ETV Bharat / state

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ - CM SIDDARAMAIAH IN TUMAKURU

ನಮ್ಮದು ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Country Development Is Possible Only Through The Development Of The States: Siddaramaiah
ಜನರತ್ತ ಕೈಬೀಸುತ್ತಿರುವ ಸಿಎಂ ಮತ್ತು ಡಿಸಿಎಂ (ETV Bharat)
author img

By ETV Bharat Karnataka Team

Published : Dec 2, 2024, 6:03 PM IST

ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತುಮಕೂರು ಜಿಲ್ಲಾಡಳಿತದ ವತಿಯಿಂದ ಇಂದು ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂ. ಮೊತ್ತದ 23,000ಕ್ಕೂ ಅಧಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

Country Development Is Possible Only Through The Development Of The States: Siddaramaiah
ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿದ ಕ್ಷಣ (ETV Bharat)

ಇಡೀ ದೇಶದಲ್ಲೇ ರಾಜ್ಯದ ಆದಾಯ (GDP- Gross Domestic Product) ಮೊದಲ ಸ್ಥಾನದಲ್ಲಿದೆ. ದೇಶದ ಆದಾಯ(ರಾಷ್ಟ್ರೀಯ ಆದಾಯ) ಇನ್ನೂ ಶೇ 8ರಷ್ಟಿದೆ. ಆದರೆ, ರಾಜ್ಯದ ಆದಾಯ ಶೇ 10ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದರು.

ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಇಂದು ನೇರವಾಗಿ ತಲುಪಿವೆ. ಪ್ರತೀ ಜಿಲ್ಲೆಯಲ್ಲೂ ಲಕ್ಷ ಲಕ್ಷ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ತಲುಪುತ್ತಲೇ ಇವೆ ಎಂದು ಹೇಳಿದರು.

ಫಲಾನುಭವಿಗಳಿಗೆ ಸವಲತ್ತು ವಿತರಣೆ (ETV Bharat)

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ. SCP/TSP ಕಾಯ್ದೆಯನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ ಮಾತ್ರ. ಆದ್ದರಿಂದ ನಮ್ಮ ಸರ್ಕಾರ ಮಹಿಳೆಯರ ಪರವಾದ ಸರ್ಕಾರ. ನಮ್ಮ ಸರ್ಕಾರ ಎಲ್ಲಾ ಜಾತಿಯ ಬಡವರ, ಹಿಂದುಳಿದವರ, ದಲಿತರ ಪರವಾಗಿರುವ ಸರ್ಕಾರ ಎಂದರು.

ಹಳ್ಳಿಗಳ, ತಾಲೂಕುಗಳ, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ GDP(ರಾಷ್ಟ್ರೀಯ ಆದಾಯ) ಪ್ರಗತಿ ಕಾಣಲು ಸಾಧ್ಯ. ಎಲ್ಲಾ ಧರ್ಮದ, ಎಲ್ಲಾ ಜಾತಿಯ ಜನರು ಆರ್ಥಿಕವಾಗಿ ಪ್ರಗತಿ ಹೊಂದಿದರೆ ಮಾತ್ರ ದೇಶದ ಜಿಡಿಪಿ ಬೆಳವಣಿಗೆಯಾಗುತ್ತದೆ. ಹೀಗಾಗಿ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ತುಮಕೂರು: ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.