ETV Bharat / state

ರಾಜ್ಯದಲ್ಲಿ ಗುರುವಾರ 494 ಡೆಂಘೀ ಪ್ರಕರಣ ದಾಖಲು: ನಿಗಾ ವಹಿಸುವಂತೆ ಡಿಸಿ, ಸಿಇಓಗಳಿಗೆ ಸಚಿವರ ಸೂಚನೆ - Dengue cases rise in Karnataka - DENGUE CASES RISE IN KARNATAKA

ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಗುರುವಾರ ಒಂದೇ ದಿನ 494 ಪ್ರಕರಣಗಳು ಪತ್ತೆಯಾಗಿವೆ. ಅಷ್ಟೇ ಅಲ್ಲ ಕೇರಳದ ಮಲಪ್ಪುರಂನಲ್ಲಿ ನಿಫಾ ವೈರಸ್​ ಪತ್ತೆಯಾದ ಹಿನ್ನೆಲೆ ಅಲ್ಲಿಗೆ ತೆರಳದಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

DENGUE CASES  HEALTH DEPARTMENT  NIPAH VIRUS  BENGALURU
ಸಚಿವ ದಿನೇಶ್​ ಗುಂಡೂರಾವ್​ (ETV Bharat)
author img

By ETV Bharat Karnataka Team

Published : Jul 26, 2024, 8:42 AM IST

ಸಚಿವ ದಿನೇಶ್​ ಗುಂಡೂರಾವ್​ ಹೇಳಿಕೆ (ETV Bharat)

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಗುರುವಾರ ಒಂದೇ ದಿನದಲ್ಲಿ 494 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಪ್ರಕರಣ ಸಂಖ್ಯೆ 16,038ಕ್ಕೇರಿದ್ದು, ಈವರೆಗೆ ಒಟ್ಟು 10 ಜನರು ಮೃತಪಟ್ಟಿದ್ದಾರೆ.

ಜು.25ರಂದು 478 ಮಂದಿ ಗುಣಮುಖರಾಗಿದ್ದು, 203 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 0-1 ವರ್ಷದೊಳಗಿನ 20 ಮಕ್ಕಳಿಗೆ, 1ರಿಂದ 18 ವರ್ಷದ 166 ಮಕ್ಕಳಿಗೆ ಹಾಗೂ 18 ವರ್ಷ ಮೇಲ್ಪಟ್ಟ 308 ಜನರಲ್ಲಿ ಸೋಂಕು ದೃಢವಾಗಿದೆ. ಅಲ್ಲದೇ, ಬಿಬಿಎಂಪಿ ವ್ಯಾಪ್ತಿಯಲ್ಲಿ 7,280, ಬೆಂಗಳೂರು ನಗರ 106, ಬೆಂಗಳೂರು ಗ್ರಾಮಾಂತರ 84, ರಾಮನಗರ 168, ಕೋಲಾರ 156, ಚಿಕ್ಕಬಳ್ಳಾಪುರ 176, ತುಮಕೂರು 388, ಚಿತ್ರದುರ್ಗ 461, ದಾವಣಗೆರೆ 371, ಶಿವಮೊಗ್ಗ 398, ಮೈಸೂರು 593, ಉಡುಪಿ 316, ಕೊಡಗು 169 ಸೇರಿದಂತೆ ಒಟ್ಟಾರೆ 16,038 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಡೆಂಘೀ ಜ್ವರ ನಿಯಂತ್ರಣದ ಕುರಿತು ಸಾರ್ವ ಜನಿಕರ ಹೆಚ್ಚಿನ ಮಾಹಿತಿಗಾಗಿ 1800-425-8330 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದು ಹೀಗೆ : ರಾಜ್ಯದಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಘೀ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಆರೋಗ್ಯ ಸಚಿವರು, ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ ಡೆಂಘೀ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಇಷ್ಟರೊಳಗೆ ಡೆಂಘೀ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಹಕಾರ ನೀಡಿ ಡೆಂಘೀ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು. ಜನರಲ್ಲಿ ಡೆಂಘೀ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಘೀ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ. ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಘೀ ಹೆಚ್ಚಿರುವ ಹಾಟ್ ಸ್ಪಾಟ್​ಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸುವಂತೆ ತಿಳಿಸಲಾಗಿದೆ. ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಘೀ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ-ಇಲ್ಲವೋ ಎಂಬುದನ್ನ ಪರಿಶೀಲಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಬೆಂಗಳೂರಿನಲ್ಲಿ 37 ಡೆಂಘೀ ಹಾಟ್ ಸ್ಪಾಟ್​ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಲಾಗಿದೆ. ಡೆಂಘೀ ಪ್ರಕರಣಗಳಲ್ಲಿ ಶೇ.50 ರಷ್ಟು ಪ್ರಕರಣಗಳು ಬೆಂಗಳೂರಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಘೀ ಕಡಿಮೆಯಾಗಬಹುದು. ಆದರೆ ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು. ಹೀಗಾಗಿ ಬೆಂಗಳೂರಿನಲ್ಲಿ ಡೆಂಘೀ ಹತೋಟಿಗೆ ಒತ್ತು ನೀಡಬೇಕಿದೆ. ಯಾವುದನ್ನು ಮುಚ್ಚಿಡುವುದು ಬೇಡ. ಡೆಂಘೀ ಡೆತ್​ಗಳಾಗಿದ್ದರೆ ಅದನ್ನು ಡೆಂಗ್ಯೂ ಡೆತ್ ಎಂದೇ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆ: ನೆರೆಯ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಜುಲೈ 7ರಂದು ನಿಫಾ ವೈರಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆ ಆ ಜಿಲ್ಲೆಗೆ ಅತ್ಯಂತ ಅವಶ್ಯವಿದ್ದಲ್ಲಿ ಮಾತ್ರ ಪ್ರಯಾಣಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ಎಇಎಸ್ ರೋಗ ಲಕ್ಷಣಗಳನ್ನು ಹೊಂದಿದ್ದ ಮಲಪ್ಪರಂನ 14 ವರ್ಷದ ಬಾಲಕ, ಪೆರಿಂತಲ್ಮನ್ನಾದಲ್ಲಿನ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಉನ್ನತ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ಮೊದಲೇ ಸಾವನ್ನಪ್ಪಿದ್ದಾನೆ. ರೋಗಿಯ ಮಾದರಿಗಳನ್ನು ಪೂನಾದ ಎನ್‌ಐವಿಗೆ ಕಳುಹಿಸಲಾಗಿತ್ತು. ಅದರ ಮಾದರಿಯಲ್ಲಿ ನಿಫಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಹೇಳಿದೆ. ಈ ಹಿಂದೆ 2023ರಲ್ಲಿ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಏಕಾಏಕಿ ನಿಫಾ ಪ್ರಕರಣಗಳು ವರದಿಯಾಗಿದ್ದರೂ, ಇಲ್ಲಿಯವರೆಗೆ ಕರ್ನಾಟಕ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಓದಿ: ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ ಮೆಗ್ಗಾನ್ ಆಸ್ಪತ್ರೆ ನರ್ಸ್ ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.