ETV Bharat / state

ಯೋಗೇಶ್ವರ್, ರಘುನಂದನ್ ರಾಮಣ್ಣ ನಡುವೆ ಯಶಸ್ವಿ ಸಂಧಾನ ಮಾಡಿಸಿದ ಡಿಕೆ ಸಹೋದರರು - YOGESHWAR AND RAGHUNANDAN RAMANNA

ಇಬ್ಬರನ್ನೂ ತಮ್ಮ ಸದಾಶಿವನಗರದ ಮನೆಗೆ ಕರೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್​​ ರಘುನಂದನ್ ರಾಮಣ್ಣ ಮತ್ತು ಸಿ.ಪಿ.ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.

DK brothers successfully negotiate between Yogeshwar and Raghunandan Ramanna
ಯೋಗೇಶ್ವರ್ ಮತ್ತು ರಘುನಂದನ್ ರಾಮಣ್ಣ ನಡುವೆ ಯಶಸ್ವಿ ಸಂಧಾನ ನಡೆಸಿದ ಡಿಕೆ ಸಹೋದರರು (ETV Bharat)
author img

By ETV Bharat Karnataka Team

Published : Oct 29, 2024, 12:44 PM IST

ಬೆಂಗಳೂರು: ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು - ಮೈಸೂರು ಇನ್ಫ್ರಾಸ್ಟ್ರಕ್ಚರ್​ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಕರೆಸಿ ಡಿ.ಕೆ.ಸುರೇಶ್ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಿದರು. ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು. ಯೋಗೇಶ್ವರ್ ಅವರ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ಅವರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು. ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್​​​ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೇ ತಾಲೂಕಿನಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 15 ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು.

ಇದಲ್ಲದೇ ಕ್ಷೇತ್ರಕ್ಕೆ ಸರಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳು ಬರುವಲ್ಲಿಯೂ ರಘುನಂದನ್ ರಾಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು. ಈಗ ಯೋಗೇಶ್ವರ್ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: ಶಾಸಕರು, ಮಂತ್ರಿಗಳೊಂದಿಗೆ ವಿಡಿಯೋ ಸಂವಾದ: ಒಗ್ಗಟ್ಟಿನಿಂದ ಕೆಲಸ ಮಾಡಿ, ಮೂರೂ ಕ್ಷೇತ್ರ ಗೆಲ್ಲುವಂತೆ ಸಿಎಂ-ಡಿಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.