ETV Bharat / state

ಮಕ್ಕಳಿಗೆ ಡೆಂಗ್ಯೂ ಬಾಧೆ​: ರಾಜ್ಯದಲ್ಲಿ ಪ್ರಕರಣಗಳು ಏರಿಕೆ; ಝಿಕಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ, ಉಚಿತ ಚಿಕಿತ್ಸೆ - Dengue Cases - DENGUE CASES

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಗದಗ ಜಿಲ್ಲೆಯಲ್ಲಿ ಮಕ್ಕಳಲ್ಲೇ ಹೆಚ್ಚು ಸೋಂಕು ದೃಢಪಟ್ಟಿದೆ.

Dengue cases
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jul 9, 2024, 1:36 PM IST

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇವೆ. ಹೊಸದಾಗಿ 197 ಪ್ರಕರಣಗಳು ವರದಿಯಾಗಿವೆ. ಒಂದು ವರ್ಷದೊಳಗಿನ 1 ಮಗು, 1ರಿಂದ 18 ವರ್ಷದೊಳಗಿನ 63 ಮಂದಿ ಮತ್ತು 18 ವರ್ಷ ಮೇಲ್ಪಟ್ಟ 133 ಮಂದಿಗೆ ಸೋಂಕು ತಗುಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 892 ಡೆಂಗ್ಯೂ ಶಂಕಿತರಿಗೆ ಪರೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ ಇದುವರೆಗೆ ವರದಿಯಾದ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ. 7 ಮಂದಿ ಮೃತಪಟ್ಟಿದ್ದಾರೆ.

ಝಿಕಾ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ: ಝಿಕಾ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಇದಕ್ಕೆ ಸಾಕಷ್ಟು ವಿಶ್ರಾಂತಿ ಅಗತ್ಯವಿದ್ದು, ದೇಹ ನಿರ್ಜಲೀಕರಣ ಆಗುವುದನ್ನು ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಅಹಾರ ಪದಾರ್ಥ ಸೇವಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧ ಸೇವಿಸಬೇಕು. ರೋಗ ಲಕ್ಷಣ ಹೆಚ್ಚಾದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಝಿಕಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ, ಉಚಿತ ಚಿಕಿತ್ಸೆ: ಝಿಕಾ ವೈರಸ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಪರೀಕ್ಷೆ ಹಾಗೂ ಚಿಕಿತ್ಸೆ ಸೌಲಭ್ಯ ಕಲ್ಪಿಸಿದೆ. ಇದರ ಜೊತೆ ಸೊಳ್ಳೆ ಉತ್ಪತ್ತಿಯಾಗುವಂತಹ ವಸ್ತುಗಳನ್ನು ಸರಿಪಡಿಸುವುದು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜನತೆಗೆ ಇಲಾಖೆ ಮನವಿ ಮಾಡಿದೆ.

ಡೆಂಗ್ಯೂ, ಚಿಕುನ್‌ ಗುನ್ಯಾ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಯಿಂದ ಝಿಕಾ ಸೋಂಕು ಸಹ ಹರಡಲಿದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈ ಸೊಳ್ಳೆಯು ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುತ್ತದೆ. ಇದರಿಂದ ಝಿಕಾ ಸೋಂಕಿಗೆ ಒಳಗಾಗುವವರಲ್ಲಿ ಬಹುತೇಕರಿಗೆ ರೋಗಲಕ್ಷಣ ಕಂಡು ಬರುವುದಿಲ್ಲ. ಹಾಗಾಗಿ ಸೋಂಕಿನ ಬಗ್ಗೆ ಆತಂಕಪಡುವ ಬದಲು, ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ದದ್ದುಗಳು, ಕೀಲು ಮತ್ತು ಸ್ನಾಯುಗಳಲ್ಲಿ ನೋವು ಝಿಕಾ ರೋಗದ ಲಕ್ಷಣಗಳಾಗಿದ್ದು, ಗರ್ಭಿಣಿಯರು ಈ ಜ್ವರಕ್ಕೆ ಒಳಗಾದಲ್ಲಿ ಜನಿಸುವ ಶಿಶುವಿನ ತಲೆಯ ಬೆಳವಣಿಗೆ ಕುಂಠಿತವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ರೋಗಲಕ್ಷಣ ಕಂಡು ಬಂದಲ್ಲಿ ರಕ್ತ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು, ಮನೆಯ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛವಾಗಿಡುವುದು, ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಅದರ ಮೇಲೆ ಮುಚ್ಚಳ ಮುಚ್ಚುವುದು, ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ನೀರು ನಿಲ್ಲದಂತೆ ಎಚ್ಚರವಹಿಸುವುದು, ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು, ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಮಾಹಿತಿ ನೀಡಿದೆ.

