ETV Bharat / state

ರಾಜಕೀಯ ಗುದ್ದಾಟಕ್ಕೆ ಕಾರಣವಾದ ಜೆಎಸ್​​ಡಬ್ಲ್ಯೂಗೆ ಭೂಮಿ ಮಾರಾಟ ತೀರ್ಮಾನ: ಏನಿದು ದಶಕದ ಭೂ ವಿವಾದ? - Land Allotment to Jindal - LAND ALLOTMENT TO JINDAL

ಜಿಂದಾಲ್​ಗೆ ಭೂಮಿ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನವು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಜಿಂದಾಲ್​​ಗೆ ಭೂಮಿ ನೀಡುವ ವಿಚಾರದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

jindal land
ಕಾಂಗ್ರೆಸ್​, ಬಿಜೆಪಿ (Etv Bharat)
author img

By ETV Bharat Karnataka Team

Published : Aug 28, 2024, 10:37 AM IST

ಬೆಂಗಳೂರು: ಸದ್ಯ ಜಿಂದಾಲ್​ಗೆ ಭೂಮಿ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ವಿಪಕ್ಷಗಳ ಕಣ್ಣು ಕೆಂಪಾಗಿಸಿದೆ. ಜಿಂದಾಲ್​ಗೆ ಭೂಮಿ ಮಾರಾಟ ಮಾಡುವ ವಿಚಾರವು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಏನಿದು ಜಿಂದಾಲ್ ಭೂಮಿ ಸುತ್ತದ ವಿವಾದ ಎಂಬ ವರದಿ ಇಲ್ಲಿದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಜೆಎಸ್​​ಡಬ್ಲ್ಯೂ ಸಂಸ್ಥೆಗೆ ಬಳ್ಳಾರಿಯಲ್ಲಿ ಭೂಮಿ ಮಾರಾಟ ಮಾಡಲು ತೀರ್ಮಾನಿಸಲಾಗಿತ್ತು. ಬಳ್ಳಾರಿ ಸಂಡೂರು ತಾಲೂಕಿನ ತೋರಣಗಲ್ ಮತ್ತು ಕುರೇಕುಪ್ಪ ಗ್ರಾಮಗಳಲ್ಲಿನ 2 ಸಾವಿರ ಎಕರೆ ಜಮೀನನ್ನು ಪ್ರತಿ ಎಕರೆಗೆ 1.22 ಲಕ್ಷ ರೂ. ಅಂತಿಮ ಬೆಲೆ ನಿಗದಿಪಡಿಸಿ ಹಾಗೂ ಸಂಡೂರು ತಾಲೂಕಿನ ತೋರಣಗಲ್​, ಮುಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿನ 1666.73 ಎಕರೆ ಜಮೀನನ್ನು ಪ್ರತಿ ಎಕರೆಗೆ 1.50 ಲಕ್ಷ ರೂ. ಅಂತಿಮ ಬೆಲೆ ನಿಗದಿಪಡಿಸಿ ಜೆಎಸ್​​ಡಬ್ಲ್ಯೂ ಸ್ಟೀಲ್‌ ಪರವಾಗಿ ನೀಡಲು ನಿರ್ಧರಿಸಲಾಗಿದೆ.

ಹಿಂದೆ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ಈ ನಿಟ್ಟಿನಲ್ಲಿ ಅಂದಿನ ಬಿಜೆಪಿ ಸರ್ಕಾರ ಕೈಗೊಂಡ ಸಂಪುಟ ತೀರ್ಮಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಅಂದು ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿದ್ದ ಕಾಂಗ್ರೆಸ್ ಈಗ ತನ್ನ ಆಡಳಿತದಲ್ಲಿ ಜೆಎಸ್​​ಡಬ್ಲ್ಯೂಗೆ ಭೂಮಿ ನೀಡಲು ತೀರ್ಮಾನಿಸಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಾಂಗ್ರೆಸ್ ಸರ್ಕಾರದ ಈ ತೀರ್ಮಾನದ ಹಿಂದೆ ಕಿಕ್ ಬ್ಯಾಕ್​​​ನ ಗಂಭೀರ ಆರೋಪ ಮಾಡುತ್ತಿದೆ.‌

