗಳ, 73.04 ಕಿ.ಮೀ ಉದ್ದದ ಬಿಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜನೆಯಲ್ಲಿ ₹21 ಸಾವಿರ ಕೋಟಿ ಭೂಸ್ವಾಧೀನ ಹಾಗೂ ₹6 ಸಾವಿರ ಕೋಟಿ ರಸ್ತೆ ನಿರ್ಮಾಣಕ್ಕೆ ಸೇರಿ ಒಟ್ಟು ₹27 ಸಾವಿರ ಕೋಟಿ ಅಗತ್ಯವಿದೆ. ಇದಕ್ಕೆ 3,000 ಕೋಟಿ ರೂ.‌ ನೀಡುವಂತೆ ಕೋರಲಾಗಿದೆ.

ಜೊತೆಗೆ, ಕಾವೇರಿ 5ನೇ ಹಂತದ ಕುಡಿಯುವ ನೀರಿನ ಪೂರೈಕೆ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಬೇಡಿಕೆ ಪೂರ್ಣಗೊಳಿಸಲಾಗಿದೆ. ಹೆಚ್ಚುವರಿ ಬೇಡಿಕೆ ಪೂರೈಸಲು ಕಾವೇರಿ 6ನೇ ಹಂತದ ಯೋಜನೆ ಮೂಲಕ 2028ರ ವೇಳೆಗೆ 500 ಎಂಎಲ್​ಡಿ ನೀರು ಪೂರೈಸುವ ಉದ್ದೇಶವಿದ್ದು, ಅನುದಾನಕ್ಕೆ ಬೇಡಿಕೆ ಇಡಲಾಗಿದೆ.

ಭದ್ರಾ ಮೇಲ್ದಂಡೆಗೆ ₹5,300 ಕೋಟಿ ಬಿಡುಗಡೆಗೆ ಮನವಿ: ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆಯ ಅನುದಾನ ನೀಡುವಂತೆ ಕೋರಲಾಗಿದೆ. ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಈ ಹಿಂದೆಯೇ ಘೋಷಿಸಿದ್ದ ₹5300 ಕೋಟಿ ಬಿಡುಗಡೆಗೂಳಿಸುವಂತೆ ಮನವಿ ಮಾಡಿದ್ದಾರೆ.

ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಅನುಮೋದನೆ ನೀಡಿ ಎಂದು ಮನವಿ ಮಾಡಲಾಗಿದೆ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ವಿಶೇಷ ಅನುದಾನ ₹11,495 ಕೋಟಿ ಬಿಡುಗಡೆಗೊಳಿಸಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಗೌರವಧನ ₹5,000 ಮತ್ತು ಅಡುಗೆಯವರು ಮತ್ತು ಸಹಾಯಕರಿಗೆ ₹2,000ಕ್ಕೆ ಹೆಚ್ಚಳಗೊಳಿಸುವಂತೆ ಬೇಡಿಕೆ ಇಡಲಾಗಿದೆ.

ಇದನ್ನೂ ಓದಿ: ಕೇಂದ್ರದ ಬಜೆಟ್​ನಲ್ಲಿ ರಾಜ್ಯದ ಕೃಷಿ - ಕೈಗಾರಿಕೆ ವಲಯಗಳ ನಿರೀಕ್ಷೆಗಳೇನು?

ಪ್ರಧಾನಮಂತ್ರಿ ಆವಾಸ್​ ಯೋಜನೆ ನೆರವನ್ನು ನಗರ ಪ್ರದೇಶದ ಮನೆಗಳಿಗೆ ₹1.5 ಲಕ್ಷದಿಂದ ₹5 ಲಕ್ಷಕ್ಕೆ ಮತ್ತು ಗ್ರಾಮೀಣ ಮನೆಗಳಿಗೆ ₹72000 ರಿಂದ ₹3 ಲಕ್ಷಕ್ಕೆ ಹೆಚ್ಚಿಸಿ ಹಾಗೂ ವೃದ್ಧಾಪ್ಯ, ವಿಧವೆಯರು ಮತ್ತು ವಿಕಲಚೇತನರ ಪಿಂಚಣಿ ಹೆಚ್ಚಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಕೇಂದ್ರಕ್ಕೆ ಬೇಡಿಕೆ ಪಟ್ಟಿ ನೀಡಿದ್ದಾರೆ.‌

ರಾಜ್ಯದ ಪ್ರಮುಖ ವಿಷ್ ಲಿಸ್ಟ್:

  • 15ನೇ ಹಣಕಾಸು ಆಯೋಗ ಶಿಫಾರಸಿನಂತೆ ರಾಜ್ಯಕ್ಕೆ ₹5,495 ಕೋಟಿ ರೂ.‌ನೀಡುವಂತೆ ಮನವಿ
  • ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಾದ ವಿಧವಾ ಪಿಂಚಣಿ, ಹಿರಿಯ ನಾಗರಿಕರ ಪಿಂಚಣಿಗಳಿಗೆ ಕೇಂದ್ರದ ಅನುದಾನ ಹೆಚ್ಚಿಸಲು ಕೋರಿಕೆ
  • ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಅನುದಾನವನ್ನು ಮುಂಗಡ ಅನುದಾನ ಹಂಚಿಕೆ ಮಾದರಿಗೆ ಬದಲಾಯಿಸಲು ಮನವಿ
  • ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ₹5,000 ಕೋಟಿ ಅನುದಾನ ನೀಡಲು ಮನವಿ
  • ಪರಿಸರ ಸೂಕ್ಷ್ಮ ಪಶ್ಚಿಮಘಟ್ಟ ಪ್ರದೇಶಕ್ಕೆ ಐದು ವರ್ಷಗಳಿಗೆ ₹10,000 ಕೋಟಿ ವಿಶೇಷ ಅನುದಾನಕ್ಕೆ ಬೇಡಿಕೆ
  • ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ನಗರಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ಸಮಗ್ರ ಯೋಜನೆ ಘೋಷಿಸಲು ಮನವಿ
  • ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳಿಗೆ ಸಾಲ ನೀಡುವಂತೆ ಕೋರಿಕೆ

ಇದನ್ನೂ ಓದಿ: ಕೇಂದ್ರ ಬಜೆಟ್​ಗೆ ದಿನಗಣನೆ: ಯಾವೆಲ್ಲಾ ಸಬ್ಸಿಡಿಗಳಿಗೆ ಇಡಬೇಕಾದ ಅನುದಾನವೆಷ್ಟು ಗೊತ್ತಾ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.