ETV Bharat / state

'ನಮ್ಮ ಮೆಟ್ರೋ' ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ - Namma Metro Green Line

ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಆಗಸ್ಟ್ 20, 23, 30ರಂದು ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಇಡೀ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ.

Namma Metro
ನಮ್ಮ ಮೆಟ್ರೋ (ETV Bharat)
author img

By ETV Bharat Karnataka Team

Published : Aug 19, 2024, 8:40 PM IST

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲದಿನ ಸೇವೆಯನ್ನು ಸಂಪೂರ್ಣ ಸ್ಥಗಿತಗಳಿಸಲಾಗುತ್ತಿದ್ದು, ಕೆಲ ನಿಲ್ದಾಣಗಳಲ್ಲಿ ಸೇವೆ ವ್ಯತ್ಯಯವಾಗಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ಸಂಸ್ಥೆ ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಗಳನ್ನು ನಡೆಸಲು ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಯಲ್ಲಿ ಬದಲಾವಣೆಯಾಗಲಿದೆ ಎಂದು ತಿಳಿಸಿದೆ.

ಆಗಸ್ಟ್ 20, 23, 30 ರಂದು ಹಾಗೂ ಸೆಪ್ಟೆಂಬರ್ 6 ಮತ್ತು 11 ರಂದು ಇಡೀ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆಗಸ್ಟ್ 24ರಂದು ಕೊನೆಯ ರೈಲು ಸೇವೆ ರಾತ್ರಿ 11.5ರ ಬದಲಾಗಿ 10 ಗಂಟೆಗೆ ಇರಲಿದೆ. ಆಗಸ್ಟ್ 25 ರಂದು ಮೊದಲ ರೈಲು ಸೇವೆ ಬೆಳಗ್ಗೆ 5 ಗಂಟೆಯ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಇನ್ನು ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆವರೆಗೆ ಆಗಸ್ಟ್ 24ರಂದು ಕೊನೆಯ ರೈಲು ಸೇವೆ 11.12ಕ್ಕೆ ಇರಲಿದೆ. ಆಗಸ್ಟ್ 25 ರಂದು ಮೊದಲ ರೈಲು ಸೇವೆ ಬೆಳಗ್ಗೆ 5ಕ್ಕೆ ಪ್ರಾರಂಭವಾಗಲಿದೆ. ಉಳಿದಂತೆ ನೇರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಮಾಹಿತಿ ನೀಡಿದೆ.

ನಮ್ಮ ಮೆಟ್ರೋ ಗ್ರೀನ್ ಲೇನ್ ವಿಸ್ತರಣಾ ಮಾರ್ಗದ ಪ್ರಾಯೋಗಿಕ ಸಂಚಾರ ಯಶಸ್ವಿ: ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರವರೆಗೆ ವಿಸ್ತರಣೆಯಾಗಿದೆ. ಭಾನುವಾರ ಬೆಳಗ್ಗೆ 6 ಬೋಗಿಗಳ ರೈಲು ನಿಲ್ದಾಣಕ್ಕೆ ಆಗಮಿಸಿ ಸಿಗ್ನಲ್ ಪರೀಕ್ಷೆ ಕೈಗೊಂಡಿದ್ದು, ಸದ್ಯ ಕಾಮಗಾರಿ ಬಹುತೇಕ ಪುರ್ಣಗೊಂಡಿರುವ ಹಿನ್ನೆಲೆ ಪ್ರಾಯೋಗಿಕ ಸಂಚಾರ ನಡೆಸಲಾಗಿದೆ.

ರೀಚ್ 3ಸಿ ವಿಸ್ತೃತ ಮಾರ್ಗದ ಮಾದಾವರ ಮತ್ತು ನಾಗಸಂದ್ರ ನಡುವಿನ ಮೊದಲ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತಿದೆ. 3.14 ಕಿ.ಮೀ ನಡುವೆ 6 ಬೋಗಿಗಳ ಮೆಟ್ರೋ ರೈಲು, ಕನಿಷ್ಠ 5 ಕಿ.ಮೀ ವೇಗದಿಂದ ಗರಿಷ್ಠ 35 ಕಿ.ಮೀ ವೇಗದಲ್ಲಿ ಚಲಿಸಿ ಪರೀಕ್ಷೆ ನಡೆಸಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ: ನಮ್ಮ ಮೆಟ್ರೋ ಗ್ರೀನ್ ಲೇನ್ ವಿಸ್ತರಣಾ ಮಾರ್ಗದ ಪ್ರಾಯೋಗಿಕ ಸಂಚಾರ ಯಶಸ್ವಿ - Namma Metro Green Line

ETV Bharat Logo

Copyright © 2024 Ushodaya Enterprises Pvt. Ltd., All Rights Reserved.