ETV Bharat / state

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಕೆಶಿಗೆ ಬಿಗ್ ರಿಲೀಫ್ - DK Shivakumar Case - DK SHIVAKUMAR CASE

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ತೀರ್ಪು ನೀಡಿದೆ.

ಡಿಕೆಶಿ, ಹೈಕೋರ್ಟ್
ಡಿಕೆಶಿ, ಹೈಕೋರ್ಟ್ (ETV Bharat)
author img

By ETV Bharat Karnataka Team

Published : Aug 29, 2024, 5:45 PM IST

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ನೀಡಿದ್ದ ಸಮ್ಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿ ತೀರ್ಪು ನೀಡಿದೆ. ಈ ವಿಷಯವನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದು ಸೂಕ್ತವಾಗಿದೆ ಎಂದು ತಿಳಿಸಿದೆ.

ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಮತ್ತು ಸಿಬಿಐ ಹೈಕೋರ್ಟ್​ನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆ. ಸೋಮಶೇಖರ್​ ಮತ್ತು ನ್ಯಾಯಮೂರ್ತಿ ಉಮೇಶ್​ ಎಂ ಅಡಿಗ ಅವರಿದ್ದ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ.

ಅರ್ಜಿದಾರರು ಮತ್ತು ಪ್ರತಿವಾದಿಗಳ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಸಿಬಿಐ ಕೇಂದ್ರ ಸರ್ಕಾರದ ಅಡಿ ಕಾರ್ಯನಿರ್ವಹಿಸಲಿದೆ. ಇಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯಿದೆ ಮತ್ತು ಅಕ್ರಮ ಹಣ ವರ್ಗಾವಣೆ ಕಾಯಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಂವಿಧಾನಿಕ ಅಧಿಕಾರದ ಕುರಿತಾದ ನಿಬಂಧನೆಗಳಿಗೆ ಸಂಬಂಧಿಸಿದ ವಿಚಾರಗಳನ್ನು ಎತ್ತಲಾಗಿದೆ. ಪಶ್ಚಿಮ ಬಂಗಾಳ ವರ್ಸಸ್ ಭಾರತ ಸರ್ಕಾರ ಪ್ರಕರಣದ ತೀರ್ಪಿನ ಪ್ರಕಾರ ಹಾಲಿ ಅರ್ಜಿಗಳು ಸಂವಿಧಾನದ 131ನೇ ವಿಧಿಯಡಿ ಬರಲಿವೆ. ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದಕ್ಕೆ ಸಂಬಂಧಿಸಿದ ಕಾನೂನಿನ ವಿಚಾರವನ್ನು ಒಳಗೊಂಡಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದೆ. ಇಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿರುವುರಿಂದ ಇದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದು ಸೂಕ್ತವಾಗಿದೆ. ಹೀಗಾಗಿ, ಅರ್ಜಿಗಳನ್ನು ವಜಾ ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿತು. ಆದಾಗ್ಯೂ, ಅರ್ಜಿದಾರರು ಸುಪ್ರೀಂ ಕೋರ್ಟ್​ನಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

ಪ್ರಕರಣದ ಹಿನ್ನೆಲೆ: ಡಿ.ಕೆ. ಶಿವಕುಮಾರ್ ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಡಿಕಿಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್ 3ರಂದು ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ತನಿಖೆ ನಡೆಸಲು ಸಿಬಿಐಗೆ ಹಿಂದಿನ ರಾಜ್ಯ ಬಿಜೆಪಿ ಸರ್ಕಾರವು ಅನುಮತಿ ನೀಡಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಡಿಕೆಶಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್: ಆ.31ಕ್ಕೆ ವಿಚಾರಣೆ ಮುಂದೂಡಿಕೆ, ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ - Muda Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.