ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಹಿನ್ನೆಲೆ ಶನಿವಾರ ಡಿಐಜಿ ಟಿ.ಪಿ ಶೇಷ ಜೈಲಿಗೆ ಭೇಟಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಜೈಲಿನಲ್ಲಿ ಇಂಡಿಯನ್ ಟಾಯ್ಲೆಟ್ ಇದೆ. ಬೆನ್ನೆಲುಬು ಸಮಸ್ಯೆ ಇರುವ ಕಾರಣ ಶೌಚಕ್ಕೆ ಕಷ್ಟವಾಗುತ್ತದೆ' ಎಂದು ದರ್ಶನ್ ಹೇಳಿದ್ದಾರೆ. ಈ ಬಗ್ಗೆ ಮೆಡಿಕಲ್ ರೆಕಾರ್ಡ್ ನೋಡಿ ವೆಸ್ಟ್ರನ್ ಕಮೋಡ್ ಒದಗಿಸಿಕೊಡುವ ಬಗ್ಗೆ ಪರಿಶೀಲಿಸಲಾಗುತ್ತದೆ. ಜೈಲಿನ ವೈದ್ಯರು ಪರಿಶೀಲಿಸುತ್ತಾರೆ, ನಂತರ ಅಗತ್ಯ ಸೌಲಭ್ಯ ಕೊಡಲಾಗುತ್ತದೆ. ಅವಶ್ಯಕತೆ ಇದ್ದರೆ ದರ್ಶನ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತೇವೆ. ಸಾಮಾನ್ಯ ಕೈದಿಗೆ ಹೇಗೆ ಚಿಕಿತ್ಸೆ ಕೊಡಿಸುತ್ತೇವೆಯೋ ಅದರಂತೆ ದರ್ಶನ್ಗೂ ಕೊಡಿಸುತ್ತೇವೆ ಎಂದರು.
ಇಂದು ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ತಂಗಿಯ ಪತಿ ಆಗಮಿಸಿದ್ದರು. ಅವರು ಸಿಸಿಟಿವಿ ಕಣ್ಗಾವಲಿನಲ್ಲಿ ದರ್ಶನ್ ಜೊತೆ ಮಾತನಾಡಿದ್ದಾರೆ. ದರ್ಶನ್ಗೆ ಬಟ್ಟೆ, ಸಾಬೂನು, ಶಾಂಪೂ ಮತ್ತು ಡ್ರೈಫ್ರೂಟ್ಸ್ ಕೊಟ್ಟಿದ್ದಾರೆ. ಬ್ಲಾಂಕೆಟ್ ತಂದಿದ್ದರು, ಅದನ್ನು ಕೊಡಲು ಅನುಮತಿಸಿಲ್ಲ ಎಂದು ತಿಳಿಸಿದರು.
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನಡೆದಂತೆ ಬಳ್ಳಾರಿ ಕಾರಗೃಹದಲ್ಲಿ ದರ್ಶನ್ ಮಾತ್ರವಲ್ಲ, ಇತರೆ ಕೈದಿಗಳಿಗೂ ವಿಶೇಷ ಸೌಲಭ್ಯ ಸಿಗಬಾರದು ಎಂದು ಎಲ್ಲಾ ಸಿಬ್ಬಂದಿಗೆ ಸೂಚನೆ ಕೊಟ್ಟಿರುವುದಾಗಿ ಹೇಳಿದರು.
ಇದನ್ನೂ ಓದಿ: ದರ್ಶನ್ ನೋಡಲು ವಕೀಲರ ತಂಡದೊಂದಿಗೆ ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ - VIJAYALAKSHMI VISITS BELLARY JAIL