ETV Bharat / state

ಬೆಂಗಳೂರಲ್ಲಿ ವೆಸ್ಟ್ ಸಿಡ್ನಿ ಕೃಷಿ ವಿವಿ ಸ್ಥಾಪನೆ ಬಗ್ಗೆ ಆಸ್ಟ್ರೇಲಿಯಾ ನಿಯೋಗದಿಂದ ಚರ್ಚೆ - WEST SYDNEY AGRICULTURAL UNIVERSITY

ಆಸ್ಟ್ರೇಲಿಯಾದ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಭಾರತದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಉತ್ಸುಕವಾಗಿದೆ. ಈ ಸಂಬಂಧ ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಮೆಕ್‌ಗೀಚಿ ನೇತೃತ್ವದ ನಿಯೋಗ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಜೊತೆ ಚರ್ಚಿಸಿದೆ.

agricultural university
ಸಚಿವರೊಂದಿಗೆ ಆಸ್ಟ್ರೇಲಿಯಾದ ನಿಯೋಗ (ETV Bharat)
author img

By ETV Bharat Karnataka Team

Published : Nov 15, 2024, 10:31 PM IST

ಬೆಂಗಳೂರು: ರಾಜ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧ ಆಸ್ಟ್ರೇಲಿಯಾದ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಅಧಿಕಾರಿಗಳು, ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ ಮೆಕ್‌ಗೀಚಿ ನೇತೃತ್ವದ ನಿಯೋಗ ಶುಕ್ರವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ ಚರ್ಚಿಸಿತು.

ವಿಧಾನಸೌಧದಲ್ಲಿ ಭೇಟಿ ಮಾಡಿದ ನಿಯೋಗ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿತು. ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಭಾರತದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಉತ್ಸುಕವಾಗಿದ್ದು, ಬೆಂಗಳೂರು ನಗರದಲ್ಲಿ ಆರಂಭಿಸಲು ಉದ್ದೇಶಿಸಿದೆ ಎಂದು ಕುಲಪತಿಗಳಾದ ಜಾರ್ಜ್ ವಿಲಿಯಮ್ಸ್ ಅಭಿಪ್ರಾಯಪಟ್ಟರು.

ಕೃಷಿಯಲ್ಲಿ ನೀರು ನಿರ್ವಹಣೆ ತಾಂತ್ರಿಕತೆ ಅಳವಡಿಕೆ, ಆಹಾರ ಸಂಸ್ಮರಣೆ ಮುಂತಾದ ಮುಖ್ಯ ವಿಷಯಗಳನ್ನು ಈ ಕೃಷಿ ವಿಶ್ವವಿದ್ಯಾಲಯದಲ್ಲಿ ಆದ್ಯತೆ ನೀಡಲಾಗುತ್ತದೆ. ಸ್ವತಂತ್ರವಾಗಿ ವಿಶ್ವವಿದ್ಯಾಲಯ ಸ್ಥಾಪಿಸುವುದು ಅಥವಾ ಕರ್ನಾಟಕದಲ್ಲಿನ ವಿಶ್ವವಿದ್ಯಾಲಯಗಳ ಸಹಯೋಗದಲ್ಲೂ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವುದಾಗಿ ಜಾರ್ಜ್ ವಿಲಿಯಮ್ಸ್ ತಿಳಿಸಿದರು.

ವಿದ್ಯಾರ್ಥಿ ವೇತನ ನೀಡುವ ಉದ್ದೇಶವಿರುವುದಾಗಿ ತಿಳಿಸಿದ ಅವರು, ಈಗಾಗಲೇ ವಿಯಟ್ನಾಂ ಇಂಡೋನೇಷ್ಯಾದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಆರಂಭಿಸಿದೆ. ಯು.ಎ.ಇ.ಯಲ್ಲಿ ಸ್ಥಾಪನೆಗೆ ಮಾತುಕತೆ ನಡೆದಿದೆ. ಹಾಗಾಗಿ, ಕರ್ನಾಟಕದಲ್ಲೂ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಉತ್ಸುಕವಾಗಿದ್ದು, ನಮಗೆ 30 ಸಾವಿರ ಅಡಿ ಸ್ಥಳಾವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

agricultural university
ಸಚಿವರೊಂದಿಗೆ ಆಸ್ಟ್ರೇಲಿಯಾದ ನಿಯೋಗದ ಚರ್ಚೆ (ETV Bharat)

ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು. ನಮ್ಮ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಮೂಲ ಸೌಕರ್ಯಗಳನ್ನು ಬಳಸಿಕೊಂಡು ಕೃಷಿಗೆ ಸಂಬಂಧಪಟ್ಟಂತಹ ಹೊಸ ಆವಿಷ್ಕಾರದ ವಿಷಯಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಲ್ಲದೇ, ವಿದ್ಯಾರ್ಥಿಗಳ ಪರಸ್ಪರ ಕಲಿಕಾ ವಿನಿಮಯ ಕಾರ್ಯಕ್ರಮ ತರಬೇತಿ ಹಾಗೂ ಉಪನ್ಯಾಸಕರ ವಿನಿಮಯದ ಮೂಲಕ ಶೈಕ್ಷಣಿಕವಾಗಿ ಹೆಚ್ಚು ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕೃಷಿಗೆ ಸಂಬಂಧಪಟ್ಟ ಆಹಾರ ಸಂಸ್ಕರಣೆ, ಕೃಷಿಗೆ ಸಂಬಂಧಪಟ್ಟ ಉದ್ಯಮ, ತಾಂತ್ರಿಕರಣ ಬಳಕೆ ಸೇರಿದಂತೆ ಪ್ರಯೋಗಾಲಯಗಳನ್ನು ಸ್ಥಾಪಿಸುವಲ್ಲಿ ಆದ್ಯತೆ ನೀಡಬೇಕು ಎಂದು ಡಾ. ಶಾಲಿನಿ ರಜನೀಶ್ ಸಲಹೆ ನೀಡಿದರು. ಬೆಂಗಳೂರು ಹೊರತಾಗಿಯೂ ಧಾರವಾಡ ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಚಿಂತಿಸಬೇಕು ಮತ್ತು ನಮ್ಮ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಶೇಕಡ 50 ರಷ್ಟು ಅವಕಾಶ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್, ಸೇರಿದಂತೆ, ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ನಾಳೆ ಕೆಎಲ್ಇ ತಾಂತ್ರಿಕ ವಿವಿ ಘಟಿಕೋತ್ಸವ: ಮುರಗೇಶ ನಿರಾಣಿ ಹಾಗೂ ಅರವಿಂದ ಮೆಳ್ಳಿಗೇರಿಗೆ ಗೌರವ ಡಾಕ್ಟರೇಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.