ಏನಿದು ಜಿಂದಾಲ್ ಭೂಮಿ ವಿವಾದ?: ಬಳ್ಳಾರಿಯಲ್ಲಿ ಜೆಎಸ್​​ಡಬ್ಲ್ಯೂ ಸ್ಟೀಲ್ ಸಂಸ್ಥೆ‌ ಜೊತೆ 2006-2007ರಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಸರ್ಕಾರ ಒಡಂಬಡಿಕೆ ಮಾಡಿತ್ತು.‌ ಉಕ್ಕಿನ ಸ್ಥಾವರ ಸ್ಥಾಪಿಸಲು ಸಂಸ್ಥೆಗೆ ಬಳ್ಳಾರಿಯಲ್ಲಿ 3,666 ಎಕರೆ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. 10 ವರ್ಷಗಳ ಬಳಿಕ ಲೀಸ್ ಮತ್ತು ಪರಾಭಾರೆ ಒಪ್ಪಂದದಡಿ ಸಂಸ್ಥೆಗೆ ಈ ಭೂಮಿಯನ್ನು ಹಂಚಿಕೆ ಮಾಡಲಾಗಿತ್ತು. ತೋರಣಗಲ್​ನಲ್ಲಿ 12 ದಶಲಕ್ಷ ಟನ್ ಸಾಮರ್ಥ್ಯದ ಸ್ಟೀಲ್ ಘಟಕ ನಿರ್ಮಾಣ ಇದಾಗಿದೆ.

2013-2018ರ ಅವಧಿಯಲ್ಲಿ ಜೆಎಸ್​​ಡಬ್ಲ್ಯೂ ಸಂಸ್ಥೆ ಒಪ್ಪಂದದಂತೆ ಭೂಮಿಯನ್ನು ಮಾರಾಟ ಮಾಡಲು ಪ್ರಸ್ತಾಪ ಸಲ್ಲಿಸಿತ್ತು. 27.05.2019ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಸಂಪುಟ ಸಭೆಯಲ್ಲಿ ಭೂಮಿ ಮಾರಾಟ ಮಾಡಲು ತೀರ್ಮಾನಿಸಿತ್ತು. ಆದರೆ, ಪ್ರತಿಪಕ್ಷ ಬಿಜೆಪಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಸ್ವಪಕ್ಷದವರೇ ಆದ ಹೆಚ್.ಕೆ.ಪಾಟೀಲ್ ಕೂಡ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಎಂಎಂಎಲ್ ಸಂಸ್ಥೆಗೆ ಹಣ ಪಾವತಿಸದ ಆರೋಪ: ಹೆಚ್.ಕೆ.ಪಾಟೀಲ್ ಅಂದು ಕೈಗಾರಿಕಾ ಸಚಿವರಾಗಿದ್ದ ಕೆ.ಜೆ.ಜಾರ್ಜ್​ಗೆ ಪತ್ರ ಬರೆದು, ಜೆಎಸ್​​ಡಬ್ಲ್ಯೂ ಸಂಸ್ಥೆ ಮೈಸೂರು ಮಿನರಲ್ಸ್ ಸಂಸ್ಥೆಗೆ (ಎಂಎಂಎಲ್) 1,200 ಕೋಟಿ ರೂ. ಹಣ ಬಾಕಿ ಉಳಿಸಿಕೊಂಡಿದ್ದು, ಕಡಿಮೆ ಬೆಲೆಗೆ ಸಂಸ್ಥೆಗೆ ಭೂಮಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ಜೆಎಸ್​​ಡಬ್ಲ್ಯೂ ಸಂಸ್ಥೆ ಎಂಎಂಎಲ್​ಗೆ ಕಡಿಮೆ‌ ಪ್ರೀಮಿಯಂಗೆ ಕಬ್ಬಿಣದ ಅದಿರು ಪೂರೈಕೆ ಮಾಡಿತ್ತು ಎಂದು ಆರೋಪಿಸಲಾಗಿತ್ತು.

2000-2010ರ ವರೆಗೆ 1,059.89 ಕೋಟಿ ರೂ. ಮೊತ್ತದ 9.25 ದಶಲಕ್ಷ ಟನ್ ಅದಿರು ಗಣಿಗಾರಿಕೆ ಮಾಡಿತ್ತು. ಇದಕ್ಕಾಗಿ ಎಂಎಂಎಲ್ ಸಂಸ್ಥೆಗೆ ಕೇವಲ 63.17 ಕೋಟಿ ರೂ. ಪ್ರೀಮಿಯಂ ಮೊತ್ತ ಲಭಿಸಿದ್ದರೆ, ಜೆಎಸ್ ಡಬ್ಲ್ಯೂ ಸಂಸ್ಥೆಗೆ 876.9 ಕೋಟಿ ರೂ. ಲಾಭವಾಗಿತ್ತು ಎಂದು 2013ರ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಹೆಚ್.ಕೆ.ಪಾಟೀಲ್ ಆಕ್ಷೇಪದ ಜೊತೆಗೆ ಆಗಿನ ವಿಪಕ್ಷ ನಾಯಕರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಸದನದಲ್ಲಿ ಆಹೋರಾತ್ರಿ ಧರಣಿ ನಡೆಸಿದ್ದರು.‌ ಹೀಗಾಗಿ, ಈ ಪ್ರಸ್ತಾಪ ಹಾಗೆಯೇ ಬಾಕಿ ಉಳಿದುಕೊಂಡಿತ್ತು. ಸಂಪುಟ ತೀರ್ಮಾನ ವಿರೋಧಿಸಿ ಮೈತ್ರಿ ಸರ್ಕಾರದ ಸಚಿವರಾಗಿದ್ದ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

