ETV Bharat / state

ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಆರೋಪ ಪ್ರಕರಣ: ಮಾಜಿ ವ್ಯವಸ್ಥಾಪಕ ನಿರ್ದೇಶಕನ ಬಂಧನ - DDUTTL Case - DDUTTL CASE

ದೇವರಾಜ ಅರಸು ಟ್ರಕ್ ಟರ್ಮಿನಲ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್. ಶಂಕರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

DDUTTL Case Arrest of former managing director  Bengaluru  Devaraja Arasu Truck Terminal
ಎಸ್. ಶಂಕರಪ್ಪ (ETV Bharat)
author img

By ETV Bharat Karnataka Team

Published : May 28, 2024, 12:19 PM IST

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ (DDUTTL) ನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಅದರ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್. ಶಂಕರಪ್ಪ ಅವರನ್ನು ಬಂಧಿಸಿದ್ದಾರೆ.

ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿರುವ ಎಸ್. ಶಂಕರಪ್ಪ ಅವರು ಈ ಹಿಂದೆ ಡಿಡಿಯುಟಿಟಿಎಲ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅವರ ಅಧಿಕಾರ ಅವಧಿಯಲ್ಲಿ ಅಕ್ರಮ ನಡೆದಿರುವುದರ ಕುರಿತು ಕೆಲ ಮಾಹಿತಿಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಡಿಯುಟಿಟಿಎಲ್ 2021 ರಿಂದ 2023ರ ಅವಧಿಯಲ್ಲಿ 47.10 ಕೋಟಿಯಷ್ಟು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌. ಶಿವಪ್ರಕಾಶ್, ಕಳೆದ ಸೆಪ್ಟೆಂಬರ್‌ನಲ್ಲಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರನ್ವಯ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

ಡಿಡಿಯುಟಿಟಿಎಲ್ 2021 ಅಕ್ಟೋಬರ್ 25ರಂದು ನಡೆಸಲಾಗಿದ್ದ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್​ಗಳ ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿಯನ್ನು ತುರ್ತಾಗಿ ತುಂಡು ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲಾಗಿತ್ತು. ಸುಮಾರು 10 ಕೋಟಿವರೆಗೆ ತುಂಡು ಗುತ್ತಿಗೆಗೆ ನೀಡಲು ಅಕ್ರಮವಾಗಿ ಅನುಮೋದನೆ ನಿರ್ಣಯ ಮಾಡಲಾಗಿತ್ತು. ಕಾಮಗಾರಿ ನಡೆಯದಿದ್ದರೂ ನಕಲಿ ದಾಖಲೆಗಳನ್ನು ಸೃಷ್ಟಿಸಿ ಹಣ ಪಡೆಯಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಡಿಯುಟಿಟಿಎಲ್ ಕಚೇರಿ ಹಾಗೂ ಹಲವಾರು ಮನೆಗಳ ಮೇಲೆ ದಾಳಿ ನಡೆಸಿದ್ದ ಸಿಐಡಿ ಅಧಿಕಾರಿಗಳು 600ಕ್ಕೂ ಹೆಚ್ಚು ದಾಖಲೆಗಳನ್ನು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: ಭೀಕರ ಅಪಘಾತದಲ್ಲಿ ಬೈಕ್​ ಸವಾರ ಸಾವು, ಯುವತಿಯ ನಾಲಿಗೆ ಕಟ್​ - Road Accident

ETV Bharat Logo

Copyright © 2024 Ushodaya Enterprises Pvt. Ltd., All Rights Reserved.