ETV Bharat / state

ಮಾಜಿ ದೇವದಾಸಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರ ಮಾಸಾಶನ ಹೆಚ್ಚಳ - ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು

ಸಿದ್ದರಾಮಯ್ಯ ಬಜೆಟ್​​ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೀಡಿರುವ ಯೋಜನೆಗಳ ಮಾಹಿತಿ

devadasi masashana increased in siddaramaih Budget

author img

By ETV Bharat Karnataka Team

Published : Feb 16, 2024, 11:34 AM IST

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ತಿಳಿಸಿದ್ದಾರೆ. ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ 1500ರೂ ಮಾಸಾಶನವನ್ನು 2000 ರೂ.ಗೆ ಹೆಚ್ಚಳ ಮಾಡಲಾಗಿದೆ.

ಲಿಂಗತ್ವ ಅಲ್ಪಸಂಖ್ಯಾತರ ಬದುಕು ಉತ್ತಮ ಪಡಿಸಲು ಮೈತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ 800ರೂನಿಂದ 1200ರೂಗೆ ಹೆಚ್ಚಳ ಮಾಡುವುದಗಾಗಿ ಸಿಎಂ ಘೋಷಿಸಿದ್ದಾರೆ. ವಸತಿ ರಹಿತ ದೇವದಾಸಿಯರಿಗೆ ರಾಜೀವ್​ ಗಾಂಧಿ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.

20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಆಯೋಜಿಸಲು 10 ಕೋಟಿ ಬಜೆಟ್​ನಲ್ಲಿ ಮೀಸಲಿಡಲಾಗಿದೆ. ಅಂಗನವಾಡಿ ಚಟವಟಿಕೆ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್​​​ಫೋನ್​ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು

ರಾಜ್ಯದಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸಲು 200 ಕೋಟಿ ಅನುದಾನ ಘೋಷಿಸಲಾಗಿದೆ.

ಸೆರೆಬ್ರಲಿ ಪಾಲ್ಸಿ, ಸ್ನಾಯುವಿನ ಸಂಕೋಚನ, ಪಾರ್ಕಿಸನ್​​, ಮಲ್ಟಿಪಲ್​, ಸ್ಕೇಲೊರೊಸಿಸ್​ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆಗೆ ಪ್ರತಿ ತಿಂಗಳು 1000ರ ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು ಕ್ಯಾಟ್ರಕ್ಟ್​​ ಶಸ್ತ್ರ ಚಿಕಿತ್ಸೆ ಶಿಬಿರ ಆಯೋಜನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗೆ 86,423 ಕೋಟಿ ಮೀಸಲು ಇಡಲಾಗಿದೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 54,617 ಕೋಟಿ ಮೀಸಲಿರಿಸಲಾಗಿದೆ.

ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.

ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು.

ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ಇದನ್ನು ಓದಿ:ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ: ಸಿದ್ದರಾಮಯ್ಯ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.