ETV Bharat / state

ಮಾಘ ಪೂರ್ಣಿಮೆ: ಟಿ.ನರಸೀಪುರ ಕುಂಭಮೇಳದಲ್ಲಿ ಭಕ್ತರಿಂದ ಪವಿತ್ರ ಸ್ನಾನ - T NARASEEPUR KUMBH MELA

ಇಂದು ಮಾಘ ಪೂರ್ಣಿಮೆ. ಈ ಹಿನ್ನೆಲೆಯಲ್ಲಿ ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನದಲ್ಲಿ ಭಾಗಿಯಾದರು.

T NARASEEPUR KUMBH MELA
ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಪವಿತ್ರ ಸ್ನಾನ (ETV Bharat)
author img

By ETV Bharat Karnataka Team

Published : Feb 12, 2025, 4:02 PM IST

ಮೈಸೂರು: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ದಿಯಾದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದು ಮಾಘ ಪೂರ್ಣಿಮೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಫೆಬ್ರವರಿ 10ರಿಂದ ತಿರುಮಕೂಡಲಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಕುಂಭಮೇಳದಲ್ಲಿ ಇಂದು ಕೊನೆಯ ದಿನ.

ಸಂಗಮದಲ್ಲಿ ಈ ಸಲ 6 ವರ್ಷಗಳ ಬಳಿಕ ಕುಂಭಮೇಳ ನಡೆಯುತ್ತಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ನದಿಗಳು ಸಂಗಮವಾಗುವ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬುದು ಜನರ ನಂಬಿಕೆ.

ಟಿ.ನರಸೀಪುರ ಕುಂಭಮೇಳದಲ್ಲಿ ಭಕ್ತರಿಂದ ಪವಿತ್ರ ಸ್ನಾನ (ETV Bharat)

ಸೋಮವಾರ ಆರಂಭವಾದ ಕುಂಭಮೇಳಕ್ಕೆ ತಂಡೋಪತಂಡವಾಗಿ ಆಗಮಿಸಿದ ಭಕ್ತರು ಅಗಸ್ತೇಶ್ವರ, ಗುಂಜಾ ನರಸಿಂಹಸ್ವಾಮಿ ಹಾಗೂ ಭಿಕ್ಷೇಶ್ವರ ಸ್ವಾಮಿ ದೇಗುಲಗಳಲ್ಲಿ ದೇವರ ದರ್ಶನ ಪಡೆದು, ನಂತರ ಪುಣ್ಯಸ್ನಾನ ಮಾಡಿದರು. ಹಳೆ ಮೈಸೂರು ಭಾಗದ ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆ ಮಾತ್ರವಲ್ಲದೇ, ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಸೇರಿದಂತೆ, ರಾಜ್ಯದ ಮಧ್ಯ ಹಾಗೂ ಉತ್ತರ ಭಾಗದ ಜಿಲ್ಲೆಗಳಿಂದಲೂ ಭಕ್ತರು ಹರಿದು ಬಂದಿದ್ದರು.

T NARASEEPUR KUMBH MELA
ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಪವಿತ್ರ ಸ್ನಾನ (ETV Bharat)

ಇದನ್ನೂ ಓದಿ: ಆರ್ಥಿಕ ಅಭಿವೃದ್ಧಿಗೆ ಸಾಕ್ಷ್ಯಿಯಾದ ಮಹಾ ಕುಂಭಮೇಳ: ಹಲವು ಉದ್ಯೋಗಗಳ ಸೃಷ್ಟಿ- ಹೀಗೆ ಹೇಳುತ್ತಿವೆ ಅಂಕಿ - ಅಂಶಗಳು!

ನೆರೆಯ ರಾಜ್ಯಗಳಾದ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಿಂದಲೂ ಭಕ್ತರು ಆಗಮಿಸಿದ್ದಾರೆ. ಈ ಹಿಂದಿನಿಂದಲೂ ಮೂರು ವರ್ಷಕ್ಕೊಮ್ಮೆ ಜರುಗುವ ಈ ಕುಂಭಮೇಳವು ಕೋವಿಡ್ ಕಾರಣ 2022ರಲ್ಲಿ ನಡೆದಿರಲಿಲ್ಲ. ಪ್ರಯಾಗರಾಜ್​ನಲ್ಲಿ ಮಹಾಕುಂಭಮೇಳ ನಡೆಯುತ್ತಿದ್ದು, ಅಲ್ಲಿಯೂ ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ. ಅಂತೆಯೇ, ಆರು ವರ್ಷದ ನಂತರ ತಿರುಮಕೂಡಲಿನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ರಾಜಣ್ಣ ದೊಡ್ಡವರು, ಅವರ ಬಗ್ಗೆ ನಾನು ಮಾತನಾಡಲ್ಲ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನದ ಬಳಿಕ ಡಿಸಿಎಂ ಮಾತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.