ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಲೆನಾಡು ಹಾಗೂ ಕರಾವಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.13ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೊಡಗಿನಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಭಾಗದ ಜಿಲ್ಲೆಗಳಲ್ಲಿ ಮಳೆ ಇಳಿಮುಖವಾಗಿದೆ. ಆದರೂ, ಕೆಲ ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುತ್ತಿದೆ. ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ: ಬಿಜೆಪಿ ಅವಧಿಯ ಅಕ್ರಮ ಆರೋಪಗಳ ತನಿಖೆ ಚುರುಕಿಗೆ ಐವರು ಸಚಿವರ ಸಮಿತಿ ರಚನೆ - Five Ministers Committee