ಗದಗ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ: ಜಿಲ್ಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಡೆಂಗ್ಯೂ ದೃಢಪಟ್ಟಿದೆ. ಜಿಮ್ಸ್ ಆಸ್ಪತ್ರೆಯಲ್ಲಿ 16 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 8 ಮಕ್ಕಳಲ್ಲಿ ಡೆಂಗ್ಯೂ ದೃಢಪಟ್ಟಿದ್ದು, 8 ಶಂಕಿತ ಪ್ರಕರಣಗಳಾಗಿವೆ. ಗಂಭೀರ ಪರಿಸ್ಥಿತಿಯಿರೋ 5 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಜನರಲ್ ವಾರ್ಡ್​​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಯಸ್ಕರು ಸೇರಿ ಒಟ್ಟು 25 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಡೆಂಗ್ಯೂ ಜ್ವರ: ರೋಗ ಲಕ್ಷಣಗಳೇನು? ಮುನ್ನೆಚ್ಚರಿಕೆ ಹೇಗೆ? ಚಿಕಿತ್ಸಾ ವಿಧಾನಗಳ ಸಂಪೂರ್ಣ ಮಾಹಿತಿ - Dengue Fever

ಸದ್ಯ ಆಸ್ಪತ್ರೆಯಲ್ಲಿ ವೆಂಟಿಲೇಟರ್, ಬೆಡ್ ವ್ಯವಸ್ಥೆ ಯಾವುದಕ್ಕೂ ಕೊರತೆ ಇಲ್ಲ. ಸಾಮಾನ್ಯವಾಗಿ ಮಕ್ಕಳಲ್ಲಿ ಹೆಚ್ಚಾಗಿ ಕಂಡು ಬರುವ ರೋಗವಿದು. ಮೊದಲ ಹಂತದಲ್ಲಿಯೇ ಜ್ವರವನ್ನು ಟೆಸ್ಟ್ ಮಾಡಿ ಕನ್ಫರ್ಮ್ ಮಾಡಿಕೊಂಡರೆ ಚಿಕಿತ್ಸೆಗೆ ಮಕ್ಕಳು ಸ್ಪಂದಿಸುತ್ತವೆ. ಮೂರನೇ ಹಂತದಲ್ಲಿ ಇದ್ದಾಗ ಅಂದ್ರೆ ಸೀರಿಯಸ್ ಆದಾಗ ಚಿಕಿತ್ಸೆಗೆ ಸ್ಪಂದಿಸುವುದು ಬಹಳ ಕಷ್ಟ. ಮಳೆಗಾಲದ ಸೀಸನ್​​ನಲ್ಲಿ ಮೊದಲೇ ಮುಂಜಾಗ್ರತೆ ತೆಗೆದುಕೊಳ್ಳುವುದು ಉತ್ತಮ ಎಂದು ಜಿಮ್ಸ್ ಚಿಕ್ಕ ಮಕ್ಕಳ ತಜ್ಞ ಡಾ.ಶ್ರೀನಿವಾಸ ಆರೇರ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.