ಚಿಕ್ಕಮಗಳೂರು: ಕಾಫಿನಾಡಲ್ಲಿ ಇಂದಿನಿಂದ ದತ್ತ ಜಯಂತಿ ಸಂಭ್ರಮ ಆರಂಭವಾಗಿದ್ದು, ದತ್ತ ಭಕ್ತರಿಂದ ಮಾಲಾಧಾರಣೆ ನಡೆಯಿತು.
ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಲಾಧಾರಣೆ ನಡೆಯಿತು. ಮಾಜಿ ಸಚಿವ ಸಿ.ಟಿ.ರವಿ, ಭಜರಂಗದಳದ ಮುಖಂಡ ರಘು ಸಕಲೇಶಪುರ ಸೇರಿ 100ಕ್ಕೂ ಹೆಚ್ಚು ದತ್ತ ಭಕ್ತರು ಮಾಲಾಧಾರಣೆ ಮಾಡಿದರು. ಇಂದಿನಿಂದ 9 ದಿನ ಭಕ್ತರು ವ್ರತಾಚರಣೆ ಮಾಡಲಿದ್ದಾರೆ.
ಡಿ.12ರಂದು ಅನಸೂಯ ಜಯಂತಿ, 13 ರಂದು ಬೃಹತ್ ಶೋಭಾಯಾತ್ರೆ ನಡೆಯಲಿದೆ. ಡಿ.14ರಂದು ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ ಮಾಡಲಿದ್ದಾರೆ.
ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸೇರಿದಂತೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.
ಇದನ್ನೂ ಓದಿ: ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆದ ಸಾವಿರಾರು ಮಾಲಾಧಾರಿಗಳು: ಪೊಲೀಸ್ ಬಿಗಿ ಭದ್ರತೆ