ETV Bharat / state

ನಾನು ಎಷ್ಟು ದಿನ ಅಧ್ಯಕ್ಷನಾಗಿರುವೆ ಎಂಬುದು ಮುಖ್ಯವಲ್ಲ: ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ ; ಕಾರ್ಯಕರ್ತರಿಗೆ ಡಿಕೆಶಿ ಕರೆ - Karnataka Local Body Elections

ನಾನು ಎಷ್ಟು ದಿನ ಕೆಪಿಸಿಸಿ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ಧಾರೆ.

DK Shivakumar
ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : May 21, 2024, 4:18 PM IST

ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದವರು. ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ ಎಂದರು.

ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಿ: ಪಕ್ಷದ ಕೆಲಸ ಮೊದಲು ಮಾಡಬೇಕು. ಕೇವಲ ಗುರುತಿನ ಚೀಟಿಗೋಸ್ಕರ ಬರುವವರು ಮನೆಯಲ್ಲಿಯೇ ಇರಿ. ಖಾದಿ ಬಟ್ಟೆ ಹಾಕಿಕೊಂಡು, ಕಾರು ಇಟ್ಟುಕೊಂಡು ಎಂಎಲ್​ಸಿ ಮಾಡಿ, ಅಧ್ಯಕ್ಷನನ್ನಾಗಿ ಮಾಡಿ ಎಂದರೆ, ಅದು ಇಲ್ಲಿ ನಡೆಯುವುದಿಲ್ಲ. ಕೆಲಸ ಮಾಡುವವರಿಗೆ ಆದ್ಯತೆ. ನಿಮ್ಮ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಬೇಕು. ನಿಮ್ಮ ಬೂತ್​ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲು ಆಗದಿದ್ದರೆ ನಾವು ಬೇರೆಯವರನ್ನು ತಯಾರು ಮಾಡುತ್ತೇವೆ ಎಂದು ಸಂದೇಶ ರವಾನಿಸಿದರು.

ನಾನು ಎಷ್ಟು ದಿನ ಅಧ್ಯಕ್ಷನಾಗಿ ಇರುತ್ತೇನೆ ಎಂಬುದು ಮುಖ್ಯವಲ್ಲ. ನಾನು ಅಧಿಕಾರ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ. ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ. ನೀವೆಲ್ಲರೂ ಅದಕ್ಕೆ ಸಿದ್ಧರಾಗಬೇಕು ಎಂದು ತಿಳಿಸಿದರು.

ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಪ್ರಾಣತ್ಯಾಗ ಮಾಡಿದ ಮಹಾನ್ ನಾಯಕ ರಾಜೀವ್ ಗಾಂಧಿ. ಸಾವಿರಾರು ಯುವ ನಾಯಕರನ್ನು ಸಮಾಜಕ್ಕೆ ಕೊಡುಗೆ ಕೊಟ್ಟ, ಯುವ, ವಿದ್ಯಾರ್ಥಿ ನಾಯಕತ್ವವನ್ನು ಬೆಳೆಸಿದವರು ಅವರು. ರಾಜೀವ್ ಗಾಂಧಿ ಪ್ರಧಾನಿಗಳಾಗಿದ್ದಾಗ ಕೆ.ಎಚ್.ಪಾಟೀಲರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಈ ವೇಳೆ, ಸುಮಾರು 70ಕ್ಕೂ ಹೆಚ್ಚು ಯುವ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು. ರಾಜೀವ್ ಗಾಂಧಿ ನನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು, ನಂತರವೂ ನನ್ನ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎಂದು ನೆನಪಿಸಿದರು.

