ETV Bharat / state

ರಾಜ್ಯದಲ್ಲಿ ಹೆಚ್ಚಾಗ್ತಿದೆ 'ಡಿಜಿಟಲ್ ಅರೆಸ್ಟ್' ವಂಚನೆ: ದಾಖಲಾದ ಪ್ರಕರಣವೆಷ್ಟು? ಪೊಲೀಸರು ಬಂಧಿಸಿದ್ದೆಷ್ಟು? - DIGITAL ARREST FRAUD

ದಿನೇ ದಿನೇ ಡಿಜಿಟಲ್​ ಅರೆಸ್ಟ್​ ಪ್ರರಕಣಗಳು ಹೆಚ್ಚಾಗುತ್ತಿವೆ. ಕಳೆದ ವರ್ಷ ಇಡೀ ದೇಶದಲ್ಲಿ 42,000 ಪ್ರಕರಣಗಳು ದಾಖಲಾಗಿಲೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದ್ದಾರೆ.

Home Minister G Parameshwar
ಗೃಹ ಸಚಿವ ಜಿ.ಪರಮೇಶ್ವರ್​ (ETV Bharat)
author img

By ETV Bharat Karnataka Team

Published : Dec 12, 2024, 10:39 PM IST

ಬೆಳಗಾವಿ: "ರಾಜ್ಯದಲ್ಲಿ ದಿನೇ ದಿನೇ ಡಿಜಿಟಲ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಸಾಲಿಗೆ ಡಿಜಿಟಲ್ ಅರೆಸ್ಟ್ ಮತ್ತೊಂದು ಸೇರ್ಪಡೆ. ಈ ಕುರಿತು ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್, ವಾಟ್ಸ್‌ಆ್ಯಪ್ ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಸುವರ್ಣಸೌಧದಲ್ಲಿ ಇಂದು ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿ, "ರಾಜ್ಯದಲ್ಲಿ ಈ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆಯಾಗಿದ್ದು, ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು, 27 ಜನರನ್ನು ಬಂಧಿಸಲಾಗಿದೆ ಎಂದು ಉತ್ತರಿಸಿದರು.

"ಸಾರ್ವಜನಿಕರನ್ನು ಇಂತಹ ಅಪರಾಧ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, ಟೆಲಿಗ್ರಾಂ, ಇತರೆ ಅಂತರ್ಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್‍ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್‍ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ಯಾಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ" ಎಂದರು.

"ಶಾಲಾ, ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ ಡಿಜಿಟಲ್ ಅರೆಸ್ಟ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42,000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930ಗೆ ಮಾಹಿತಿ ನೀಡಬೇಕು" ಎಂದು ತಿಳಿಸಿದರು.

ಇದನ್ನೂ ಓದಿ: ಕಾನೂನು ಕೈಗೆತ್ತಿಕೊಂಡಿದ್ದರಿಂದ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಅನಿವಾರ್ಯವಾಯ್ತು: ಜಿ.ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.