2020ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮತ್ತೆ ಸರ್ಕಾರದ ಮುಂದೆ ಭೂಮಿ ಮಾರಾಟದ ಪ್ರಸ್ತಾವನೆ ಬಂತು.‌ ಈ ಬಗ್ಗೆ ಪರಿಶೀಲಿಸಲು ಸಂಪುಟ ಉಪಸಮಿತಿ ರಚಿಸಲಾಯಿತು. ಸಂಪುಟ ಉಪ ಸಮಿತಿ ಕಾನೂನು ಅಭಿಪ್ರಾಯ ಪಡೆದು ಜೆಎಸ್​​ಡಬ್ಲ್ಯೂಗೆ ಭೂಮಿ ಮಾರಾಟ ಮಾಡಲು ಅನುಮತಿ ನೀಡಿತು. 2021ರಲ್ಲಿ ಬಿಜೆಪಿ ಸರ್ಕಾರ ಸಂಪುಟ ಸಭೆಯಲ್ಲಿ 3,666 ಎಕರೆ ಭೂಮಿ ನೀಡಲು ತೀರ್ಮಾನಿಸಿತು.

ಈ ಸಂಬಂಧ ಯಡಿಯೂರಪ್ಪ ಸರ್ಕಾರ ಭೂಮಿ ಮಾರಾಟಕ್ಕೆ ಆದೇಶ ಹೊರಡಿಸಿತ್ತು. ಆದರೆ ಈ ತೀರ್ಮಾನದ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೆಚ್.ಕೆ.ಪಾಟೀಲ್ ಜೆಎಸ್​​ಡಬ್ಲ್ಯೂ ಗೆ ಭೂಮಿ ನೀಡುವ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿಯಲ್ಲೂ ಈ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಬಳಿಕ ಮತ್ತೆ ಜೆಎಸ್​ಡಬ್ಲ್ಯೂಗೆ ಭೂಮಿ ನೀಡುವ ಸಂಪುಟ ಸಭೆಯ ತೀರ್ಮಾನಕ್ಕೆ ತಡೆ ಬಿತ್ತು.

ಕೋರ್ಟ್ ಮೊರೆ ಹೋದ ಜೆಎಸ್​​ಡಬ್ಲ್ಯೂ: ಭೂಮಿ ಮಾರಾಟ ವಿಳಂಬವಾದ ಹಿನ್ನೆಲೆಯಲ್ಲಿ ಜೆಎಸ್ ಡಬ್ಲ್ಯೂ ಹೈಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಭೂಮಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಾರ್ಚ್ 12, 2024ರಂದು ಹೈಕೋರ್ಟ್ ಆಜ್ಞೆ ಹೊರಡಿಸಿ 6.05.2021ರಲ್ಲಿನ ಸರ್ಕಾರದ ಆದೇಶವನ್ನು ಜಾರಿಗೊಳಿಸಿ, ಜೆಎಸ್​​ಡಬ್ಲ್ಯೂಗೆ ಭೂಮಿ ಪರಾಭಾರೆ ಮಾಡುವಂತೆ ಸೂಚಿಸಿತ್ತು.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಸರ್ಕಾರ ಜೆಎಸ್​​ಡಬ್ಲ್ಯೂ ಸಂಸ್ಥೆಗೆ 3,666 ಕೋಟಿ ರೂ. ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಪ್ರತಿಪಕ್ಷ ಬಿಜೆಪಿಯು ಸರ್ಕಾರದ ವಿರುದ್ಧ ಕಿಕ್ ಬ್ಯಾಕ್ ಆರೋಪ ಮಾಡುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ 2021ರ ಮೇ 6ಕ್ಕೆ ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆಗೆ ಸಿಗದ ಅನುಮತಿ: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಯತ್ನಾಳ್ ಧರಣಿ: ಆರ್​.ಅಶೋಕ್ ಹೋರಾಟ ಎಚ್ಚರಿಕೆ - MLA Yatnal Protest

ETV Bharat Logo

Copyright © 2024 Ushodaya Enterprises Pvt. Ltd., All Rights Reserved.