ಸಚಿವ ಸಂಪುಟದಲ್ಲಿ ಎಲ್ಲ ಸಮುದಾಯಗಳ ಯುವ ನಾಯಕರಿಗೆ ಸ್ಥಾನ ನೀಡಿ ಎರಡನೇ ಸಾಲಿನ ನಾಯಕತ್ವ ತಯಾರು ಮಾಡಬೇಕು ಎಂದು ಬಂಗಾರಪ್ಪ ಅವರಿಗೆ ರಾಜೀವ್ ಗಾಂಧಿ ಸೂಚನೆ ನೀಡಿದ್ದರು. ಆದ ಕಾರಣ ನಾನು ಮೊದಲ ಬಾರಿಗೆ ಮಂತ್ರಿಯಾದೆ. ನಾನು, ಸಲೀಂ ಅಹಮ್ಮದ್​, ರತ್ನಪ್ರಭ ಅವರು ಸೇರಿದಂತೆ ಅನೇಕರನ್ನು ಸುಮಾರು 180 ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದ ಅಂತಾರಾಷ್ಟ್ರೀಯ ಯುವ ಸಮ್ಮೇಳನಕ್ಕೆ ಕಳುಹಿಸಿದ್ದರು. ಕಾಂಗ್ರೆಸ್ ಪಕ್ಷದ ಯುವಕರಲ್ಲಿ ನಾಯಕತ್ವ ಗುಣ ಬೆಳೆಯಬೇಕು ಎಂದು ಒತ್ತು ನೀಡುತ್ತಿದ್ದರು. ಒಂದು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ನನ್ನಲ್ಲಿ, ಆ ಸಮ್ಮೇಳನದಲ್ಲಿ ಭಾಗವಹಿಸಿದ ನಂತರ ಮಂತ್ರಿಯಾಗಬಹುದು ಎನ್ನುವ ಭರವಸೆ ಮೂಡಿತ್ತು ಎಂದರು.

ಮೊದಲ ಸಹಿ ಹಾಕಿದ್ದು ರಾಜೀವ್ ಗಾಂಧಿ ಪ್ರತಿಮೆಗೆ: ರಾಜೀವ್ ಗಾಂಧಿ ಅವರ ಬಗ್ಗೆ ಇಡೀ ದಿನ ಮಾತನಾಡಬಹುದು. ನಾನು ಡಿಸಿಎಂ ಆದ ತಕ್ಷಣ ರಾಜೀವ್ ಗಾಂಧಿ ಅವರ ಹಳೆಯ ಪ್ರತಿಮೆ ಬದಲು ಮಾಡಿ ಹೊಸ ಪ್ರತಿಮೆ ಸ್ಥಾಪನೆಗೆ ಮೊದಲು ಸಹಿ ಮಾಡಿದೆ. ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ಯುವ ಶಕ್ತಿ ಕೇಂದ್ರಗಳನ್ನು ಈ ಹಿಂದೆ ಸ್ಥಾಪನೆ ಮಾಡಲಾಗಿತ್ತು. ಪ್ರಸ್ಥುತ ಈ ಕೇಂದ್ರಗಳು ಕಾರಣಾಂತರಗಳಿಂದ ಸೊರಗಿವೆ. ಇವನ್ನು ಪುನರುಜ್ಜೀವನಗೊಳಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಅವರೇ ಹೀನಾಯ ಕೆಲಸ ಮಾಡಿರಬೇಕು: ಇದೇ ವೇಳೆ ಟೆಲಿಫೋನ್ ಟ್ಯಾಪಿಂಗ್ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​.ಡಿ.ಕುಮಾರಸ್ವಾಮಿ​ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಅವರಲ್ಲಿ ಏನೋ ಸಮಸ್ಯೆ ಇರಬೇಕು. ಅವರು ಹಿಂದೆ ಇಂತಹ ಹೀನಾಯ ಕೆಲಸಗಳನ್ನು ಮಾಡಿರಬೇಕು. ಅದಕ್ಕಾಗಿ ಅದನ್ನು ಬೇರೆಯವರ ಮೇಲೆ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯವರಿಗೆ 7 ತಿಂಗಳು ಬೇಕಾಯಿತು. ಇದು ಬಿಜೆಪಿಯ ಅಸಮರ್ಥತೆಗೆ ಸಾಕ್ಷಿ. ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಶೂನ್ಯ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ: ಮತ್ತೆ ವಿದ್ಯಾರ್ಥಿನಿಯರೇ ಮೇಲುಗೈ - Second PUC Result

ಕಾಂಗ್ರೆಸ್ ಭವನದದಲ್ಲಿ ಪ್ರತಿಕ್ರಿಯೆ: ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ ಕೈ ಹೊಸಕಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡುತ್ತಾ, ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.