ETV Bharat / state

ಅರಸು ಹಾದಿಯಲ್ಲೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ - CM Siddaramaiah

ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ದಿ. ದೇವರಾಜ ಅರಸು ಅವರನ್ನು ಸ್ಮರಿಸಿದರು.

CM Siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jun 6, 2024, 3:42 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು : ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದ್ದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಆಯೋಜಿಸಲಾಗಿದ್ದ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಇರುವ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 42ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

Devaraja Arasura
ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸುರವರ 42ನೇ ಪುಣ್ಯಸ್ಮರಣೆ (ETV Bharat)

ದೇವರಾಜ ಅರಸು ಒಬ್ಬ ಜಾತ್ಯತೀತ ವ್ಯಕ್ತಿ : ದೇವರಾಜ ಅರಸು ಅವರು ಒಬ್ಬ ಜಾತ್ಯತೀತ ವ್ಯಕ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತುವ, ಮುಖ್ಯವಾಹಿನಿಗೆ ತರಲು ಪ್ರಯತ್ನ ಮಾಡಿದರು. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು ಎಂದು ಹೇಳಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ ಏಕೀಕರಣದ ನಂತರ 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ವರ್ಷ ಅದರ 50ನೇ ವರ್ಷಾಚರಣೆಯ ಸಂದರ್ಭದಲ್ಲಿ ಇಡೀ ರಾಜ್ಯದಲ್ಲಿ ಆಚರಣೆ ಮಾಡಲಾಗುತ್ತಿದೆ. ದೇವರಾಜ ಅರಸು ಅವರು ಬಡವರ, ಶೋಷಿತರ, ಸಾಮಾಜಿಕ ನ್ಯಾಯದ ಪರವಾಗಿದ್ದ ನಾಯಕರು. ಅದಕ್ಕೇ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಭೂ ಸುಧಾರಣಾ ಕಾಯ್ದೆ ಜಾರಿಗೆ ತಂದು ಉಳುವವನೇ ಭೂಮಿ ಒಡೆಯ ಎಂದು ಘೋಷಿಸಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

CM Siddaramaiah
ಸಿಎಂ ಸಿದ್ದರಾಮಯ್ಯ ಗಿಡ ನೆಡುತ್ತಿರುವುದು (ETV Bharat)

ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ : ದೇವರಾಜ ಅರಸು ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಎಂಟು ವರ್ಷಗಳ ಕಾಲ ಸಾಮಾಜಿಕ ನ್ಯಾಯದ ಅಡಿಪಾಯ ಹಾಕಿದರು. ಅದರ ಬುನಾದಿಯ ಮೇಲೆ ಸಾಮಾಜಿಕ ನ್ಯಾಯ ಕರ್ನಾಟಕದಲ್ಲಿ ಮುಂದುವರೆದಿದೆ. ಕಾಂಗ್ರೆಸ್ ಪಕ್ಷ ಮಾತ್ರ ಸಾಮಾಜಿಕ ನ್ಯಾಯ ಪಾಲಿಸುತ್ತಿದೆ. ಇತರೆ ಪಕ್ಷಗಳಿಗೆ ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲ. ಬದಲಿಗೆ ಅದರ ವಿರುದ್ಧವಾಗಿದ್ದಾರೆ ಎಂದು ಸಿಎಂ ಟೀಕಿಸಿದರು.

ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ, ಸಚಿವ ನಾಗೇಂದ್ರ ಜೊತೆ ಚರ್ಚೆ ಮಾಡಿದ್ದೇನೆ. ಸಮಗ್ರ ತನಿಖೆ ಆಗಿ ವರದಿ ಬರಲಿ. ಪ್ರತಿಭಟನೆ, ಪಾದಯಾತ್ರೆ ಮಾಡುವವರು ಮಾಡಲಿ. ಈ ಪ್ರಕರಣವನ್ನು ಎಸ್ಐಟಿ ತನಿಖೆ ಮಾಡುತ್ತಿದೆ, ನೋಡೋಣ ಎಂದರು.

ಇದನ್ನೂ ಓದಿ : ಪಕ್ಷ, ಸರ್ಕಾರದ ಘನತೆ ಉಳಿಸಲು ಸ್ವಯಂ ಪ್ರೇರಣೆಯಿಂದ ನಾಗೇಂದ್ರ ರಾಜೀನಾಮೆಗೆ ಮುಂದಾಗಿದ್ದಾರೆ: ಡಿ.ಕೆ. ಶಿವಕುಮಾರ್ - Nagendra Will Resign

ETV Bharat Logo

Copyright © 2024 Ushodaya Enterprises Pvt. Ltd., All Rights Reserved.