ETV Bharat / state

ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಗಳ ಖಾಯಂ ಸ್ಥಳಾಂತರಕ್ಕೆ ಚರ್ಚಿಸಿ ತೀರ್ಮಾನ: ಸಿಎಂ - siddaramaiah

author img

By ETV Bharat Karnataka Team

Published : Aug 6, 2024, 8:10 AM IST

ಕೃಷ್ಣಾ ನದಿ ಪ್ರವಾಹದಿಂದ ಬಾಧಿತವಾದಂತಹ ಜುಗುಳ ಸೇರಿದಂತೆ ಉಳಿದ ಗ್ರಾಮಗಳ ಗ್ರಾಮಗಳ ಖಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಂದ ಸ್ಥಳ ಪರಿಶೀಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸ್ಥಳ ಪರಿಶೀಲನೆ (ETV Bharat)
ಮುಖ್ಯಮಂತ್ರಿ ಸಿದ್ಧರಾಮಯ್ಯ (ETV Bharat)

ಚಿಕ್ಕೋಡಿ(ಬೆಳಗಾವಿ): "ಪ್ರತಿ ವರ್ಷ ಮಳೆಯಿಂದಾಗಿ ಜುಗುಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಈ ಗ್ರಾಮಗಳ ಖಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಸೋಮವಾರ ಕೃಷ್ಣಾ ನದಿ ಪ್ರವಾಹದಿಂದ ಬಾಧಿತವಾದಂತಹ ಜುಗುಳ ಗ್ರಾಮ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿ ಗ್ರಾಮವಾದ ಕಿದರಾಪುರ ನಡುವೆ ನಿರ್ಮಿಸಲಾದ ಸೇತುವೆ ಹಾಗೂ ಕೃಷ್ಣಾ ನದಿಯನ್ನು ಸಿಎಂ ಸಿದ್ಧರಾಮಯ್ಯ ಪರಿಶೀಲಿಸಿ ಈ ಬಗ್ಗೆ ಮಾತನಾಡಿದರು.

"ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಶೇ.62ರಷ್ಟು ಹೆಚ್ಚು ಮಳೆಯಾಗಿದೆ. ಎಲ್ಲ‌ ಜಲಾಶಯಗಳು ತುಂಬಿವೆ. ಮಹಾರಾಷ್ಟ್ರದಿಂದಲೂ ನೀರು ಬರುತ್ತಿರುವುದರಿಂದ ಈ ಮೂರು ಗ್ರಾಮಗಳು ಪ್ರವಾಹ ಪರಿಸ್ಥಿತಿಯಿಂದಾಗಿ ಮುಳುಗಡೆ ಆಗುವುದರಿಂದ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ. ಜುಗೂಳ, ಶಹಾಪುರ ಹಾಗೂ ಮಂಗಾವತಿ ಗ್ರಾಮಗಳು ವಿಶೇಷವಾಗಿ ಪ್ರವಾಹ ಪೀಡಿತವಾಗುವ ಗ್ರಾಮಗಳಾಗಿದ್ದು ಈ ಮೂರು ಗ್ರಾಮಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮನೆಗಳಿವೆ. ಪ್ರವಾಹ ಸಂದರ್ಭದಲ್ಲಿ ತಾತ್ಕಾಲಿಕ ಪರಿಹಾರದ ಬದಲು ಖಾಯಂ ಆಗಿ ಈ ಗ್ರಾಮಗಳನ್ನು ಸ್ಥಳಾಂತರ ಮಾಡುವುದು ಈ ಗ್ರಾಮಸ್ಥರ ಬೇಡಿಕೆಯಾಗಿದೆ. ಕೃಷ್ಣಾ ನದಿ ಪ್ರವಾಹ ಬಂದಾಗ ಅನೇಕ ಅನಾಹುತಗಳಾಗುತ್ತವೆ. ಈ ಗ್ರಾಮಗಳನ್ನು ಖಾಯಂ ಆಗಿ ಸ್ಥಳಾಂತರ ಮಾಡಲು ಈ ಭಾಗದ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಯೋಗ್ಯವಾದ ತೀರ್ಮಾನವನ್ನು ಕೈಗೊಳ್ಳಲಾಗುವುದು" ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

"ಮಳೆ‌ ಜಾಸ್ತಿಯಾದಾಗ ಪ್ರವಾಹ ಬಂದಾಗ ಇಂತಹ ಪರಿಸ್ಥಿತಿಗಳು ಉದ್ಭವವಾಗುತ್ತವೆ ಈ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು. ಕಷ್ಟದಲ್ಲಿರುವವರಿಗೆ ನಮ್ಮ ಸರ್ಕಾರದಿಂದ ಕೂಡಲೇ ಪರಿಹಾರ ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಯಾರೂ ಕೂಡ ಆತಂಕ ಪಡಬಾರದು" ಎಂದು ಹೇಳುವ ಮೂಲಕ ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಿದರು. ಬೆಳೆಹಾನಿ ಕುರಿತಂತೆ ಸಮೀಕ್ಷೆ‌ ಜರುಗಿಸಿ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳನ್ವಯ ಪರಿಹಾರ ವಿತರಿಸಲು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷರಾದ ರಾಜು ಕಾಗೆ ಮಾತನಾಡಿ, "ಮಂಗಾವತಿ, ಶಹಾಪುರ ಹಾಗೂ ಜುಗುಳ ಗ್ರಾಮಸ್ಥರು ಪ್ರವಾಹದಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಸ್ತ್ರತವಾಗಿ ತಿಳಿಸಲಾಗಿದೆ. ಗ್ರಾಮದ ಬಹು ಮುಖ್ಯ ಬೇಡಿಕೆಯಾದ ಗ್ರಾಮಗಳ ಸ್ಥಳಾಂತರ ಮಾಡಲು ವಿನಂತಿ ಮಾಡಲಾಗಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ" ಎಂದು ಹೇಳಿದರು.

ಸರಕಾರದ ದೆಹಲಿ ವಿಶೇಷ‌ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಅವರು ಮಾತನಾಡಿ, "2017ರಲ್ಲಿ ಐದು ಸೇತುವೆ ಮಂಜೂರಾಗಿದ್ದು, ಆ ಸೇತುವೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿದ್ದಲ್ಲಿ ಪ್ರವಾಹ ಸಂದರ್ಭದಲ್ಲಿ ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.

ಇದೇ, ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್​, ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ,, ಮಹೇಂದ್ರ ತಮ್ಮಣ್ಣವರ, ಮಹಾಂತೇಶ ಕೌಜಲಗಿ, ಬುಡಾ ಅಧ್ಯಕ್ಷರಾದ ಲಕ್ಷ್ಮಣ ಚಿಂಗಲೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್​ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ವಯನಾಡು ಸಂತ್ರಸ್ತರಿಗೆ ಮಿಡಿದ ಮನ: ಬೆಂಗಳೂರು ಗುತ್ತಿಗೆದಾರರಿಂದ ನೆರವು, ತಿಂಗಳ ಸಂಬಳ ನೀಡಲು ಮುಂದಾದ ಸ್ಮಶಾನ ಕಾಯುವ ಸಿಬ್ಬಂದಿ - Wayanad Land Slide

ETV Bharat Logo

Copyright © 2024 Ushodaya Enterprises Pvt. Ltd., All Rights Reserved.