ETV Bharat / state

ಅನುದಾನ ಕೊರತೆ ಸಂಬಂಧ ಬಹಿರಂಗ ಹೇಳಿಕೆ ನೀಡಿದರೆ ಶಿಸ್ತು ಕ್ರಮ: ಡಿ.ಕೆ.ಶಿವಕುಮಾರ್ - DK SHIVAKUMAR WARN

ಎಲ್ಲ ಶಾಸಕರಿಗೂ ಅನುದಾನವನ್ನು ನೀಡಿದ್ದೇವೆ. ಅನುದಾನ ಕೊರತೆ ಸಂಬಂಧ ಬೇರೆ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ, ಶಿಸ್ತು ಕ್ರಮ ವಹಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.

DK Shivakumar
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Nov 26, 2024, 8:52 PM IST

ಬೆಂಗಳೂರು: ಅನುದಾನ ಕೊರತೆ ಸಂಬಂಧ ಬಹಿರಂಗ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಅನುದಾನ ಕೊರತೆ ಬಗ್ಗೆ ಕೈ ಶಾಸಕ ಗವಿಯಪ್ಪ ಬೇಸರ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಗವಿಯಪ್ಪ ಹಾಗೆ ಹೇಳಿದ್ದಾರೆ ಅಂತ ನಾನು ಅಂದುಕೊಳ್ಳಲ್ಲ. ನಮ್ಮ ಪಕ್ಷ ಈಗಾಗಲೇ ಬಜೆಟ್ ಘೋಷಣೆ ಮಾಡಿದೆ.

ಅದರ ಅಡಿಯಲ್ಲಿ ಅನುದಾನ ಹಂಚಿಕೆ ಆಗುತ್ತದೆ. ಗ್ಯಾರಂಟಿ ನಿಲ್ಲಿಸುವಂತೆ ಹೇಳಿದ್ದಾರೆ ಅಂತ ನಾನು ಒಪ್ಪಲ್ಲ. ಎಲ್ಲ ಶಾಸಕರಿಗೂ ಅನುದಾನವನ್ನು ನೀಡಿದ್ದೇವೆ. ಗವಿಯಪ್ಪಗೆ ಸರಿಯಾದ ಮಾಹಿತಿ ಇಲ್ಲ ಅನ್ಸುತ್ತೆ. ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದೇವೆ. ಗವಿಯಪ್ಪ ಜೊತೆಗೆ ನಾನು ಮಾತನಾಡುತ್ತೇನೆ. ಅವರಿಂದ ಸ್ಪಷ್ಟನೆ ಕೇಳುತ್ತೇನೆ. ಬೇರೆ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ರೆ, ಶಿಸ್ತು ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಗ್ಯಾರಂಟಿ ನಿಲ್ಲಿಸಿ ಅಂದಿರೋದು‌ ಗೊತ್ತಿಲ್ಲ. ಏನು ಹೇಳಿದ್ದಾರೆ ಅವರಿಂದ ಕೇಳ್ತೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ. ಪ್ರತಿವರ್ಷ 250 ಕೋಟಿ‌ ರೂ. ಕೊಡುತ್ತಿದ್ದೇವೆ. ಒಂದೊಂದು ಕ್ಷೇತ್ರಕ್ಕೆ 250 ಕೋಟಿ ಹೋಗ್ತಿದೆ. ಅನುದಾನದ ವಿಚಾರದಲ್ಲಿ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜಾರ್ಖಂಡ್ ಸಿಎಂ ಪದಗ್ರಹಣದಲ್ಲಿ ಭಾಗಿ: ಜಾರ್ಖಂಡ್ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇನೆ ಎಂದು ಡಿಸಿಎಂ ಇದೇ ವೇಳೆ ತಿಳಿಸಿದರು. ಡಿಸೆಂಬರ್ 28 ರಂದು ನಡೆಯುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸ್ತೇನೆ. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲ್ಲ ಎಂದರು.

ದೆಹಲಿ ಹೈಕಮಾಂಡ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ದೆಹಲಿಗೆ ಹೋಗ್ತಿದ್ದೇನೆ. ಹೋದ ಮೇಲೆ ಭೇಟಿ ಆಗದೇ ಬರುತ್ತೇನಾ?. ಖಂಡಿತವಾಗಿ ನಾನು‌ ಭೇಟಿ‌ ಮಾಡ್ತೇನೆ. ಕೆಲ ವಿಷಯ ಚರ್ಚೆ ಮಾಡುವುದಿದೆ‌. ಮಹದಾಯಿ, ಬೆಳಗಾವಿ ಕಾಂಗ್ರೆಸ್ ಅಧಿವೇಶನ. ಇನ್ನೂ ಅನೇಕ ವಿಚಾರಗಳು ಇದ್ದೇವೆ. ಈ ಬಗ್ಗೆ ಚರ್ಚೆ ಮಾಡಲು ಹೊರಟಿದ್ದೇನೆ. ಕಾಂಗ್ರೆಸ್ ಪಕ್ಷದ ದೇವಸ್ಥಾನ ದೆಹಲಿಯಲ್ಲಿದೆ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡುತ್ತೇನೆ. ಅದು ನನ್ನ ಮನೆ, ಭೇಟಿ ಮಾಡದೇ ಬರಲು ಸಾಧ್ಯವಾ?. ಹೈಕಮಾಂಡ್ ಜೊತೆ ಕೆಲವೊಂದು ವಿಚಾರಗಳನ್ನು ಚರ್ಚಿಸುತ್ತೇನೆ ಎಂದು ತಿಳಿಸಿದರು.

ಮಹಾದಾಯಿ ಬಗ್ಗೆ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದಾರೆ. ಪರ್ಮಿಷನ್ ಕೊಡಿಸುವ ಬಗ್ಗೆ ಹೇಳಿದ್ದಾರೆ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಜೊತೆಗೆ ದೇವೇಗೌಡರು ಕೂಡ ಮೇಕೆದಾಟಿಗೆ ಪರ್ಮಿಷನ್ ಕೊಡಿಸಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ನನಗೆ ಬರುವ ನೋಟಿಸ್ ಓದಲು ಮಗನಿಗೆ ಕಾನೂನು ಓದಿಸುತ್ತಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.