ETV Bharat / state

ವಿಧಾನಸಭೆಯಲ್ಲಿ ಸದ್ದು ಮಾಡಿದ ಕೆರಗೋಡು ಹನುಮ ಧ್ವಜ ವಿಚಾರ - ಬೆಂಗಳೂರು

ವಿಧಾನಸಭೆಯಲ್ಲಿ ಕೆರಗೋಡು ಹನುಮ ಧ್ವಜ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದ ನಡೆಯಿತು. ​

Etv Bharatವಿಧಾನಸಭೆಯಲ್ಲಿ ಸದ್ದು ಮಾಡಿದ ಕೆರಗೋಡು ಹನುಮ ಧ್ವಜ ವಿಚಾರ
ವಿಧಾನಸಭೆಯಲ್ಲಿ ಸದ್ದು ಮಾಡಿದ ಕೆರಗೋಡು ಹನುಮ ಧ್ವಜ ವಿಚಾರ
author img

By ETV Bharat Karnataka Team

Published : Feb 14, 2024, 4:37 PM IST

ಬೆಂಗಳೂರು: ಮಂಡ್ಯ ಜಿಲ್ಲೆ ಕೆರಗೋಡುವಿನ ಹನುಮ ಧ್ವಜ, ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ, ಹಾನಗಲ್​ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ, ರಾಮಮಂದಿರ ವಿಚಾರ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ನಿಯಮ 69ರಡಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡುವಾಗ ಕೆರಗೋಡುವಿನ ಹನುಮ ಧ್ವಜದ ವಿಚಾರವನ್ನು ಪ್ರಸ್ತಾಪಿಸಲು ಮುಂದಾದರು. ಆಗ ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು, ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಹನುಮ ಧ್ವಜದ ವಿಚಾರವನ್ನು ಪ್ರಸ್ತಾಪಿಸಲು ಮುಂದಾಗುತ್ತಿದ್ದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ ರಾಷ್ಟ್ರೀಯ ಧ್ವಜವನ್ನು ತೆಗೆದುಹಾಕಿ ಎಂದು ಹೇಳುತ್ತೀರಾ ಎಂದು ಪ್ರಶ್ನಿಸಿದರು. ಮಂಡ್ಯ ಶಾಸಕ ರವಿಕುಮಾರ್ ಮಾತನಾಡಿ, ನಿಮ್ಮ ಹೋರಾಟ ರಾಷ್ಟ್ರಧ್ವಜದ ವಿರುದ್ಧವೇ ಎಂದು ಪ್ರಶ್ನಿಸಿದರು. ಶಾಸಕಿ ನಯನಾ ಮೋಟಮ್ಮ ಮಾತನಾಡಿ, ನಿಮಗೆ ರಾಷ್ಟ್ರಧ್ವಜ ಬೇಕೇ, ಹನುಮ ಧ್ವಜ ಬೇಕೇ ಎಂದು ಪ್ರಶ್ನಿಸಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಸ್ಪೀಕರ್ ಯು.ಟಿ. ಖಾದರ್ ಅವರು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜೈಲಿಗೆ ಹಾಕಿ. ಸರ್ಕಾರ ನಿಮ್ಮದೇ ಅಲ್ಲವೇ ಎಂದು ಹೇಳಿದರು.

ಈ ವೇಳೆ ಬಿಜೆಪಿ ಶಾಸಕ ಸುನಿಲ್‍ಕಮಾರ್ ಮಾತನಾಡಿ, ರಾಷ್ಟ್ರಧ್ವಜದ ಬಗ್ಗೆ ನೀವು (ಕಾಂಗ್ರೆಸ್) ತೋರುತ್ತಿರುವ ಕಳಕಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನವಾದಾಗ ಕಾಂಗ್ರೆಸ್‍ಗೆ ಈ ಕಳಕಳಿ ಇರಲಿಲ್ಲವೇ ಎಂದು ತಿರುಗೇಟು ನೀಡಿದರು. ಆಗ ಪರಸ್ಪರ ಆರೋಪ, ಪ್ರತ್ಯಾರೋಪ, ವಾಗ್ವಾದ ನಡೆದು ಸದನದಲ್ಲಿ ಗೊಂದಲ ಉಂಟಾಯಿತು. ಸಭಾಧ್ಯಕ್ಷರು ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರನ್ನು ಸಮಾಧಾನಪಡಿಸಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟರು.

