ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಮಾದಕ ವಸ್ತು ಬಳಕೆದಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗೆ ವಶಕ್ಕೆ ಪಡೆದ ವ್ಯಸನಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.
ಧಾರವಾಡದ ಮೂರು ಪೊಲೀಸ್ ಠಾಣೆಗಳಾದ ಉಪನಗರ, ವಿದ್ಯಾಗಿರಿ ಹಾಗೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾದಕ ವ್ಯಸನಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಡಿಮ್ಹಾನ್ಸ್ನಲ್ಲಿ ತಪಾಸಣೆಗೊಳಪಡಿಸಲಾಗಿದೆ. ಪ್ರತಿ ಠಾಣೆಯಿಂದ 20ಕ್ಕೂ ಅಧಿಕ ಮಾದಕ ವಸ್ತು ಬಳಕೆದಾರರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವೈದ್ಯಕೀಯ ಪರೀಕ್ಷೆಯ ನಂತರ ಮಾನಸಿಕ ರೋಗ ತಜ್ಞರಿಂದ ಕೌನ್ಸಲಿಂಗ್ ನಡೆಸಲಾಗುತ್ತದೆ.
ಹುಬ್ಬಳ್ಳಿ ಧಾರವಾಡ ಕಮೀಷನರ್ ಶಶಿಕುಮಾರ್ ಎನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: ದಲಿತ ವ್ಯಕ್ತಿಯ ಮೇಲೆ ಹಲ್ಲೆ, ಕೈ ಕಟ್: ರೌಡಿಶೀಟರ್‌ಗಳಿಗೆ ಪೊಲೀಸ್ ಗುಂಡೇಟು - Police Firing