ETV Bharat / state

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ: ಆರೋಗ್ಯ ಸಚಿವರ ಸ್ಪಷ್ಟನೆ - TREATMENT RATE REVISION

ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆ ಚಿಕಿತ್ಸಾ ವೆಚ್ಚ ಹೆಚ್ಚಳ ಮಾಡುತ್ತಿದ್ದು, ಇದೂ ಕೂಡಾ ಗ್ಯಾರಂಟಿಗೆ ಹಣ ಕ್ರೋಢೀಕರಿಸುವ ನಿಟ್ಟಿನಲ್ಲಿ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

DINESH GUNDU RAO CLARIFIES
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ (ETV Bharat)
author img

By ETV Bharat Karnataka Team

Published : Nov 20, 2024, 4:55 PM IST

ದಾವಣಗೆರೆ: ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಪ್ರಾಥಮಿಕ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚದ ಹಣ ಸರ್ಕಾರಕ್ಕೆ ಬರುವುದಿಲ್ಲ. ಅದು ಆರೋಗ್ಯ ರಕ್ಷಾ ಸಮಿತಿ(Arogya Raksha Simitis - ARS)ಗೆ ಹೋಗುತ್ತದೆ. ಬಹಳ ವರ್ಷಗಳ ಬಳಕ ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ನಿರ್ಧರಿಸಲಾಗಿದೆ. 10ರೂ. ಇದ್ದದ್ದನ್ನು 20ರೂ.ಗೆ ಹಾಗೂ 20ರೂ. ಇದ್ದದ್ದನ್ನು 30ರೂ.ಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಕೆಲವೆಡೆ 30ರೂ. ಇದ್ದದ್ದನ್ನು 40ರೂ.ಗೆ ಹೆಚ್ಚಳ ಮಾಡಲಾಗಿದೆ. ಜೊತೆಗೆ ಈ ಚಿಕಿತ್ಸಾ ವೆಚ್ಚ ಹೆಚ್ಚಳದ ಹಣ ಆಸ್ಪತ್ರೆಗೆ ಹೋಗುತ್ತದೆ ವಿನಃ ಆ ಹಣ ಸರ್ಕಾರಕ್ಕೆ ಬರುವುದಿಲ್ಲ. ಹೆಚ್ಚಳ ಏನು ದೊಡ್ಡ ವಿಚಾರ ಅಲ್ಲ. ಆದರೆ ಈ ಬಿಜೆಪಿಯವರು ಅದನ್ನೇ ದೊಡ್ಡದಾಗಿ ಮಾಡುತ್ತಿದ್ದಾರೆ. ಇದು ARS ಕಮೀಟಿಯ ತೀರ್ಮಾನ. ಆಸ್ಪತ್ರೆ ಆದಾಯ ಹೆಚ್ಚು ಮಾಡಿಕೊಳ್ಳಲು ಈ ನಿರ್ಧಾರ ಮಾಡಿದ್ದಾರೆ. ಆದರೆ, ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿಯವರು ಗ್ಯಾರಂಟಿಗೆ ಹಣ ಕ್ರೋಢೀಕರಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿಗಳಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿಯವರು ಮೊದಲು ರೈತರಿಗೆ ಬರಬೇಕಾದ ನಬಾರ್ಡ್ ದುಡ್ಡು ಕೊಡಿಸಲಿ' ಎಂದು ಸವಾಲು ಹಾಕಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ (ETV Bharat)

'ಎಲ್ಲಾ ವಿಚಾರಗಳಿಗೂ ಗ್ಯಾರಂಟಿ ಯೋಜನೆಗಳನ್ನು ತಳುಕು ಹಾಕುವುದು ಹೆಚ್ಚಾಗುತ್ತಿದೆ. ದರ ಪರಿಷ್ಕರಣೆ ಎಲ್ಲ ಸರ್ಕಾರಗಳ ಅವಧಿಯಲ್ಲಿಯು ನಡೆಯುತ್ತಲೇ ಇರುತ್ತದೆ. ವರ್ಷಗಳ ಬಳಿಕ ಆಸ್ಪತ್ರೆ ಸೇವೆಗಳ ದರದಲ್ಲಿ ಅಲ್ಪ ಪರಿಷ್ಕರಣೆಯಾಗಿದೆ. ಇದನ್ನು ಗ್ಯಾರಂಟಿ ಯೋಜನೆಗಳೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ' ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಜನ ವಿರೋಧಿಸಿದರೂ ನೀರಿನ ದರ ಏರಿಕೆ ಅನಿವಾರ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ - Bengaluru Water Price

ETV Bharat Logo

Copyright © 2025 Ushodaya Enterprises Pvt. Ltd., All Rights Reserved.