ETV Bharat / state

ಕೋಲಾರದ ವಿವಿಧೆಡೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ದಿನೇಶ್ ಗುಂಡೂರಾವ್

ಕೋಲಾರದ ಬಾಣಂತಿ ಸಾವಿನ ಬಗ್ಗೆ ಪರಿಶೀಲನೆ ನಡೆಸಿ ವಿಚಾರಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

author img

By ETV Bharat Karnataka Team

Published : Mar 6, 2024, 7:48 PM IST

ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್

ಕೋಲಾರ : ಜಿಲ್ಲೆಯ ವಿವಿಧೆಡೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಇಂದು ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆಗೆ ಚಾಲನೆ ಸಿಕ್ಕಿತು. ನಂತರ ಮಾತನಾಡಿದ ಅವರು, ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ 12 ಬೆಡ್​ಗಳ ಐಸೋಲೇಷನ್ ಬೆಡ್ ಮತ್ತು ಡಯಾಲಿಸಿಸ್​ ಘಟಕವನ್ನು ಉದ್ಘಾಟನೆ ಮಾಡಲಾಗಿದ್ದು, ಅದೇ ರೀತಿ ಕೆಜಿಎಫ್​ನ ಸರ್ಕಾರಿ ಆಸ್ಪತ್ರೆಯಲ್ಲಿ ಬ್ಲಾಕ್ ಲೆವೆಲ್ ಪಬ್ಲಿಕ್ ಹೆಲ್ತ್​ ಯೂನಿಟ್ ಮತ್ತು ಆಂಬ್ಯುಲೆನ್ಸ್ ಮತ್ತು ಆಧುನಿಕ ಇಸಿಜಿ ಯಂತ್ರವನ್ನು ಉದ್ಘಾಟನೆ ಮಾಡಲಾಗುವುದು ಎಂದರು.

ನಂತರ ಮುಳಬಾಗಿಲು ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಕಟ್ಟಡ ಹಾಗೂ 12 ಬೆಡ್​ಗಳ ಐಸೋಲೇಷನ್ ವಾರ್ಡ್ ಉದ್ಟಾಟನೆ ಮಾಡಲಿದ್ದು, ನಂತರ ಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಸಹ ಐಸೋಲೇಷನ್ ಬೆಡ್ ಉದ್ಘಾಟನೆ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಕೋಲಾರದ ಬಾಣಂತಿ ಸಾವಿನ ಬಗ್ಗೆ ಪರಿಶೀಲನೆ ನಡೆಸಿ ವಿಚಾರಣೆ ನಡೆಸಲಾಗುವುದು. ವೈದ್ಯರ ನಿರ್ಲಕ್ಷ್ಯ ಏನಾದರೂ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. ಆದ್ರೆ ಆಸ್ಪತ್ರೆಗೆ ಬರುವ ಜನರನ್ನು ಡೈವರ್ಟ್​ ಮಾಡಬಾರದು. ಪಾವಗಡದಲ್ಲಿ ಬಾಣಂತಿ ಸಾವು ಸಂಭವಿಸಿದ್ದು, ಅಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನಮಗೆ ಅನುದಾನ ನೀಡಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2 ಬೆಡ್​ಗಳ ಡಯಾಲಿಸಿಸ್​ ಮತ್ತು 12 ಬೆಡ್‌ಗಳ ಐಸೋಲೇಷನ್ ಬೆಡ್​ನ್ನು ಮಾಡಲಾಗಿದೆ ಎಂದು ಹೇಳಿದರು.

ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ : ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆ ಖಂಡಿಸಿ ಕೋಲಾರದಲ್ಲಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೋಲಾರ ನಗರದ ಡೂಮ್ ಲೈಟ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಗರದ‌ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಘೋಷಣೆಗಳನ್ನು ಕೂಗಿದರು. ರಾಜ್ಯದಲ್ಲಾಗುತ್ತಿರುವ ಭಯೋತ್ಪಾದಕ ಚಟುವಟಿಕೆಗಳು ಇತ್ತೀಚಿಗೆ ನಡೆಯುತ್ತಿದ್ದು, ಇದಕ್ಕೆ ರಾಜ್ಯ ಸರ್ಕಾರ ಕಾರಣವೆಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್, ಗಲಭೆಗಳು, ಪಾಕಿಸ್ತಾನ ಜಿಂದಾಬಾದ್​ನಂತಹ ಕೃತ್ಯಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕಾದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ದೂರಿದರು. ಸಂಸದ ಎಸ್. ಮುನಿಸ್ವಾಮಿ, ಪರಿಷತ್ ಸದಸ್ಯ ವೈ. ಎ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕೇರಳದಿಂದ ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್​ ದಾಳಿ ಮಾಡಲಾಗಿದೆ, ತನಿಖೆ ನಡೆಯುತ್ತಿದೆ: ಸಚಿವ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.