ETV Bharat / state

ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ, ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ: ಡಿ.ಕೆ.ಸುರೇಶ್ - DK SURESH SLAMS CENTRAL GOVT

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

DK SURESH SLAMS CENTRAL GOVT
ಮಾಜಿ ಸಂಸದ ಡಿ.ಕೆ.ಸುರೇಶ್ (ETV Bharat)
author img

By ETV Bharat Karnataka Team

Published : Oct 11, 2024, 2:31 PM IST

Updated : Oct 11, 2024, 2:53 PM IST

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಮತ್ತೆ ತಾರತಮ್ಯ ಮಾಡುತ್ತಿದೆ ಎಂದು ಆರೋಪ ಮಾಡಿರುವ ಮಾಜಿ ಸಂಸದ ಡಿಕೆ ಸುರೇಶ್, ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ.‌ ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಕೂಗಿತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿದ ಅವರು, ಕೇಂದ್ರದಿಂದ ಜಿಎಸ್​ಟಿ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಆಗಿದೆ ಎಂದು ಆರೋಪಿಸುತ್ತಾ, ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ರಾಜ್ಯ, ದಕ್ಷಿಣ ಭಾರತಕ್ಕೆ ಅನ್ಯಾಯ ಎಂದಿದ್ದೆ. ಆಗ ನನ್ನ ಹೇಳಿಕೆಯನ್ನು ವಿವಾದ ಮಾಡಲಾಯ್ತು. ನಿನ್ನೆ ಕೇಂದ್ರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28,152 ಕೋಟಿ ರೂ. ನೀಡಿದೆ. ಉತ್ತರ ಪ್ರದೇಶ ಒಂದಕ್ಕೆ 32,000 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಪದೇ ಪದೆ ಕೆಣಕುವ ಪ್ರಯತ್ನ ನಡೆದಿದೆ ಎಂದು ಕಿಡಿ ಕಾರಿದರು.

ಮಾಜಿ ಸಂಸದ ಡಿ.ಕೆ.ಸುರೇಶ್ (ETV Bharat)

ದುಃಖದಿಂದ ಈ ಮಾತು ಹೇಳಬೇಕಿದೆ. ರಾಜ್ಯದ ಅಭಿವೃದ್ಧಿಗೆ ಅನ್ಯಾಯವಾಗ್ತಿದೆ. ದಕ್ಷಿಣ ರಾಜ್ಯಗಳನ್ನು ಒಟ್ಟಿಗೆ ಕೊಂಡೊಯ್ಯಬೇಕು. ಬಿಜೆಪಿಯ 19 ಸಂಸದರು ಇದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಇದೆ. ಆದರೆ ಸಂಸದರು ಧ್ವನಿ ಎತ್ತುತ್ತಿಲ್ಲ. ನಾನು ಒತ್ತಾಯ ಮಾಡುತ್ತೇನೆ. ನಿಮ್ಮ‌ ನೀತಿಯನ್ನು ಬದಲಾವಣೆ ಮಾಡಿಕೊಳ್ಳಿ. ರಾಜ್ಯಕ್ಕೆ, ದಕ್ಷಿಣ ಭಾರತಕ್ಕೆ ಹೆಚ್ಚಿನ ತೆರಿಗೆ ನೀಡಿ. ಕರ್ನಾಟಕವನ್ನು ಕಡೆಗಣಿಸಬೇಡಿ ಎಂದು ಆಗ್ರಹಿಸಿದರು.

ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಕೂಗಿತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ. ನಾವೂ ಭಾರತಾಂಬೆಯ ಮಕ್ಕಳು. ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ತೆರಿಗೆ ಸಂಗ್ರಹ ತಲೆನೋವು: ಆರ್ಥಿಕ ಹೊರೆ ಮಧ್ಯೆ ಬಜೆಟ್ ಗುರಿ ತಲುಪಲಾಗದ ತೆರಿಗೆ ರಾಜಸ್ವ ಸಂಗ್ರಹ - Tax Revenue Collection

Last Updated : Oct 11, 2024, 2:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.