ಮಾತು ಮುಂದುವರೆಸಿದ ಅಶೋಕ್ ಅವರು, ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು ಆಗಸ್ಟ್ 15 ರಂದು ರಾಷ್ಟ್ರಧ್ವಜ ಹಾಗೂ ರಾಜ್ಯೋತ್ಸವದಂದು ನಾಡಧ್ವಜವನ್ನು ಹಾರಿಸುತ್ತಾರೆ. 108 ಅಡಿ ಧ್ವಜ ಸ್ತಂಭವನ್ನು ಸುತ್ತಮುತ್ತಲು ಗ್ರಾಮದವರಿಂದ ಹಣ ಸಂಗ್ರಹಿಸಿ ನಿರ್ಮಿಸಿದ್ದಾರೆ. ಒಂದು ವೇಳೆ ಅಕ್ರಮವಾಗಿ ಧ್ವಜಸ್ತಂಭ ನಿಲ್ಲಿಸಿದ್ದರೆ ಏಕೆ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ಎಸ್ಕಾರ್ಟ್ ವಾಹನದ ಸ್ವಾರಸ್ಯದ ಪ್ರಸಂಗ: ಮಾತು ಮುಂದುವರೆಸಿದ ಅಶೋಕ್ ಅವರು, ಕೆರಗೋಡಿಗೆ ನಾನು ಹೋಗುವಾಗ ಎಸ್ಕಾರ್ಟ್ ವಾಹನ ಕೆಟ್ಟುಹೋಯಿತು ಎಂದು ಹೇಳಿದರು ಎಂದಾಗ, ಸ್ಪೀಕರ್ ಯು.ಟಿ.ಖಾದರ್ ಅವರು ಮಧ್ಯಪ್ರವೇಶಿಸಿ, ನನ್ನ ಎಸ್ಕಾರ್ಟ್ ಕೂಡ ನಿಂತುಹೋಗಿತ್ತು ಎಂದು ದನಿಗೂಡಿಸಿದರು. ಆಗ ಅಶೋಕ್‍ ಅವರು ಸಚಿವ ಚಲುವರಾಯಸ್ವಾಮಿ ಅವರ ಎಸ್ಕಾರ್ಟ್ ಕೂಡ ನಿಂತು ಹೋಗಿತ್ತು ಎಂದು ಅವರು ಹೇಳುತ್ತಿಲ್ಲ, ಸರ್ಕಾರವೇ ಕೆಟ್ಟು ಹೋಗಿದೆ ಎಂದು ಟೀಕಿಸಿದರು. ರಾಷ್ಟ್ರಧ್ವಜವನ್ನು ಧ್ವಜಸ್ತಂಭದಲ್ಲಿ ಮಧ್ಯಾಹ್ನ ಹಾರಿಸಿದ್ದಾರೆ. ನಾವು ರಾಷ್ಟ್ರಧ್ವಜಕ್ಕೆ ಗೌರವ ಕೊಡುತ್ತೇವೆ. ರಾಷ್ಟ್ರಧ್ವಜವನ್ನು ಹಾರಿಸಿದಾಗ ಶಿಸ್ತುಪಾಲನೆ ಮಾಡಿಲ್ಲ. ಅದನ್ನು ಹಾರಿಸುವಾಗ ಹೂ ಬಳಸಿಲ್ಲ, ಗೌರವ ಸೂಚಿಸಿಲ್ಲ. ಹನುಮ ಧ್ವಜ ಹಾರಿಸಿದವರಿಗೆ ನೋಟಿಸ್ ಕೊಟ್ಟಿಲ್ಲ. ರಾತ್ರಿ 3 ಗಂಟೆ ಸಮಯದಲ್ಲಿ ಹನುಮ ಧ್ವಜವನ್ನು ಇಳಿಸಿದ್ದಾರೆ ಎಂದು ಆರೋಪಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿರುವ ವೈಮನಸ್ಸಿಂದ ಹೀಗೆ ಮಾಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು ನಾವಲ್ಲಾ, ನೀವು. ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡಿಲ್ಲ. 35 ವರ್ಷದ ಹಿಂದೆ ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೆವು. ಕಾಶ್ಮೀರದ ಲಾಲ್‍ಚೌಕ್‍ನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೆವು. ಸ್ವಾತಂತ್ರ್ಯ ಬಂದ 75 ವರ್ಷದ ನಂತರ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೆವು. ನಾವೆಲ್ಲೂ ರಾಷ್ಟ್ರಧ್ವಜ ಇಳಿಸಿ ಎಂದು ಹೇಳಿಲ್ಲ. ಹನುಮನ, ರಾಮನ ಮೇಲಿನ ದ್ವೇಷಕ್ಕೆ ಈ ರೀತಿ ಮಾಡಿದ್ದಾರೆ ಎಂದು ಅಶೋಕ್​ ಆರೋಪಿಸಿದರು.

ಸಭಾಧ್ಯಕ್ಷರು ಅವಕಾಶ ಕೊಟ್ಟರೆ ವಾಸ್ತವ ಸ್ಥಿತಿ ಹೇಳುತ್ತೇನೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು. ಆ ಸಂದರ್ಭದಲ್ಲಿ ಸಭಾಧ್ಯಕ್ಷರು ಅವಕಾಶ ನೀಡದೇ ಇದ್ದಾಗ ಈ ವಿಚಾರಕ್ಕೆ ತೆರೆ ಬಿತ್ತು.

ಇದನ್ನೂ ಓದಿ: ರಾಜ್ಯದ ರೈತರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು; ಸ್ಪೀಕರ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.